ಡೆಂಗ್ಯೂ ಜ್ವರದಿಂದ ಕಡಬದಲ್ಲಿ ಯುವಕ ಸಾವು...!
Twitter
Facebook
LinkedIn
WhatsApp
ಕಡಬ ಜನವರಿ 31: ಡೆಂಗ್ಯೂ ಜ್ವರಕ್ಕೆ ಯುವಕನೊರ್ವ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ.
ಮೃತರನ್ನು ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು (31) ಎಂದು ಗುರುತಿಸಲಾಗಿದೆ. ಶಿಜು ರವಿವಾರದಂದು ಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಕಡಬದ ಕ್ಲಿನಿಕ್ ವೊಂದರಲ್ಲಿ ಚಿಕಿತ್ಸೆ ಪಡೆದು ಜ್ವರ ಪರೀಕ್ಷೆ ಮಾಡಿದ್ದರು. ಈ ವೇಳೆ ಡೆಂಗ್ಯೂ ಜ್ವರ ಪತ್ತೆಯಾಗಿದೆ. ನಂತರ ಮನೆಗೆ ಬಂದ ಶಿಜು ಅವರಿಗೆ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಿಕೊಡಲಾಗಿದ್ದು, ಆದರೆ ಮಂಗಳೂರಿನ ಆಸ್ಪತ್ರೆಗೆ ತಲುಪಿದ ವೇಳೆಗಾಗಲೇ ಶಿಜು ಅವರು ಮೃತಪಟ್ಟಿದ್ದರು. ಶಿಜು ಅವರು ಮಲಂಕರ ಕ್ಯಾಥೋಲಿಕ್ ಚರ್ಚ್ ಪುತ್ತೂರು ಧರ್ಮ ಪ್ರಾಂತ್ಯದ ರೆ.ಫಾ. ಥಾಮಸ್ ಅವರ ಸಹೋದರ. ಶಿಜು ಅವರು ತಾಯಿ, ಪತ್ನಿ, ಸಹೋದರಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.