ಕಾರು ಮತ್ತು ಟಾಟಾ ಏಸ್ ನಡುವೆ ಅಪಘಾತ ; ಓರ್ವ ಸಾವು, ಮತ್ತೋರ್ವ ಗಂಭೀರ!
ಚಿಕ್ಕಬಳ್ಳಾಪುರ: ಕಾರು (Car) ಮತ್ತು ಟಾಟಾ ಏಸ್‌ನ (Tata Ace) ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ದೊಡ್ಡಬಳ್ಳಾಪುರದಲ್ಲಿ (Doddaballapura) ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ತಾಂಡಾ ಬಳಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಬೆಂಗಳೂರಿನ (Bengaluru) ಬಗಲಗುಂಟೆ ನಿವಾಸಿ ಶಿವಕುಮಾರ್ (32) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೋರ್ವ ಅನಂತರಾಮ್ (37) ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುವಿಗೆ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ 112 ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಟಾಟಾ ಏಸ್‌ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಚಾಲಕನ ಮಾಹಿತಿಯನ್ನು ಪೋಲೀಸರು ಕಲೆ ಹಾಕುತ್ತಿದ್ದಾರೆ.
ಕೊಪ್ಪಳದಲ್ಲಿ ಧಗಧಗನೆ ಹೊತ್ತಿ ಉರಿದ ಜ್ಯುವೆಲ್ಲರಿ ಶಾಪ್ – ಚಿನ್ನಾಭರಣ ಬೆಂಕಿಗಾಹುತಿ
ಕೊಪ್ಪಳ: ಇಲ್ಲಿನ ಗಂಗಾವತಿ ನಗರದ (Gangavathi City) ಗಣೇಶ ವೃತ್ತದಲ್ಲಿ ಕೆಜೆಪಿ ಜ್ಯುವೆಲ್ಲರಿ ಮಳಿಗೆಯಲ್ಲಿ (Jewellery Shops) ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಮೂರು ಅಂತಸ್ತಿನ ಕಟ್ಟಡ ಬೆಂಕಿಗೆ ಆಹುತಿ ಆಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ (Short Circuit) ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ತಡರಾತ್ರಿ ಘಟನೆ ನಡೆದಿದೆ. ಕೆಲ ಹೊತ್ತಿನಲ್ಲೇ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಜನನಿಬಿಡ ಪ್ರದೇಶದಲ್ಲಿ ಅವಘಡ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ. ಸ್ಥಳಕ್ಕೆ 4 ಅಗ್ನಿಶಾಮಕ ವಾಹನ ದೌಡಾಯಿಸಿ, ಬೆಂಕಿ ನಂದಿಸಲು ಹರಸಾಹಸ ನಡೆಸಿವೆ.
ಒಟ್ಟು 3 ಮಹಡಿಯ ಕೆಜೆಪಿ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಚಿನ್ನಾಭರಣ ಮತ್ತು ಬಟ್ಟೆ ಅಂಗಡಿಗಳಿವೆ ಇವೆ. ಎಲ್ಲ ಕಡೆ ಬೆಂಕಿ ಹೊತ್ತಿಕೊಂಡಿದೆ. ಸತತ 6 ಗಂಟೆ ಕಾರ್ಯಾಚರಣೆ ನಂತರ ಬೆಂಕಿ ಹರಡುವಿಕೆಯನ್ನು ನಿಯಂತ್ರಣಕ್ಕೆ ತರಲಾಗಿದೆ. ಅಪಾರ ಪ್ರಮಾಣದ ಚಿನ್ನಾಭರಣ ಬೆಂಕಿಗೆ ಆಹುತಿ ಆಗಿರುವ ಶಂಕೆ ವ್ಯಕ್ತವಾಗಿದೆ.
ಗಂಗಾವತಿ ನಗರ ಠಾಣೆಯಲ್ಲಿ (Gangavathi City Police) ಪ್ರಕರಣ ದಾಖಲಾಗಿದೆ.