ಸುಪ್ರೀಂ ಕೋರ್ಟ್ ನೋಟೀಸ್ ಬಳಿಕ ಹಾಜರಾಗಿ ಕ್ಷಮೆ ಕೇಳಿದ ಬಾಬಾ ರಾಮದೇವ್ ಪತಂಜಲಿ ಸಂಸ್ಥೆ.!
ನವದೆಹಲಿ: ಔಷಧಿಗಳ ಪರಿಣಾಮಕಾರಿತ್ವ ಕುರಿತು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಮುಂದೆ ಪತಂಜಲಿ ಆಯುರ್ವೇದ್ ಮತ್ತು ಅದರ ಎಂಡಿ ಆಚಾರ್ಯ ಬಾಲಕೃಷ್ಣ ಅವರು ಬೇಷರತ್ ಕ್ಷಮೆಯಾಚಿಸಿದ್ದಾರೆ. ಅದನ್ನು ಪುನರಾವರ್ತಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 2 ರಂದು ಬಾಬಾ ರಾಮದೇವ್ ಮತ್ತು ಬಾಲಕೃಷ್ಣ ಖುದ್ದು ಹಾಜರಾಗುವಂತೆ ಕೋರ್ಟ್ ಆದೇಶಿಸಿದೆ.
ಕಾನೂನು ಸುವ್ಯವಸ್ಥೆಗೆ ಅಪಾರ ಗೌರವ ಹೊಂದಿರುವುದಾಗಿ ಬಾಲಕೃಷ್ಣ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೇಳಿದ್ದಾರೆ. ಕ್ಷಮೆಯಾಚಿಸಿರುವ ಅವರು, ಕಂಪನಿಯು ಭವಿಷ್ಯದಲ್ಲಿ ಅಂತಹ ಜಾಹೀರಾತುಗಳನ್ನು ನೀಡುವುದಿಲ್ಲ ಎಂದು ಖಾತ್ರಿಪಡಿಸುವುದಾಗಿ ಹೇಳಿದ್ದಾರೆ.
ಆಯುರ್ವೇದ ಸಂಶೋಧನೆಯಿಂದ ಪೂರಕವಾದ ಮತ್ತು ಬೆಂಬಲಿತ ವಸ್ತುಗಳ ಬಳಕೆ ಸೇರಿದಂತೆ ಪತಂಜಲಿಯ ಉತ್ಪನ್ನಗಳನ್ನು ಸೇವಿಸುವ ಮೂಲಕ ಆರೋಗ್ಯಕರ ಜೀವನವನ್ನು ನಡೆಸಲು ಈ ದೇಶದ ನಾಗರಿಕರನ್ನು ಉತ್ತೇಜಿಸುವುದು” ಕಂಪನಿಯ ಉದ್ದೇಶವಾಗಿದೆ ಎಂದು ಬಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ.
ಸಣ್ಣ ಮಟ್ಟದ ಸ್ಥಳೀಯ ಚುನಾವಣಾ ಪ್ರಚಾರ ಸಭೆಗಳಿಗೆ ಪಕ್ಷದ ರಾಜ್ಯ ಘಟಕವು 22 ವಿವಿಧ ಘಟಕಗಳನ್ನು ಸ್ಥಾಪಿಸಿದೆ. ಇದರಲ್ಲಿ ರೈತರು, ವಕೀಲರು, ವೈದ್ಯರು ಹಾಗೂ ಕೇಂದ್ರ ಸರ್ಕಾರ ಯೋಜನೆಗಳ ಫಲಾನುಭವಿಗಳು ಸೇರಿದ್ದಾರೆ.
ಸಂಸ್ಥೆಯ ಉತ್ಪನ್ನಗಳ ಜಾಹೀರಾತುಗಳು ಮತ್ತು ಅವುಗಳ ಔಷಧೀಯ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆಗೆ ನೀಡಲಾದ ನೋಟಿಸ್‌ಗೆ ಪ್ರತಿಕ್ರಿಯಿಸಲು ವಿಫಲವಾದ ನಂತರ ಸುಪ್ರೀಂ ಕೋರ್ಟ್ ಮಂಗಳವಾರ ಯೋಗ ಗುರು ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಖುದ್ದು ಹಾಜರಾಗುವಂತೆ ಸೂಚಿಸಿದೆ.
Patanjali Ayurved Managing Director Acharya Balkrishna submits unqualified apology over alleged misleading advertisements
— ANI (@ANI) March 21, 2024
Acharya Balkrishna, in an affidavit to Supreme Court, says that he will ensure that such advertisements are not issued in the future and submits that its… pic.twitter.com/jgyl0EsNA9
ಏನಿದು ಪ್ರಕರಣ?
ಪತಂಜಲಿ ಸಂಸ್ಥೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು (IMA) ಅರ್ಜಿ ಸಲ್ಲಿಸಿದೆ. ಪತಂಜಲಿ ಸಂಸ್ಥೆಯು ಕೊರೊನಾ ನಿರೋಧಕ ಲಸಿಕೆ ಹಾಗೂ ಆಧುನಿಕ ಔಷಧ ಪದ್ಧತಿ ಬಗ್ಗೆ ಸುಳ್ಳು ಅಭಿಯಾನ ಆರಂಭಿಸಿದೆ. ಅಷ್ಟೇ ಅಲ್ಲ, ಅಲೋಪಥಿ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಜನರ ದಾರಿ ತಪ್ಪಿಸುವ ರೀತಿ ಪತಂಜಲಿ ಸಂಸ್ಥೆಯು ಜಾಹೀರಾತುಗಳನ್ನು ನೀಡುತ್ತಿದೆ. ಇದು ಡ್ರಗ್ಸ್ ಆ್ಯಂಡ್ ಮ್ಯಾಜಿಕ್ ರೆಮೆಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಐಎಂಎ ಅರ್ಜಿ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್ ಅಮಾನುಲ್ಲಾ ಅವರು ಬಾಬಾ ರಾಮದೇವ್ ಹಾಗೂ ಆಚಾರ್ಯ ಬಾಲಕೃಷ್ಣ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.