ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸರ್ಕಾರಿ ಬಸ್‌ ಮತ್ತು ಕಾರು ನಡುವೆ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಹಿತ ಐವರು ಮೃತ್ಯು!

Twitter
Facebook
LinkedIn
WhatsApp
ಸರ್ಕಾರಿ ಬಸ್‌ ಮತ್ತು ಕಾರು ನಡುವೆ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಹಿತ ಐವರು ಮೃತ್ಯು!

ಶಿರಸಿ: ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್‌ (Government Bus) ಮತ್ತು ಕುಮಟಾ ಕಡೆಯಿಂದ ಶಿರಸಿ ಕಡೆಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್‌ ಕಾರಿನ (Maruti Swift Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road accident) ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು (four from Single Family) ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ (Uttaran Kannada News) ಶಿರಸಿ ತಾಲೂಕಿನ ಬಂಡಲ ಎಂಬಲ್ಲಿ ಶುಕ್ರವಾರ ಬೆಳಗ್ಗೆ 11.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಸ್ವಿಫ್ಟ್‌ ಕಾರಿನಲ್ಲಿದ್ದವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಆದರೆ, ಪೂರ್ಣ ವಿವರ ತಿಳಿದಿಲ್ಲ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಐವರಲ್ಲಿ ನಾಲ್ವರು ಒಂದೇ ಕುಟುಂಬದವರು. ಮತ್ತೊಬ್ಬರು ತಮಿಳುನಾಡಿನವರು ಎಂದು ಹೇಳಲಾಗಿದೆ. ಈ ನಡುವೆ, ಬಸ್ಸಿನ ಚಾಲಕನ ಭಾಗ ಕೂಡಾ ನಜ್ಜುಗುಜ್ಜಾಗಿದೆ, ಆದರೆ, ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದುಕೊಂಡಿವೆ. ಬಸ್ಸಿಗೆ ಡಿಕ್ಕಿ ಹೊಡೆದ ಕಾರು ಬಸ್ಸಿನ ಮಧ್ಯ ಭಾಗಕ್ಕೆ ಹೋಗಿ ನಿಂತಿದೆ. ಬಸ್ ನಲ್ಲಿ 60 ಕ್ಕೂ ಅಧಿಕ ಪ್ರಯಾಣಿಕರಿದ್ದು, ಕೆಲವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿಪ್ಪರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, ಇಬ್ಬರ ಸಜೀವ ದಹನ

ಬೆಳಗಾವಿ: ಟಿಪ್ಪರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಇಬ್ಬರು ಸಜೀವವಾಗಿ ದಹಿಸಿಹೋದ (Burnt Alive) ದಾರುಣ ಘಟನೆ ಬೆಳಗಾವಿ (Belagavi news) ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ.

ಒಂದೇ ಕುಟುಂಬದ ನಾಲ್ವರು ರಾತ್ರಿ ಬಂಬರಗಾ ಗ್ರಾಮಕ್ಕೆ ಕಾರಿನಲ್ಲಿ ಹೊರಟಿದ್ದು, ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸಾಗುತ್ತಿದ್ದರು. ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಟಿಪ್ಪರ್‌ನ ಡಿಸೇಲ್ ಟ್ಯಾಂಕ್ ಒಡೆದು ಕೂಡಲೇ ಬೆಂಕಿ ಹೊತ್ತಿಕೊಂಡಿದೆ.

ಕ್ಷಣಾರ್ಧದಲ್ಲಿ ಕಾರು ಮತ್ತು ಟಿಪ್ಪರ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಜೀವ ದಹನಗೊಂಡಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್(24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಮೃತ ದುರ್ದೈವಿಗಳು.

ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರು ಇವರನ್ನು ರಕ್ಷಿಸಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಮಹೇಶ್ ಬೆಳ್ಗಾಂವಕರ್ ಮತ್ತು ಸ್ನೇಹಾ ಬೆಳ್ಗುಂದ್ಕರ್ ಗಂಭೀರ ಗಾಯಗಳಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತ ಆಗುತ್ತಿದ್ದಂತೆ ಟಿಪ್ಪರ್ ಡ್ರೈವರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಸ್ನೇಹಾ, ಎಸಿಪಿ ಮತ್ತು ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇಬ್ಬರ ಶವವನ್ನು ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist