ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟಿ ಶುಭ ಪೂಂಜಾ ಜೊತೆ ಅಸಭ್ಯ ವರ್ತನೆ ; ಚಿತ್ರೀಕರಣದ ಸಮಯದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ನುಗ್ಗಿದ ಯುವಕರ ಗುಂಪು!

Twitter
Facebook
LinkedIn
WhatsApp
ನಟಿ ಶುಭ ಪೂಂಜಾ ಜೊತೆ ಅಸಭ್ಯ ವರ್ತನೆ ; ಚಿತ್ರೀಕರಣದ ಸಮಯದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ನುಗ್ಗಿದ ಯುವಕರ ಗುಂಪು!

ಚಿಕ್ಕಮಗಳೂರು : ಕೊರಗಜ್ಜ ಚಿತ್ರದ ಹಾಡಿನ ಚಿತ್ರೀಕರಣದ ವೇಳೆ ಕಿಡಿಗೇಡಿಗಳ ಗುಂಪೊಂದು ದಾಂಧಲೆ ನಡೆಸಿದೆ. ಇಲ್ಲಿನ ಕುದುರೆಮುಖದ ಮೈದಾಡಿ ಗುಡ್ಡದಲ್ಲಿ ಕೊರಗಜ್ಜ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಏಕಾಏಕಿ ಮಾರಕಾಸ್ತ್ರಗಳನ್ನು ಹಿಡಿದು ನುಗ್ಗಿದ ಯುವಕರ ಗುಂಪು, ನಟಿ ಶುಭ ಪೂಂಜಾರೊಂದಿಗೆ (Shubha Poonja) ಅಸಭ್ಯವಾಗಿ ವರ್ತಿಸಿದ್ದಾರೆ.

ಶುಭ ಪೂಂಜಾ ನೃತ್ಯ ಮಾಡುತ್ತಿದ್ದಾಗ ಕೈ ಹಿಡಿದು ಎಳೆದಾಡಿದ್ದಾರೆ ಎನ್ನಲಾಗಿದೆ. ಯುವಕರ ಅಸಭ್ಯ ವರ್ತನೆಯಿಂದ ಚಿತ್ರತಂಡದವರು ಹಾಡಿನ ಚಿತ್ರೀಕರಣವನ್ನೇ ನಿಲ್ಲಿಸಿದ್ದಾರೆ. ಸುಧೀರ್ ಅತ್ತಾವರ ನಿರ್ದೇಶನದಲ್ಲಿ ಕೊರಗಜ್ಜ ಚಿತ್ರ ಮೂಡಿ ಬರುತ್ತಿದೆ. ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯರ ನೃತ್ಯ ಸಂಯೋಜನೆಯಲ್ಲಿ ಚಿತ್ರೀಕರಣ ನಡೆಸಲಾಗುತ್ತಿತ್ತು. ಈ ವೇಳೆ ನುಗ್ಗಿ ದಾಂಧಲೆ ಮಾಡಿದ್ದಾರೆ.

ನಟಿ ಶುಭ ಪೂಂಜಾ ಅಸಭ್ಯ ವರ್ತನೆ ; ಚಿತ್ರೀಕರಣದ ಸಮಯದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ನುಗ್ಗಿದ ಯುವಕರ ಗುಂಪು!

ಐದಾರು ಗಾಡಿಯಲ್ಲಿ ಮಚ್ಚು ಲಾಂಗು ಹಿಡಿದು ಬಂದ ಕಿಡಿಗೇಡಿಗಳ ಗುಂಪು ಒಮ್ಮೆಲೆ ಶೂಟಿಂಗ್‌ ಸೆಟ್‌ಗೆ ನುಗ್ಗಿದೆ. ಇದರಿಂದ ವಿಚಲಿತಗೊಂಡ ಚಿತ್ರ ತಂಡ ಚಿತ್ರೀಕರಣವನ್ನು ನಿಲ್ಲಿಸಿದೆ. ಚಿತ್ರೀಕರಣಕ್ಕೆ ಪೊಲೀಸರ ಅನುಮತಿ ಪಡೆಯಲಾಗಿತ್ತು. ಲಕ್ಷಾಂತರ ಮೌಲ್ಯದ ಸೆಟ್‌ಗಳನ್ನು ಹಾಕಲಾಗಿತ್ತು. ಬಾಲಿವುಡ್‌ ಫೇಮಸ್‌ ಡ್ಯಾನ್ಸ್‌ ಡೈರಕ್ಟರ್‌ ಗಣೇಶ್‌ ಆಚಾರ್ಯ ಅವರನ್ನು ಕರೆಸಲಾಗಿತ್ತು. ಆದರೆ ಅಪರಿಚಿತ ಗುಂಪು ಹೀಗೆ ಶೂಟಿಂಗ್‌ ಸೆಟ್‌ಗೆ ನುಗ್ಗಿ ದಾಂಧಲೆ ಮಾಡಿದೆ ಎಂದು ಚಿತ್ರದ ನಿರ್ದೇಶಕ ಸುದೀರ್‌ ಅತ್ತಾವರ ಅಸಮಾಧಾನವನ್ನು ಹೊರಹಾಕಿದರು.

ಸದ್ಯ ಘಟನೆ ಸಂಬಂಧ ಚಿತ್ರತಂಡದವರು ಪೊಲೀಸರಿಗೆ ದೂರು ನೀಡಿಲ್ಲ. ಕುದುರೆಮುಖ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಿಂದೊಮ್ಮೆಯು ಹೀಗೆ ಶೂಟಿಂಗ್‌ ಕ್ಯಾನ್ಸಲ್‌ ಆಗಿತ್ತು ಎಂದು ಸುದೀರ್‌ ತಿಳಿಸಿದ್ದಾರೆ.

ನಟಿ ಶುಭ ಪೂಂಜಾ ಅಸಭ್ಯ ವರ್ತನೆ ; ಚಿತ್ರೀಕರಣದ ಸಮಯದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ನುಗ್ಗಿದ ಯುವಕರ ಗುಂಪು!
ನೆಲ್ಸನ್’ ಆಗಿ ಬಂದ ಮರಿ ಟೈಗರ್‌, ಸಖತ್ ಮಾಸ್ ಆಗಿದೆ ಟೀಸರ್!

ಗೊಂಬೆಗಳ ಲವ್‌ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಭರವಸೆ ಮೂಡಿಸಿದ್ದ ನಟಅರುಣ್‌ ಕುಮಾರ್ಈಗ ನಿರ್ದೇಶನಕ್ಕಿಳಿದಿದ್ದಾರೆ. ಅವರ ಚೊಚ್ಚಲ ಹೆಜ್ಜೆಗೆ ‘ನೆಲ್ಸನ್’ ಎಂಬ ಶೀರ್ಷಿಕೆ ಇಡಲಾಗಿದ್ದು, ರಕ್ತದಲ್ಲಿ ನೆಂದ ದೇವರಕಾಡು (Vinod Prabhakar) ಎಂಬ ಅಡಿ ಬರಹ ಚಿತ್ರದ ಸಾರಂಶವನ್ನು ವಿವರಿಸುತ್ತಿದೆ. ಆನಂದ್ ಆಡಿಯೋ ಯೂಟ್ಯೂಬ್‌ನಲ್ಲಿ ಟೀಸರ್ ರಿಲೀಸ್ ಆಗಿದ್ದು, ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಸಖತ್ ಮಾಸ್ ಆಗಿ ಮೂಡಿಬಂದಿರುವ ನೆಲ್ಸನ್ ಟೀಸರ್‌ನಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್ ಯಂಗ್ ಮ್ಯಾನ್ ಅವತಾರದಲ್ಲಿ ಅಬ್ಬರಿಸಿದ್ದಾರೆ. ಎಂಎಂ ಲೆಗಸಿಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಟೀಸರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು.

ನಟಿ ಶುಭ ಪೂಂಜಾ ಅಸಭ್ಯ ವರ್ತನೆ ; ಚಿತ್ರೀಕರಣದ ಸಮಯದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ನುಗ್ಗಿದ ಯುವಕರ ಗುಂಪು!

ನಿರ್ದೇಶಕ ಅರುಣ್ ಕುಮಾರ್ ಮಾತನಾಡಿ, ʻʻಲಾಕ್ ಡೌನ್ ಆದ ಮೇಲೆ ಹಸಿವು, ಅಸಹಾಯಕ ಸಮಯದಲ್ಲಿ ನೆಲ್ಸನ್ ಹುಟ್ಟಿಕೊಂಡಿದ್ದು. ಬರೆಯುತ್ತಾ, ಬರೆಯುತ್ತಾ ತುಂಬಾ ಚೆನ್ನಾಗಿ ಕಥೆ ಬೆಳೆಯಿತು. ಸ್ನೇಹಿತರ ಮೂಲಕ ನಿರ್ಮಾಪಕರು ಸಿಕ್ಕಿದರು. ನಂಬಿಕೆ ಹುಟ್ಟಿಕೊಳ್ತು. ಇದುವರೆಗೆ ನನ್ನ ನಂಬಿದ್ದು ಶ್ರೀರಾಮ್ ಸರ್. ನಾನು ಟೀಂ ನನ್ನ ಬೆನ್ನೆಲುಬು ಆಗಿ ನಿಂತರು. ಸಿನಿಮಾ ಈ ಹಂತಕ್ಕೆ ಬರಲು ನನ್ನ ಟೆಕ್ನಿಕಲ್ ಟೀಂ ಬೆಂಬಲವಿದೆ. ವಿನೋದ್ ಸರ್ ಡೆಡಿಕೇಷನ್ ನೋಡಿ ಭಯ ಆಯಿತು. ವಿನೋದ್ ಸರ್ ಸಪೋರ್ಟ್ ತುಂಬಾ ದೊಡ್ಡದಿದೆ. 60 ರಿಂದ 90 ಒಳಗಡೆ ಚಾಮರಾಜನಗರದಲ್ಲಿ ನಡೆಯುವ ಕಥೆ ಇದು. ಸ್ಕ್ರೀನ್ ಪ್ಲೇ, ಕಥೆ ತುಂಬಾ ಸ್ಟ್ರಾಂಗ್ ಆಗಿದೆʼʼ ಎಂದರು.

ನಟಿ ಶುಭ ಪೂಂಜಾ ಅಸಭ್ಯ ವರ್ತನೆ ; ಚಿತ್ರೀಕರಣದ ಸಮಯದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ನುಗ್ಗಿದ ಯುವಕರ ಗುಂಪು!

ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಅರುಣ್ ಕುಮಾರ್ ಆ ಎಲ್ಲಾ ಕಲೆಯನ್ನು ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಚಿತ್ರಕ್ಕೆ ಧಾರೆ ಎರೆದಿದ್ದಾರೆ. ಅವರ ಮೊದಲ ಕನಸಿಗೆ ದೀಪ ಫಿಲ್ಮ್ಸ್ ಬ್ಯಾನರ್‌ನಲ್ಲೂ ಬಿ.ಎಮ್ ಶ್ರೀರಾಮ್ (ಕೋಲಾರ) ಹಣ ಹಾಕಿದ್ದಾರೆ. ಪ್ರಜ್ವಲ್ ಗೌಡ ಛಾಯಾಗ್ರಹಣ ಮತ್ತು ಭರತ್ ಬಿಜಿ ಸಂಗೀತ, ವಿಜಯ್ ರಾಜ್ ಸಂಕಲನ, ಹರಿ ಸಂಭಾಷಣೆ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾಗಿದೆ. ಆಕ್ಷನ್ ಟೀಸರ್ ಧಮಾಕ ಎಬ್ಬಿಸಿರುವ ಚಿತ್ರತಂಡ ನವೆಂಬರ್ ತಿಂಗಳಿಂದ ಶೂಟಿಂಗ್ ಅಖಾಡಕ್ಕೆ ಧುಮುಕಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ