ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೂರದರ್ಶನದ ನೇರ ಪ್ರಸಾರದ ವೇಳೆ ಕುಸಿದುಬಿದ್ದು ಕೃಷಿ ತಜ್ಞ ಸಾವು...!

Twitter
Facebook
LinkedIn
WhatsApp
ದೂರದರ್ಶನದ ನೇರ ಪ್ರಸಾರದ ವೇಳೆ ಕುಸಿದುಬಿದ್ದು ಕೃಷಿ ತಜ್ಞ ಸಾವು...!

ದೂರದರ್ಶನದ ನೇರ ಪ್ರಸಾರದ ವೇಳೆ ಕೃಷಿ ತಜ್ಞ ಅನಿ ಎಸ್ ದಾಸ್ (59) ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೃಷಿ ತಜ್ಞ ಅವರು ಶುಕ್ರವಾರ ದೂರದರ್ಶನದಲ್ಲಿ ನೇರ ಪ್ರಸಾರದ ವೇಳೆ ಕುಸಿದುಬಿದ್ದು ನಿಧನರಾಗಿದ್ದಾರೆ. ಕೇರಳದ ತಿರುವನಂತಪುರಂನಲ್ಲಿರುವ ದೂರದರ್ಶನ ವಾಹಿನಿಯಲ್ಲಿ ಕೃಷಿ ದರ್ಶನ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ.

ತಜ್ಞರನ್ನು ತಿರುವನಂತಪುರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ದಾಸ್ ಅವರು ಕೇರಳ ಫೀಡ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ (MD) ಸೇವೆ ಸಲ್ಲಿಸಿದರು ಮತ್ತು ಕೇರಳ ಕೃಷಿ ವಿಶ್ವವಿದ್ಯಾಲಯದಲ್ಲಿ ಸಂವಹನ ಕೇಂದ್ರದ ಮುಖ್ಯಸ್ಥರಾಗಿದ್ದರು. ದೂರದರ್ಶನ ಕೃಷಿ ದರ್ಶನ ಕಾರ್ಯಕ್ರಮವು ಶುಕ್ರವಾರ ಸಂಜೆ 6.30ರ ಸುಮಾರಿಗೆ ನಡೆಯಿತು.

ಲೈವ್ ಟಿವಿ ಕಾರ್ಯಕ್ರಮದ ಸಮಯದಲ್ಲಿ, ಕೃಷಿ ತಜ್ಞರು ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ದೂರದರ್ಶನದಲ್ಲಿ ಪ್ರಸಾರವಾಗುವ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ಆಗಾಗ ಭಾಗವಹಿಸುತ್ತಿದ್ದರು.

ಒಡಿಶಾದ ಜಗನ್ನಾಥ ದೇವಾಲಯದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್(Dharmendra Pradhan) ಒಡಿಶಾದ ಅಂಗುಲ್ ಜಿಲ್ಲೆಯಲ್ಲಿರುವ ಜಗನ್ನಾಥ ದೇವಾಲಯ(Jagannath Temple)ದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು. ಅಯೋಧ್ಯೆಯಲ್ಲಿ ರಾಮಮಂದಿರ(Ram Mandir)ದ ಉದ್ಘಾಟನಾ ಕಾರ್ಯಕ್ರಮಕ್ಕೂ ಮುನ್ನ ದೇಶಾದ್ಯಂತ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಾಲಯಗಳ ಸ್ವಚ್ಛತಾ ಅಭಿಯಾನಕ್ಕೆ ಪ್ರಧಾನ್ ಚಾಲನೆ ನೀಡಿದ್ದಾರೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು ಮುಂಜಾನೆ ಅಂಗುಲ್ ಜಿಲ್ಲೆಯ ಜಗನ್ನಾಥ ದೇವಾಲಯಕ್ಕೆ ತೆರಳಿದ್ದಾರೆ. ಧರ್ಮೇಂದ್ರ ಪ್ರಧಾನ್ ಇಲ್ಲಿನ ದೇವಸ್ಥಾನದೊಳಗೆ ಪೂಜೆ ಸಲ್ಲಿಸಿದರು. ಆರತಿ ತೆಗೆದುಕೊಂಡು ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗವಹಿಸಿ ನಂತರ ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆಗೆ ಸಹಕರಿಸಿದರು. ಈ ಅವಧಿಯಲ್ಲಿ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಇನ್ನೂ ಅನೇಕ ಜನರು ದೇವಾಲಯವನ್ನು ಸ್ವಚ್ಛಗೊಳಿಸಿದರು.

ನಾಸಿಕ್‌ನಲ್ಲಿ ಯುವ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುವಾಗ, ದೇವಾಲಯಗಳ ಒಳಗೆ ಸ್ವಚ್ಛತಾ ಅಭಿಯಾನವನ್ನು ನಡೆಸುವಂತೆ ದೇಶದ ಜನತೆಗೆ ಮನವಿ ಮಾಡಿದ್ದರು. ಜನವರಿ 22ರೊಳಗೆ ದೇಶದ ಮೂಲೆ ಮೂಲೆಯಲ್ಲಿರುವ ಎಲ್ಲ ದೇವಸ್ಥಾನಗಳನ್ನು ಸ್ವಚ್ಛಗೊಳಿಸಬೇಕು ಎಂದು ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ