ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಿನ ಬಜೆಟ್ ನಲ್ಲಿ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ

Twitter
Facebook
LinkedIn
WhatsApp
ಮುಂದಿನ ಬಜೆಟ್ ನಲ್ಲಿ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಂದೇ ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದ್ದಾರೆ. 

ಕರ್ನಾಟಕದಲ್ಲಿ ವೃದ್ಧಾಪ್ಯ ವೇತನ ಹೆಚ್ಚಳ ಮಾಡುವುದಕ್ಕೆ ಭಾರಿ ಬೇಡಿಕೆಯಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹಿರಿಯ ನಾಗರಿಕಗರಿಗೆ ಪ್ರಸ್ತುತ 1,200 ರೂ. ವೃದ್ಧಾಪ್ಯ ವೇತನವನ್ನು ನೀಡುತ್ತಿದ್ದೇವೆ. ಅದನ್ನು ಮುಂದಿನ 2024-25ನೇ ಸಾಲಿನ ಬಜೆಟ್‌ನಲ್ಲಿ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಮನವಿ ಬಂದಿದ್ದು, ಮುಂದಿನ ಬಜೆಟ್ ನಲ್ಲಿ ಅನುಷ್ಟಾನಗೊಳಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ  ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂದು ಮೆಚ್ಚುಗೆ ಸೂಚಿಸಿದರು. 

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ  ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ತಿಳಿಸಿದ ಮುಖ್ಯಮಂತ್ರಿ,  ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು ನೀವೆಲ್ಲಾ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದರು.  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರ  ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವೃದ್ಧಾಪ್ಯ ವೇತನ ಹೆಚ್ಚಿಸುವಂತೆ ಸಚಿವೆ ಮನವಿ

ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾತನಾಡಿ, ವೃದ್ಧಾಪ್ಯ ವೇತನ ಹೆಚ್ಚಿಸುವಂತೆ ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಕರ್ನಾಟಕದ ಸುಮಾರು 49 ಲಕ್ಷ ವೃದ್ಧರಿಗೆ ಸರ್ಕಾರದಿಂದ ಮಾಸಿಕ 1,200 ರೂ. ವೃದ್ಧಾಪ್ಯ ವೇತನವನ್ನು ನೀಡಲಾಗುತ್ತಿದೆ. ಇದನ್ನು 2,000 ರೂ.ವರೆಗೆ ಹೆಚ್ಚಳ ಮಾಡಬೇಕೆಂದು ಸಿದ್ದರಾಮಯ್ಯ ಅವರಿಗೆ ಲಕ್ಷ್ಮೀ ಹೆಬ್ಬಾಳ್ಕರ್‌ ಮನವಿ ಮಾಡಿದರು. ರಾಜ್ಯದಲ್ಲಿ ಹಿರಿಯರು ನಾಗರಿಕರು 5 ಗ್ಯಾರಂಟಿ ಕೊಟ್ಟಿದ್ದೀರಾ. ಹಾಗೇ ನಮಗೆ ಪಿಂಚಣಿ ಜಾಸ್ತಿ ಮಾಡಿ ಎಂದು ಮನವಿ ಮಾಡುತ್ತಿದ್ದಾರೆ. ಹೀಗಾಗಿ ನೀವು ಹಿರಿಯರಿದ್ದೀರಾ. ಹಿರಿಯ ನಾಗರಿಕರ ಕಷ್ಟದ ಬಗ್ಗೆಯೂ ತಮಗೆ ಅರಿವಿರುತ್ತದೆ. ಆದ್ದರಿಂದ ವೃದ್ಧಾಪ್ಯ ವೇತನವನ್ನು 2 ಸಾವಿರ ರೂಪಾಯಿಗೆ ಹೆಚ್ಚಳ ಮಾಡಿ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ