ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿರುಗಾಳಿ ಮಳೆಗೆ ವಿಮಾನ ನಿಲ್ದಾಣದ ಸೀಲಿಂಗ್ ಕುಸಿತ ; ಇಲ್ಲಿದೆ ವಿಡಿಯೋ

Twitter
Facebook
LinkedIn
WhatsApp
ಬಿರುಗಾಳಿ ಮಳೆಗೆ ವಿಮಾನ ನಿಲ್ದಾಣದ ಸೀಲಿಂಗ್ ಕುಸಿತ ಇಲ್ಲಿದೆ ವಿಡಿಯೋ

ಗುವಾಹಟಿ: ಭೀಕರ ಬಿಸಿಲಿನ ನಡುವೆಯೂ ದೇಶದ ಉತ್ತರ ಭಾಗದ ಬಹುತೇಕ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಇನ್ನು ಅಸ್ಸಾಂನ ಗುವಾಹಟಿಯಲ್ಲಿ ಸುರಿದ ಬಿರುಗಾಳಿ ಮಳೆಗೆ ಲೋಕಪ್ರಿಯ ಗೋಪಿನಾಥ ಬೋರ್ದಲೋಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ಕೆಲ ಭಾಗದ ಸೀಲಿಂಗ್‌ ಕುಸಿದಿದ್ದು, ಈ ವಿಡಿಯೋ ಇದೀಗ ಟ್ವಿಟ್ಟರ್‌ನಲ್ಲಿ ಹರಿದಾಡುತ್ತಿದೆ.

ಈಗಾಗಲೇ ಹವಾಮಾನ ಇಲಾಖೆ ಮಾರ್ಚ್‌ ಅಂತ್ಯದ ವೇಳೆಗೆ ದೇಶದ ಉತ್ತರ ಭಾಗದ ಬಹುತೇಕ ಭಾಗಗಳಲ್ಲಿ ಅಬ್ಬರದ ಮಳೆಯಾಗಲಿದೆ ಎಂದು ಮುನ್ಸಚನೆ ನೀಡಿದೆ. ಅದರಂತೆಯೇ ಇದೀಗ ಅಸ್ಸಾಂನಲ್ಲಿ ಗುವಾಹಟಿಯಲ್ಲಿ ಭೀಕರ ಮಳೆಯಾದ ಪರಿಣಾಮ ಇಲ್ಲಿನ ಲೋಕಪ್ರಿಯ ಗೋಪಿನಾಥ ಬೋರ್ದಲೋಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಒಳಗೆ ಹಲವು ಭಾಗದ ಸೀಲಿಂಗ್‌ ಕುಸಿದಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಈಗಾಗಲೇ ಹವಾಮಾನ ಇಲಾಖೆ ಮಾರ್ಚ್‌ ಅಂತ್ಯದ ವೇಳೆಗೆ ದೇಶದ ಉತ್ತರ ಭಾಗದ ಬಹುತೇಕ ಭಾಗಗಳಲ್ಲಿ ಅಬ್ಬರದ ಮಳೆಯಾಗಲಿದೆ ಎಂದು ಮುನ್ಸಚನೆ ನೀಡಿದೆ. ಅದರಂತೆಯೇ ಇದೀಗ ಅಸ್ಸಾಂನಲ್ಲಿ ಗುವಾಹಟಿಯಲ್ಲಿ ಭೀಕರ ಮಳೆಯಾದ ಪರಿಣಾಮ ಇಲ್ಲಿನ ಲೋಕಪ್ರಿಯ ಗೋಪಿನಾಥ ಬೋರ್ದಲೋಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಒಳಗೆ ಹಲವು ಭಾಗದ ಸೀಲಿಂಗ್‌ ಕುಸಿದಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಪೈಪ್‌ಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಸಂಗ್ರಹ ಆಗಿದ್ದರಿಂದ ಸೀಲಿಂಗ್‌ ಕುಸಿದಿದ್ದು, ಈ ವೇಳೆ ಯಾರಿಗೂ ಯಾವುದೇ ಹಾನಿ ಆಗಿಲ್ಲ ಎಂದು ವಿಮಾನ ನಿಲ್ದಾಣ ಮೂಲಗಳು ಮಾಹಿತಿ ತಿಳಿಸಿವೆ. ಇನ್ನು ವಿಮಾನ ನಿಲ್ದಾಣದೊಳಗೆ ಸೀಲಿಂಗ್‌ ಕುಸಿದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೊದಲ್ಲಿ ಹಲವು ಪ್ರಯಾಣಿಕರು ವಿಮಾನ ನಿಲ್ದಾಣದ ಹೊರಭಾಗದಲ್ಲಿ ನಿಂತಿರುವುದನ್ನು ಕಾಣಬಹದಾಗಿದೆ. ದಿಢೀರ್‌ ಒಂದು ಭಾಗದ ಸೀಲಿಂಗ್‌ ಕುಸಿದಿದ್ದು, ಅಲ್ಲಿದ್ದ ಜನರು ದಿಕ್ಕಾಪಾಲಾಗಿ ಓಡಿಹೋಗಿದ್ದಾರೆ. ಮತ್ತೊಂದೆಡೆ ವಿಮಾನ ನಿಲ್ದಾಣದ ಒಳಗಡೆ ಮಳೆ ನೀರು ಬೀಳುತ್ತಿರುವ ದೃಶ್ಯ ಕೂಡ ವಿಡಿಯೋದಲ್ಲಿ ಸೆರೆ ಆಗಿದೆ.

ಪ್ರತಿಕೂಲ ವಾತಾವರಣದ ಹಿನ್ನೆಲೆ ಇಂಡಿಗೋ, ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸೇರಿದಂತೆ ಒಟ್ಟು 6 ವಿಮಾನ ನಿಲ್ದಾಣಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ. ಇನ್ನು ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಮಳೆ ಕುರಿತ ಅವಘಡಗಳಲ್ಲಿ ಈವರೆಗೆ ಐವರು ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ