ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆದಿತ್ಯ ಬಿರ್ಲಾ ಗ್ರೂಪ್‌ ಗ್ರಾಸಿಮ್‌ ಇಂಡಸ್ಟ್ರೀಸ್‌ ವತಿಯಿಂದ ಎಂಜಿನಿಯರಿಂಗ್‌ ಡಿಪ್ಲೊಮಾ ಪದವೀಧರರಿಗೆ ಉದ್ಯೋಗಾವಕಾಶ

Twitter
Facebook
LinkedIn
WhatsApp
ಆದಿತ್ಯ ಬಿರ್ಲಾ ಗ್ರೂಪ್‌ ಗ್ರಾಸಿಮ್‌ ಇಂಡಸ್ಟ್ರೀಸ್‌ ವತಿಯಿಂದ ಎಂಜಿನಿಯರಿಂಗ್‌ ಡಿಪ್ಲೊಮಾ ಪದವೀಧರರಿಗೆ ಉದ್ಯೋಗಾವಕಾಶ

ಮಂಗಳೂರು: ಆದಿತ್ಯ ಬಿರ್ಲಾ ಗ್ರೂಪ್‌ ಗ್ರಾಸಿಮ್‌ ಇಂಡಸ್ಟ್ರೀಸ್‌ ಚಾಮರಾಜನಗರ ವತಿಯಿಂದ ಚಾಮರಾಜನಗರದಲ್ಲಿ ಖಾಲಿ ಇರುವ ಡಿಪ್ಲೊಮಾ ಎಂಜಿನಿಯರ್‌ ಪ್ರೊಡಕ್ಷನ್‌ ಕ್ವಾಲಿಟಿ ಮೆಟೀರಿಯಲ್‌ ಹ್ಯಾಂಡಲಿಂಗ್‌ ಮತ್ತು ಸೆಕ್ಷನಲ್‌ ಎಂಜಿನಿಯರ್‌ ಹುದ್ದೆಗಳಿಗೆ ನೇರ ಸಂದರ್ಶನ ನ. 10ರಂದು ಬೆಳಗ್ಗೆ 10ರಿಂದ 1.30ರ ವರೆಗೆ ಲಾಲ್‌ಬಾಗ್‌ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ.

ಡಿಪ್ಲೊಮಾ ಎಂಜಿನಿಯರ್‌ ಹುದ್ದೆಯ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಡಿಪ್ಲೊಮಾ ಕೆಮಿಕಲ್‌, ಮೆಕ್ಯಾನಿಕಲ್‌, ಪೆಟ್ರೋ ಕೆಮಿಕಲ್‌ ವಿದ್ಯಾರ್ಹತೆಯೊಂದಿಗೆ 2 ರಿಂದ 4 ವರ್ಷಗಳ ಅನುಭವ ಹೊಂದಿರಬೇಕು. 26 ವರ್ಷ ವಯಸ್ಸಿನ ಒಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.

ಸೆಕ್ಷನಲ್‌ ಎಂಜಿನಿಯರ್‌ ಹುದ್ದೆಗೆ ಬಿಇ ಮೆಕ್ಯಾನಿಕಲ್‌ ವಿದ್ಯಾರ್ಹತೆಯೊಂದಿಗೆ 3ರಿಂದ 8 ವರ್ಷ ಅನುಭವ ಅಥವಾ ಡಿಪ್ಲೊಮಾ ಮೆಕ್ಯಾನಿಕಲ್‌ ಅಭ್ಯರ್ಥಿಗಳು 5ರಿಂದ 9 ವರ್ಷ ಅನುಭವ ಹೊಂದಿರಬೇಕು. ಸಂದರ್ಶನಕ್ಕೆ ಹಾಜರಾಗುವವರು ಸ್ವ ವಿವರವುಳ್ಳ ಬಯೋಡೇಟಾದೊಂದಿಗೆ ಭಾಗವಹಿಸಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಅವಧಿಯ ಸಾಮೂಹಿಕ ವಿವಾಹಕ್ಕೆ ‘ಮಾಂಗಲ್ಯ ಭಾಗ್ಯ’ ಎಂದು ಮರುನಾಮಕರಣ

ಬೆಂಗಳೂರು: ಬಿಜೆಪಿ (BJP) ಸರ್ಕಾರದ ಸಪ್ತಪದಿ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹದ (Mass Marriage) ಹೆಸರನ್ನು ಇದೀಗ ರಾಜ್ಯ ಕಾಂಗ್ರೆಸ್ (Congress) ಸರ್ಕಾರ ಮಾಂಗಲ್ಯ ಭಾಗ್ಯ (Mangalya Bhagya) ಎಂದು ಮರುನಾಮಕರಣ ಮಾಡಿದೆ.

ನವೆಂಬರ್‌ನಿಂದ ಜನವರಿಯವರೆಗೆ ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಿಗದಿತ ದಿನಕ್ಕೆ ಸಾಮೂಹಿಕ ಸರಳ ವಿವಾಹ ಜರುಗುತ್ತದೆ. ಆಯಾಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮುಜರಾಯಿ ಇಲಾಖೆಯ ಎ ಮತ್ತು ಬಿ ದೇಗುಲಗಳಲ್ಲಿ ಮಾಂಗಲ್ಯ ಭಾಗ್ಯ ವಿವಾಹ ಕಾರ್ಯಕ್ರಮ ನಡೆಯಲಿದೆ. 

ದೇಗುಲದಲ್ಲಿ ವೆಚ್ಚ ಭರಿಸಲು ಹಣ ಇಲ್ಲದ ಸಂದರ್ಭದಲ್ಲಿ ಸಾಮಾನ್ಯ ಸಂಗ್ರಹಣ ನಿಧಿಯಿಂದ 60 ಸಾವಿರ ರೂ. ಬಳಕೆಗೆ ಅನುಮತಿಸಲಾಗಿದೆ. ನವೆಂಬರ್ 16, 19, 19, ಡಿಸೆಂಬರ್ 7, 10 ಮತ್ತು ಜನವರಿಯಲ್ಲಿ 28, 31 ರಂದು ಮಾಂಗಲ್ಯ ಭಾಗ್ಯ ಯೋಜನೆಯ ಸಾಮೂಹಿಕ ವಿವಾಹ ನಡೆಯಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ