ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಟ್ಟೆ ಅಂಗಡಿಗಳಲ್ಲಿ ಕಳ್ಳತನ ಮಾಡಿದ ಆರೋಪ - ಸಂಸದೆ ರಾಜೀನಾಮೆ!

Twitter
Facebook
LinkedIn
WhatsApp
ಬಟ್ಟೆ ಅಂಗಡಿಗಳಲ್ಲಿ ಕಳ್ಳತನ ಮಾಡಿದ ಆರೋಪ - ಸಂಸದೆ ರಾಜೀನಾಮೆ!

ವೆಲ್ಲಿಂಗ್ಟನ್ : ಬಟ್ಟೆಅಂಗಡಿಯಲ್ಲಿ ಕಳವು ಮಾಡಿದ ಆರೋಪ ಎದುರಿಸುತ್ತಿರುವ ನ್ಯೂಝಿಲ್ಯಾಂಡ್ ಸಂಸದೆ ಗೋಲ್ರಿಝ್ ಘಹ್ರಮನ್ ಮಂಗಳವಾರ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ವೈಯಕ್ತಿಕ ಒತ್ತಡ ಮತ್ತು ಆಘಾತದಿಂದ ಈ ಪ್ರಮಾದ ಸಂಭವಿಸಿರುವುದಾಗಿ ಹೇಳಿಕೆ ನೀಡಿದ್ದಾರೆ.

ನ್ಯೂಝಿಲ್ಯಾಂಡ್ ಸಂಸತ್‍ಗೆ ಚುನಾಯಿತರಾದ ಮೊದಲ ನಿರಾಶ್ರಿತೆ ಎಂಬ ದಾಖಲೆ ಬರೆದಿದ್ದ ಗ್ರೀನ್ ಪಾರ್ಟಿಯ ಗೋಲ್ರಿಝ್, ಕಳೆದ ವರ್ಷದ ಅಂತ್ಯದಲ್ಲಿ ಆಕ್ಲಂಡ್ ಹಾಗೂ ವೆಲ್ಲಿಂಗ್ಟನ್‍ನ ಆಧುನಿಕ ಬಟ್ಟೆಅಂಗಡಿಗಳಲ್ಲಿ ಡ್ರೆಸ್‍ಗಳನ್ನು ಕಳ್ಳತನ ಮಾಡಿದ ಆರೋಪದಲ್ಲಿ ಪೊಲೀಸ್ ವಿಚಾರಣೆ ಎದುರಿಸುತ್ತಿದ್ದಾರೆ. ಸಂಸದೆಯಾಗಿ ಆಯ್ಕೆಗೊಳ್ಳುವ ಮುನ್ನ ಅವರು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮಾನಸಿಕ ಒತ್ತಡದಿಂದ ತಾನು ಮಾಡಿರುವ ಕಾರ್ಯ ರಾಜಕಾರಣಿಗಳ ಘನತೆಗೆ ಕುಂದು ಉಂಟು ಮಾಡುತ್ತದೆ. ಕೆಲಸ ಕಾರ್ಯದ ಒತ್ತಡದಿಂದ ಮಾಡಿರುವ ಈ ಕೃತ್ಯ ತನ್ನ ನಡತೆಗೆ ತಕ್ಕುದಾಗಿಲ್ಲ. ಇದು ತನ್ನ ಕಾರ್ಯವನ್ನು ಸಮರ್ಥಿಸಿಕೊಳ್ಳುವ ಪ್ರಯತ್ನವಲ್ಲ ಎಂದು ರಾಜೀನಾಮೆ ಪತ್ರದಲ್ಲಿ ಗೋಲ್ರಿಝ್ ವಿವರಿಸಿದ್ದಾರೆ. `ಫೆಲೆಸ್ತೀನ್ ಪರ ನಿಲುವು ಹೊಂದಿರುವ ಗೋಲ್ರಿಝ್ ನಿರಂತರ ಬೆದರಿಕೆ ಕರೆ ಎದುರಿಸುತ್ತಿದ್ದರು. ಇದು ಆಕೆಯ ಮಾನಸಿಕ ದೃಢತೆಯ ಮೇಲೆ ಪರಿಣಾಮ ಬೀರಿದೆ’ ಎಂದು ಗ್ರೀನ್‍ಪಾರ್ಟಿಯ ಮುಖಂಡ ಜೇಮ್ಸ್ ಶಾ ಪ್ರತಿಕ್ರಿಯಿಸಿದ್ದಾರೆ.

ಅಮೆರಿಕ ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿದ ಭಾರತೀಯ ಮೂಲದ ವಿವೇಕ್‌ – ಟ್ರಂಪ್‌ಗೆ ಬೆಂಬಲ

ನವದೆಹಲಿ: ಭಾರತೀಯ-ಅಮೆರಿಕನ್ ವಾಣಿಜ್ಯೋದ್ಯಮಿ ವಿವೇಕ್ ರಾಮಸ್ವಾಮಿ (Vivek Ramaswamy) ಅವರು ಯುಎಸ್ ಅಧ್ಯಕ್ಷೀಯ (US Presidential Election) ರೇಸ್‌ನಿಂದ ಹೊರಗುಳಿದಿದ್ದಾರೆ. ಇದೇ ವರ್ಷ ಯುಎಸ್‌ ಅಧ್ಯಕ್ಷೀಯ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಅಯೋವಾ ರಿಪಬ್ಲಿಕನ್ ಸಭೆ ನಂತರ ಡೊನಾಲ್ಡ್ ಟ್ರಂಪ್‌ಗೆ (Donald Trump) ತಮ್ಮ ಬೆಂಬಲ ಘೋಷಿಸಿದ್ದಾರೆ. ರಾಮಸ್ವಾಮಿ ಅವರು ಫೆಬ್ರವರಿ 2023 ರಲ್ಲಿ ಯುಎಸ್‌ ಅಧ್ಯಕ್ಷೀಯ ಸ್ಥಾನಕ್ಕೆ ಸ್ಪರ್ಧಿ ಎನ್ನುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು. 

ತಮ್ಮ ನಿಲುವುಗಳ ಮೂಲಕ ರಿಪಬ್ಲಿಕನ್‌ ಮತದಾರರು ಮತ್ತು ಬೆಂಬಲಿಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಅವರ ಪ್ರಚಾರ ಕಾರ್ಯತಂತ್ರವು ಮಾಜಿ ಅಧ್ಯಕ್ಷ ಟ್ರಂಪ್ ಅವರ ನೀತಿಯನ್ನು ನಿಕಟವಾಗಿ ಪ್ರತಿಬಿಂಬಿಸುತ್ತದೆ. ಹಿಂದಿನ ಚುನಾವಣೆಗಳಲ್ಲಿ ಟ್ರಂಪ್ ಅವರನ್ನು ಯಶಸ್ಸಿನತ್ತ ಮುನ್ನಡೆಸಿದ್ದ ಸಂಪ್ರದಾಯವಾದಿ ವಲಯದ ಗಮನ ಸೆಳೆಯಲು ರಾಮಸ್ವಾಮಿ ಪ್ರಯತ್ನಿಸಿದ್ದರು.

ಓಹಿಯೋ ಮೂಲದ ರಾಮಸ್ವಾಮಿ, ಕೇರಳದಿಂದ ವಲಸೆ ಹೋಗಿದ್ದ ಕುಟುಂಬವೊಂದರ ಪುತ್ರ. ಟ್ರಂಪ್ ಅವರ ಖ್ಯಾತಿಯಿಂದ ಹೆಚ್ಚು ಪ್ರಾಬಲ್ಯ ಹೊಂದಿರುವ ರಿಪಬ್ಲಿಕನ್ ಕ್ಷೇತ್ರದಲ್ಲಿ ಅನಿರೀಕ್ಷಿತ ಸ್ಪರ್ಧಿಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದರು.

ಅಯೋವಾದಲ್ಲಿ ರಾಮಸ್ವಾಮಿ ಅವರ ವಿರುದ್ಧದ ಅಲೆಯಿದೆ. ಅಯೋವಾದಲ್ಲಿ ಇವರು ನಾಲ್ಕನೇ ಸ್ಥಾನ ಗಳಿಸಿದ್ದಾರೆ. ಸುಮಾರು 7.7% ಮತಗಳನ್ನು ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist