ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ನೇಹಿತರ ಜೊತೆ ಕೆರೆಗೆ ಇಳಿದಿದ್ದ ಯುವಕ ಈಜು ಬಾರದೇ ಮುಳುಗಿ ಸಾವು

Twitter
Facebook
LinkedIn
WhatsApp
ಸ್ನೇಹಿತರ ಜೊತೆ ಕೆರೆಗೆ ಇಳಿದಿದ್ದ ಯುವಕ ಈಜು ಬಾರದೇ ಮುಳುಗಿ ಸಾವು

ಚಿಕ್ಕಮಗಳೂರು: ಸ್ನೇಹಿತರ ಜೊತೆ ಕೆರೆಗೆ ಇಳಿದಿದ್ದ ಯುವಕ ಈಜು ಬಾರದೇ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ನಲ್ಲೂರು (Nallur) ಗ್ರಾಮದಲ್ಲಿ ನಡೆದಿದೆ.

ಮೃತನನ್ನು ನಗರದ ಕೋಟೆ ನಿವಾಸಿಯಾದ ಹರ್ಷ (20) ಎಂದು ಗುರುತಿಸಲಾಗಿದೆ. ಮೃತ ಯುವಕ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದ. ಹರ್ಷ ತನ್ನ ಸ್ನೇಹಿತರ ಜೊತೆ ಕೆರೆಗೆ ತೆರಳಿದ್ದ. ಈ ವೇಳೆ ಈಜು ಬಾರದೇ ಹರ್ಷ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಈ ವೇಳೆ ಜೊತೆಯಲ್ಲಿದ್ದ ಸ್ನೇಹಿತರು ಹರ್ಷನನ್ನು ಉಳಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಿಲ್ಲ. ಸ್ನೇಹಿತರ ಕಣ್ಣೆದುರೇ ಹರ್ಷ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ನಂತರ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ವಯಸ್ಸಿಗೆ ಬಂದಿದ್ದ, ಎದೆಮಟ್ಟಕ್ಕೆ ಬೆಳೆದ ಮಗನ ಶವ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ಸಂಬಂಧ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಕೆರೆಯಲ್ಲಿ ಕಳೆದ 15 ದಿನಗಳ ಹಿಂದಷ್ಟೇ ಕೂಲಿ ಕೆಲಸದ ಜೊತೆ ಉಪ ವೃತ್ತಿಯಾಗಿ ಡ್ಯಾನ್ಸ್ ಮಾಸ್ಟರ್ ಕೆಲಸ ಮಾಡುತ್ತಿದ್ದ ಸಂತೋಷ್ ಎಂಬ ಯುವಕ ಕೂಡ ಕುಡಿದ ಮತ್ತಿನಲ್ಲಿ ಇದೇ ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ