ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Actor Lakshman Death: ಕನ್ನಡದ ಹೆಸರಾಂತ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ

Twitter
Facebook
LinkedIn
WhatsApp
actor lakshman death

‘ಯಜಮಾನ’, ‘ಸೂರ್ಯವಂಶ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ಗಮನ ಸೆಳೆದಿದ್ದ ನಟ ಲಕ್ಷ್ಮಣ್ (Lakshman) ಅವರು ಇಂದು (ಜನವರಿ 23) ನಿಧನ ಹೊಂದಿದ್ದಾರೆ. ಹೃದಯಾಘಾತ ಸಂಭವಿಸಿದ್ದರಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಲಕ್ಷ್ಮಣ್​ ನಿಧನಕ್ಕೆ ಸ್ಯಾಂಡಲ್​​ವುಡ್ (Sandalwood) ಸೆಲೆಬ್ರಿಟಿಗಳು ಹಾಗೂ ಸಿನಿಪ್ರಿಯರು ಸಂತಾಪ ಸೂಚಿಸಿದ್ದಾರೆ.

ಲಕ್ಷ್ಮಣ್ ಅವರು ಪೋಷಕ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಅನೇಕ ಸಿನಿಮಾಗಳಲ್ಲಿ ಅವರು ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದರು. ವೃತ್ತಿ ಜೀವನದಲ್ಲಿ 200ಕ್ಕೂ ಅಧಿಕ ಸಿನಿಮಾಗಳಲ್ಲಿ ಲಕ್ಷ್ಮಣ್ ಬಣ್ಣ ಹಚ್ಚಿದ್ದರು. ‘ಒಲವಿನ ಉಡುಗೊರೆ’, ‘ಸಾಂಗ್ಲಿಯಾನ’ ಮೊದಲಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದರು. ಅಂಬರೀಷ್​, ವಿಷ್ಣುವರ್ಧನ್, ಶಂಕರ್ ನಾಗ್ ಸೇರಿದಂತೆ ಕನ್ನಡದ ದಿಗ್ಗಜರ ಜೊತೆ ಅವರು ತೆರೆ ಹಂಚಿಕೊಂಡಿದ್ದರು.

ಇತ್ತೀಚೆಗೆ ಕನ್ನಡ ಚಿತ್ರರಂಗಕ್ಕೆ ಒಂದಾದಮೇಲೆ ಒಂದರಂತೆ ಬರಸಿಡಿಲು ಬಂದೆರಗುತ್ತಲೇ ಇದೆ. ಇತ್ತೀಚಿನ ವರ್ಷಗಳಲ್ಲಿ ಹಲವು ಕಲಾವಿದರನ್ನು ಚಿತ್ರರಂಗ ಕಳೆದುಕೊಂಡಿದೆ. ಈಗ ಲಕ್ಷ್ಮಣ್ ಅವರನ್ನು ಕಳೆದುಕೊಂಡ ಚಿತ್ರರಂಗ ಬಡವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ