ಗುರುವಾರ, ಮೇ 2, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

AAP ಈಗ ರಾಷ್ಟ್ರೀಯ ಪಕ್ಷ; ಆದೇಶ ಹೊರಡಿಸಿದ ಕೇಂದ್ರ ಚುನಾವಣಾ ಆಯೋಗ

Twitter
Facebook
LinkedIn
WhatsApp

ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ (Aam Aadmi Party) ರಾಷ್ಟ್ರೀಯ ಪಕ್ಷ ಮಾನ್ಯತೆ ನೀಡಿ ಕೇಂದ್ರ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ. ಇದೇ ವೇಳೆ ತೃಣ ಮೂಲ ಕಾಂಗ್ರೆಸ್ (TMC) ಹಾಗೂ ಭಾರತೀಯ ಕಮ್ಯುನಿಸ್ಟ್ ಪಕ್ಷ (CPI) ರಾಷ್ಟ್ರೀಯ ಪಕ್ಷಗಳು ಅಲ್ಲ ಎಂದು ಹೇಳಿದೆ. ದೆಹಲಿ, ಪಂಜಾಬ್ ನಂತರ ಗುಜರಾತ್​ ರಾಜ್ಯದಲ್ಲೂ ಕೆಲವೊಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಷ್ಟ್ರೀಯ ಸ್ಥಾನಮಾನ ಪಡೆಯುವ ಅರ್ಹತೆಯನ್ನು ಗಿಟ್ಟಿಸಿಕೊಂಡಿತ್ತು. ಸದ್ಯ ಚುನಾವಣಾ ಆಯೋಗವು ಆಪ್ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನ ನೀಡಿದೆ. ಅದರಂತೆ ಕೇವಲ 10 ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ.

ತಮ್ಮ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನ ಸಿಕ್ಕಿದ ಬಗ್ಗೆ ಟ್ವೀಟ್ ಮಾಡಿದ ಪಕ್ಷದ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, “ಇಷ್ಟು ಕಡಿಮೆ ಅವಧಿಯಲ್ಲಿ ರಾಷ್ಟ್ರೀಯ ಪಕ್ಷವೇ? ಇದು ಪವಾಡಕ್ಕಿಂತ ಕಡಿಮೆಯಿಲ್ಲ. ಎಲ್ಲರಿಗೂ ಅಭಿನಂದನೆಗಳು, ದೇಶದ ಲಕ್ಷಾಂತರ ಜನರು ನಮ್ಮನ್ನು ಈ ಸ್ಥಾನಕ್ಕೆ ತಂದಿದ್ದಾರೆ. ಜನರು ನಮ್ಮಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದಾರೆ. ಇಂದು ಜನರು ನಮಗೆ ಈ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ. ಈ ಜವಾಬ್ದಾರಿಯನ್ನು ಚೆನ್ನಾಗಿ ಪೂರೈಸಲು ನಮ್ಮನ್ನು ಆಶೀರ್ವದಿಸಿ” ಎಂದು ಹೇಳಿದ್ದಾರೆ.

10 ವರ್ಷಗಳ ಹಿಂದೆ ಎಎಪಿ ರಚನೆಯಾಗಿ ಭರ್ಜರಿ ಉಚಿತ ಕೊಡುಗೆಗಳ ಘೋಷಣೆಗಳೊಂದಿಗೆ ದೆಹಲಿಯಲ್ಲಿ ಅಧಿಕಾರಕ್ಕೇರಿದ್ದ ಆಪ್ ಪಕ್ಷ, ನಂತರ ಮತ್ತೊಮ್ಮೆ ಅಧಿಕಾರ ಹಿಡಿಯಿತು. ಕಾಂಗ್ರೆಸ್ ಆಡಳಿತವಿದ್ದ ಪಂಜಾಬ್ ರಾಜ್ಯದಲ್ಲಿ ಪ್ರಚಂಡ ಗೆಲುವು ದಾಖಲಿಸಿ ಸರ್ಕಾರ ರಚನೆ ಮಾಡಿತ್ತು. ನಂತರ ಗೋವಾ ಟಾರ್ಗೆಟ್ ಮಾಡಿದ್ದ ಆಪ್, ಎರಡು ಸ್ಥಾನಗಳನ್ನು ಗೆದ್ದುಕೊಂಡಿದೆ. ಬಳಿಕ ಗುಜರಾತ್​ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಪ್ ಪಕ್ಷವು ಐದು ಸ್ಥಾನಗಳನ್ನು ಗೆದ್ದುಗೊಳ್ಳುವಲ್ಲಿ ಯಶಸ್ವಿಯಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ವಾರಗಳು ಬಾಕಿ ಇರುವಾಗ, ಆಮ್ ಆದ್ಮಿ ಪಕ್ಷವು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ರಾಜ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪಕ್ಷದಿಂದ ಪದೇ ಪದೇ ವಿನಂತಿ ಮತ್ತು ಪ್ರಾತಿನಿಧ್ಯಗಳ ಹೊರತಾಗಿಯೂ ಇಸಿಐ ಎಎಪಿಯನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ವಿಳಂಬ ಮಾಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಆಮ್ ಆದ್ಮಿ ಪಕ್ಷದ ಮನವಿ ಪರಿಶೀಲಿಸಿ ಏ.13ರೊಳಗೆ ಈ ಬಗ್ಗೆ ನಿರ್ಧರಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು.

ಯಾವುದೇ ಒಂದು ಪಕ್ಷ ರಾಷ್ಟ್ರೀಯ ಪಕ್ಷವಾಗಲು ಮೂರು ಷರತ್ತುಗಳನ್ನು ಚುನಾವಣಾ ಆಯೋಗ ಮುಂದಿಡುತ್ತದೆ.  ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಗಳಿಸಲು, ಒಂದು ರಾಜಕೀಯ ಪಕ್ಷವು ಕನಿಷ್ಟ ನಾಲ್ಕು ರಾಜ್ಯಗಳಲ್ಲಿ ಗುರುತಿಸಲ್ಪಡಬೇಕು. ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ಕನಿಷ್ಠ ಎರಡು ಸ್ಥಾನಗಳನ್ನು ಮತ್ತು ಶೇ. 6 ರಷ್ಟು ಮತಗಳನ್ನು ಆಯಾ ಪಕ್ಷವು ಪಡೆಯಬೇಕು.  ಶೇ. 3ರಷ್ಟು ವಿಧಾನಸಭಾ ಸ್ಥಾನಗಳನ್ನು ಅಥವಾ 3 ವಿಧಾನಸಭಾ ಸ್ಥಾನಗಳಲ್ಲಿ ಯಾವುದು ಹೆಚ್ಚೋ ಅದನ್ನು ಗೆಲ್ಲಬೇಕು. ಮಾತ್ರವಲ್ಲದೆ, ಶೇ. 8ಕ್ಕಿಂತ ಹೆಚ್ಚಿನ ಮತಗಳನ್ನು ಪಡೆಯಬೇಕು. ಆಗ ಮಾತ್ರ ಪಕ್ಷವೊಂದು ರಾಷ್ಟ್ರೀಯ ಸ್ಥಾನಮಾನವನ್ನು ಪಡೆಯಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ