ಬುಧವಾರ, ಫೆಬ್ರವರಿ 28, 2024
ಹಿಮಾಚಲ ಕಾಂಗ್ರೆಸ್ ಸರ್ಕಾರವನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಡಿ.ಕೆ. ಶಿವಕುಮಾರ್‌ ಎಂಟ್ರಿ.!-ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಗೆ ಸಿಬಿಐ ಸಮನ್ಸ್.!-ರಾಜೀನಾಮೆ ಸುಳ್ಳು ಸುದ್ದಿ ; ನಾನಿನ್ನೂ ರಾಜೀನಾಮೆ ನೀಡಿಲ್ಲ,5 ವರ್ಷ ನಮ್ಮದೇ ಸರ್ಕಾರ: ಹಿಮಾಚಲ ಸಿಎಂ-ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ.!-ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಗೆ ಸರ್ಕಾರ ಆದೇಶ; ಹೇಗಿದೆ ಪರಿಷ್ಕೃತ ದರ?-ಮಂಗಳೂರು : ಖಾಸಗಿ ಬಸ್ ಸಾರಿಗೆ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.!-RCB ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಅಭಿಮಾನಿಯಿಂದ ಮದುವೆ ಪ್ರಸ್ತಾಪ..!-Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!-ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು..!-ಮಂಗಳೂರು: ಪಾಕಿಸ್ತಾನ ಪರ ಘೋಷಣೆ ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Abhishek Ghosalkar: ಫೇಸ್‌ಬುಕ್ ಲೈವ್‌ನಲ್ಲೇ ಶಿವಸೇನಾ ಮುಖಂಡನನ್ನು ಗುಂಡಿಕ್ಕಿ ಹತ್ಯೆ..!

Twitter
Facebook
LinkedIn
WhatsApp
Abhishek Ghosalkar: ಫೇಸ್‌ಬುಕ್ ಲೈವ್‌ನಲ್ಲೇ ಶಿವಸೇನಾ ಮುಖಂಡನನ್ನು ಗುಂಡಿಕ್ಕಿ ಹತ್ಯೆ..!

ಮುಂಬೈ (ಮಹಾರಾಷ್ಟ್ರ) : ಉದ್ಧವ್ ಠಾಕ್ರೆ ಗುಂಪಿನ ಶಿವಸೇನಾ (ಯುಬಿಟಿ) ಮುಖಂಡ ಅಭಿಷೇಕ್ ಘೋಸಲ್ಕರ್ ಅವರನ್ನು ಗುರುವಾರ ಮುಂಬೈನಲ್ಲಿ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಮೌರಿಸ್ ನೊರೊನ್ಹಾ ಫೇಸ್‌ಬುಕ್ ಲೈವ್‌ ವೇಳೆಯೇ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಬಳಿಕ ಮೌರಿಸ್ ನೊರೊನ್ಹಾ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೇಸ್‌ಬುಕ್ ಲೈವ್‌ ವೇಳೆ ಅಭಿಷೇಕ್ ಘೋಸಲ್ಕರ್ ಮತ್ತು ಮೌರಿಸ್ ನೊರೊನ್ಹಾ ಒಟ್ಟಿಗೆ ಮಾತನಾಡುತ್ತಿದ್ದರು. ಸ್ವಲ್ಪ ಸಮಯದ ಬಳಿಕ ನೊರೊನ್ಹಾ ಎದ್ದು ಹೋಗುತ್ತಾರೆ. ಈ ವೇಳೆ, ಅಭಿಷೇಕ್ ಘೋಸಲ್ಕರ್ ಮೇಲೆ ನೊರೊನ್ಹಾ ಏಕಾಏಕಿ ಮೂರು ಸುತ್ತು ಗುಂಡು ಹಾರಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಭಿಷೇಕ್ ಘೋಸಲ್ಕರ್ ಅವರ ಹೊಟ್ಟೆ ಮತ್ತು ಭುಜಕ್ಕೆ ಎರಡು ಗುಂಡು ತಗುಲಿದ್ದು, ಬಳಿಕ ಒಂದು ಗುಂಡಿನ ಶಬ್ದ ವಿಡಿಯೋ ಮರೆಯಲ್ಲಿ ಕೇಳಿ ಬಂದಿದೆ.

ಈ ಹಿಂದಿನಿಂದಲೂ ಇಬ್ಬರು ಕೂಡ ವೈಯಕ್ತಿಕ ದ್ವೇಷ ಹೊಂದಿದ್ದರು. ಆದರೆ ಇತ್ತೀಚೆಗಷ್ಟೇ ಘೋಸಲ್ಕರ್ ಮತ್ತು ನೊರೊನ್ಹಾ ಹೊಂದಾಣಿಕೆ ಮಾಡಿಕೊಂಡಿದ್ದರು. ಹೀಗಾಗಿ ಘೋಸಲ್ಕರ್ ಅವರನ್ನು ನೊರೊನ್ಹಾ ತನ್ನ ಕಚೇರಿಗೆ ಆಹ್ವಾನಿಸಿದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ. ತಾನು ಆತ್ಮಹತ್ಯೆ ಮಾಡಿ ಕೊಳ್ಳುವ ಮೊದಲು ಘೋಸಲ್ಕರ್​ನನ್ನು ಹತ್ಯೆ ಮಾಡಿದ್ದಾನೆ. ಇಡೀ ಈ ಘಟನೆಯನ್ನು ಫೇಸ್ ಬುಕ್​ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗಿದೆ.

ಇನ್ನು ಇತ್ತೀಚೆಗೆ ಉಲ್ಲಾಸ್‌ನಗರದ ಪೊಲೀಸ್ ಠಾಣೆಯೊಳಗೆ ಏಕನಾಥ್ ಶಿಂಧೆ ಬಣದ ನಾಯಕನ ಮೇಲೆ ಬಿಜೆಪಿ ಶಾಸಕರೊಬ್ಬರು ಗುಂಡು ಹಾರಿಸಿದ್ದ ಘಟನೆ ನಡೆದಿತ್ತು. ಈ ಘಟನೆ ಪೊಲೀಸ್ ಠಾಣೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ.

 

ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಶಿಂಧೆ ಹೇಳಿದ್ದಾರೆ. ಇನ್ನೊಂದೆಡೆ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಬೇಕು ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಒತ್ತಾಯಿಸಿದ್ದಾರೆ.

ಅಭಿಷೇಕ್ ಘೋಸಲ್ಕರ್ ಅವರನ್ನು ಸಂಜೆಯ ವೇಳೆಗೆ ಭೇಟಿಯಾಗಿದ್ದೆ. ಮಹಾರಾಷ್ಟ್ರದಲ್ಲಿ ಇನ್ನು ಮುಂದೆ ಕಾನೂನಿನ ಭಯವಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಈ ಹಿಂದೆ ನಡೆದ ಘಟನೆ ಮತ್ತು ಇಂದಿನ ಶೂಟೌಟ್​ ಘಟನೆಗಳು ಸ್ಪಷ್ಟವಾಗಿದೆ ಎಂದು ಮಾಜಿ ಸಚಿವ ಆದಿತ್ಯ ಠಾಕ್ರೆ ಅವರು ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Vicky and team's reels

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ Reels Viral!

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ ರೀಲ್ಸ್ ವೈರಲ್! Twitter Facebook LinkedIn WhatsApp ನಾನು ನಂದಿನಿ ಖ್ಯಾತಿಯ ವಿಕ್ಕಿ ಆ್ಯಂಡ್​ ಟೀಮ್​! ಇದಾಗಲೇ ಹಲವಾರು ರೀಲ್ಸ್​ಗಳನ್ನು