ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಮಲ್ ಪಾನ್ ಮಸಾಲದ ಜಾಹೀರಾತಿಗೆ ಭಾರಿ ವಿರೋಧದ ಬಳಿಕ ಸ್ಪಷ್ಟನೆ ನೀಡಿದ ನಟ ಅಕ್ಷಯ್ ಕುಮಾರ್!

Twitter
Facebook
LinkedIn
WhatsApp
ವಿಮಲ್ ಪಾನ್ ಮಸಾಲದ ಜಾಹೀರಾತಿಗೆ ಭಾರಿ ವಿರೋಧದ ಬಳಿಕ ಸ್ಪಷ್ಟನೆ ನೀಡಿದ ನಟ ಅಕ್ಷಯ್ ಕುಮಾರ್!

ನಟ ಅಕ್ಷಯ್ ಕುಮಾರ್ (Akshay Kumar) ಅವರು ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಚಿತ್ರರಂಗದಲ್ಲಿ ಅವರಿಗೆ ಹೇಳಿಕೊಳ್ಳುವಂಥ ಗೆಲುವು ಸಿಗುತ್ತಿಲ್ಲ. ಸಾಲು ಸಾಲು ಸಿನಿಮಾಗಳು ರಿಲೀಸ್ ಆದರೂ ಅಲ್ಲೊಂದು ಇಲ್ಲೊಂದು ಚಿತ್ರಗಳು ಹಿಟ್ ಆಗುತ್ತವೆ. ಈಗ ಅಕ್ಷಯ್ ಕುಮಾರ್ ಅವರ ಹೊಸ ವಿಮಲ್ ಜಾಹೀರಾತು ಪ್ರಸಾರ ಕಂಡಿತ್ತು. ಅಕ್ಷಯ್ ಹೊಸ ಜಾಹೀರಾತಿನಲ್ಲಿ ಭಾಗಿ ಆಗಿದ್ದಾರೆ ಎಂದೇ ಎಲ್ಲ ಕಡೆಗಳಲ್ಲೂ ಸುದ್ದಿ ಆಯಿತು. ಈ ಕುರಿತು ಅಕ್ಷಯ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಅಕ್ಷಯ್ ಕುಮಾರ್ ಅವರು ‘ವಿಮಲ್ ಪಾನ್ ಮಸಾಲ’ದ ರಾಯಭಾರಿ ಆದ ಬಳಿಕ ಅವರ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಆ ಬಳಿಕ ಕ್ಷಮೆ ಕೇಳಿದ್ದ ಅವರು ರಾಯಭಾರತ್ವ ತೊರೆದಿದ್ದರು. ಜೊತೆಗೆ ಒಪ್ಪಂದ ಮುಗಿಯುವವರೆಗೆ ಶೂಟ್ ಮಾಡಿಕೊಂಡಿದ್ದ ಜಾಹೀರಾತನ್ನು ಪ್ರಸಾರ ಆಗಲಿದೆ ಎಂದು ಹೇಳಿದ್ದರು. ಇತ್ತೀಚೆಗೆ ವಿಮಲ್​ನ ಹೊಸ ಜಾಹೀರಾತು ಪ್ರಸಾರ ಕಂಡಿತ್ತು. ಇದರಲ್ಲಿ ಅಕ್ಷಯ್ ಕೂಡ ಕಾಣಿಸಿಕೊಂಡಿದ್ದರು. ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ.

‘ಈ ಜಾಹೀರಾತು ಶೂಟ್ ಆಗಿದ್ದು 2021ರ ಅಕ್ಟೋಬರ್ 13ರಂದು. ನನಗೂ ಆ ಬ್ರ್ಯಾಂಡ್​ಗೂ ಯಾವುದೇ ಸಂಬಂಧ ಇಲ್ಲ. ಈಗಾಗಲೇ ಶೂಟ್ ಮಾಡಿಕೊಂಡಿರುವ ಜಾಹೀರಾತನ್ನು ಮುಂದಿನ ತಿಂಗಳ ಕೊನೆಯವರೆಗೆ ಪ್ರಸಾರ ಮಾಡುವ ಹಕ್ಕು ಅವರಿಗೆ ಇದೆ’ ಎಂದಿದ್ದಾರೆ. ಈ ಮೂಲಕ ಇದು ಹಳೆಯ ಜಾಹೀರಾತು ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

ವೈರಲ್ ಜಾಹೀರಾತನ್ನು ನೋಡಿದ ಅನೇಕರು ಇದು ಹಳೆಯ ಜಾಹೀರಾತಿರಬಹುದು ಎನ್ನುವ ಅಭಿಪ್ರಾಯ ಹೊರಹಾಕಿದ್ದರು. ಶಾರುಖ್ ಖಾನ್ ಅವರು ಉದ್ದನೆಯ ಕೂದಲು ಬಿಟ್ಟು ಈ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಅವರು ಇಷ್ಟು ಉದ್ದನೆಯ ಕೂದಲು ಬಿಟ್ಟುಕೊಂಡಿದ್ದು ‘ಪಠಾಣ್’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ. ಹೀಗಾಗಿ, ಇದು ಅದೇ ಸಂದರ್ಭದಲ್ಲಿ ಚಿತ್ರೀಕರಿಸಿದ ಜಾಹೀರಾತು ಇರಬಹುದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ