ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೇಖಕಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಯುವ ನಟಿ ಅರೆಸ್ಟ್..!

Twitter
Facebook
LinkedIn
WhatsApp
ಲೇಖಕಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಯುವ ನಟಿ ಅರೆಸ್ಟ್..!

ಲ್ಲದ ಕಾರಣಗಳಿಂದಾಗಿ ಇತ್ತೀಚೆಗೆ ನಟಿಯರು ಸುದ್ದಿ ಆಗುತ್ತಿದ್ದಾರೆ. ಜೊತೆಗೆ ಜೈಲು ಸೇರುತ್ತಿದ್ದಾರೆ. ಈ ಪಟ್ಟಿಗೆ ಹೊಸ ಸೇರ್ಪಡೆ ಒರಿಯಾ ನಟಿ ಮೌಶುಮಿ ನಾಯಕ್ (Moushumi Naik). ಲೇಖಕಿಯೊಬ್ಬರಿಗೆ ಬ್ಲ್ಯಾಕ್ ಮೇಲ್ (Black mail) ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ನಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕ ಪ್ರತಿಷ್ಠೆಗೆ ಧಕ್ಕೆ ತಂದಿದ್ದನ್ನು ಸ್ವತಃ ನಟಿ ಒಪ್ಪಿಕೊಂಡಿರುವುದಾಗಿಯೂ ಪೊಲೀಸರು ತಿಳಿಸಿದ್ದಾರೆ.

ಒರಿಯಾ ಸಿನಿಮಾ ರಂಗದಲ್ಲಿ ಅತ್ಯಂತ ಜನಪ್ರಿಯ ನಟಿ ಮೌಶುಮಿ ನಾಯಕ್, ದುಡ್ಡಿನ ವಿಚಾರದಲ್ಲಿ ಲೇಖಕಿ ಬನಸ್ಮಿತಾ (Banasmita) ಅವರ ಮಾನಹಾನಿ ಮಾಡಿದ್ದರಂತೆ. ಜೊತೆಗೆ ಲೇಖಕಿ ಪತಿಯ ವಿರುದ್ಧ ಚಂದಕಾ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ಕೂಡ ನೀಡಿದ್ದರಂತೆ. ಆನಂತರ ಲೇಖಕಿ ಹಾಗೂ ನಟಿ ರಾಜಿ ಮಾಡಿಕೊಂಡಿದ್ದಾರೆ. ಇದಾದ ನಂತರವೂ ನಿರಂತರವಾಗಿ ನಟಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಲೇಖಕಿ ದೂರು ನೀಡಿದ್ದರು.

ಲೇಖಕಿ ನೀಡಿದ ದೂರಿನ ಆಧಾರದಲ್ಲಿ ಭುವನೇಶ್ವರದ ಇನ್ಫೋಸಿಟಿ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ. ಸೆಕ್ಸನ್ 385, 294, 506 ಹಾಗೂ 507ರ ಅಡಿಯಲ್ಲಿ ನಟಿಯ ಬಂಧಿಸಲಾಗಿದೆ ಎಂದು ಡಿಸಿಪಿ ಕಚೇರಿಯು ತಿಳಿಸಿದೆ.

ರ‍್ಯಾಪರ್ ಜೊತೆ ‘ಸೀತಾರಾಮಂ’ ನಟಿ ಡೇಟಿಂಗ್?

ಸೌತ್ ಬ್ಯೂಟಿ ಮೃಣಾಲ್ ಠಾಕೂರ್ (Mrunal Thakur) ಅವರು ಇತ್ತೀಚಿನ ದಿನಗಳಲ್ಲಿ ಸಿನಿಮಾಗಿಂತ ಡೇಟಿಂಗ್ ವಿಷ್ಯವಾಗಿಯೇ ಹೆಚ್ಚೆಚ್ಚು ಸುದ್ದಿಯಲ್ಲಿದ್ದಾರೆ. ರ‍್ಯಾಪರ್ ಬಾದಶಾ (Rapper Badshash) ಜೊತೆ ಮೃಣಾಲ್ ಕದ್ದು ಮುಚ್ಚಿ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಇದೀಗ ಗಾಸಿಪ್ ಪ್ರಿಯರ ಚರ್ಚೆಗೆ ಕಾರಣವಾಗಿದೆ.

ದೀಪಾವಳಿ ಹಬ್ಬದಂದು ಫ್ಯಾನ್ಸ್‌ಗೆ ಮೃಣಾಲ್‌ ಬಗ್ಗೆ ಸಿಹಿಸುದ್ದಿ ಸಿಕ್ಕಿದೆ. ಬಾಲಿವುಡ್ ಕಾರ್ಯಕ್ರಮವೊಂದರಲ್ಲಿ ಗೆಳೆಯನ ಜೊತೆ ಕೈ ಕೈ ಹಿಡಿದು ಮೃಣಾಲ್ ಕಾಣಿಸಿಕೊಂಡಿದ್ದಾರೆ. ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ, ತಮ್ಮ ನಿವಾಸದಲ್ಲಿ ದೀಪಾವಳಿ ಹಬ್ಬಕ್ಕೆ ನಟ-ನಟಿಯರಿಗೆ ಆಹ್ವಾನ ನೀಡಿದ್ದರು.

ಆಗ ಮೃಣಾಲ್ ಜೊತೆ ರ‍್ಯಾಪರ್ ಬಾದಶಾ ಕೂಡ ಆಗಮಿಸಿದ್ದರು. ಶಿಲ್ಪಾ ಮನೆಯ ಹಬ್ಬದ ಸಂಭ್ರಮದಲ್ಲಿ ಭಾಗಿಯಾದ ನಂತರ ಪಾರ್ಟಿ ಮುಗಿಸಿ ತೆರಳುವಾಗ ಇಬ್ಬರು ಪರಸ್ಪರ ಕೈ ಹಿಡಿದುಕೊಂಡು ಓಡಾಡಿದ್ದಾರೆ. ಈ ಬೆನ್ನಲ್ಲೇ ಇಬ್ಬರೂ ಡೇಟಿಂಗ್ ಮಾಡ್ತಿದ್ದಾರೆ ಎಂದೇ ಸುದ್ದಿ ಹಬ್ಬಿದೆ.‌

ಶಿಲ್ಪಾ ಶೆಟ್ಟಿ (Shilpa Shetty) ಜೊತೆಯಿರುವ ಬಾದಶಾ ಫೋಟೋವನ್ನ ಸೋಷಿಯಲ್ ಮೀಡಿಯಾದಲ್ಲಿ ನಟಿ ಮೃಣಾಲ್ ಶೇರ್ ಮಾಡಿದ್ದಾರೆ. ಈ ಸುದ್ದಿ ಅದೆಷ್ಟರ ಮಟ್ಟಿಗೆ ನಿಜ? ಎಂಬುದನ್ನ ಕಾದುನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ