ಮಡಿಕೇರಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು
Twitter
Facebook
LinkedIn
WhatsApp

ಮಡಿಕೇರಿ: ಬೈಕ್ (Bike) ಮತ್ತು ಆಲ್ಟೊ (Alto) ಕಾರಿನ ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ.
ಅಪ್ಪಾಜಿ (19) ಮೃತ ದುರ್ದೈವಿ. ಈತ ನಾಪೊಕ್ಲುವಿನ (Napoklu) ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಮೂರ್ನಾಡು (Murnad) ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಮೂರ್ನಾಡು ಕಡೆಯಿಂದ ನಾಪೊಕ್ಲುವಿಗೆ ಬರುತ್ತಿದ್ದ ಆಲ್ಟೊ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ.
ತಾಲೂಕಿನ ನಾಪೊಕ್ಲು- ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದ ತಿರುವಿನಲ್ಲಿ ಘಟನೆ ನಡೆದಿದ್ದು, ಅಪ್ಪಾಜಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕಿನಲ್ಲಿದ್ದ ಇನ್ನೊಬ್ಬ ಸಹಪ್ರಯಾಣಿಕ ಗಂಭೀರ ಗಾಯಗೊಂಡಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ನಾಪೊಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.