ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ಷಯ್ ಕಲ್ಲೇಗ ಮೇಲೆ 58 ಬಾರಿ ತಲವಾರಿನಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು ; ಪೊಲೀಸರಿಂದ ಮಹಜರು..!

Twitter
Facebook
LinkedIn
WhatsApp
ಪುತ್ತೂರು : ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಬರ್ಬರ ಕೊಲೆ...!

ಪುತ್ತೂರು :  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ ಅಕ್ಷಯ್ ಕಲ್ಲೇಗ  ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು ಬಯಲಾಗಿದೆ.

ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಚೇತನ್, ಮನೀಶ್, ಮಂಜ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿ ಅಕ್ಷಯ್ ಮೇಲೆ ಮಚ್ಚು ಬೀಸಿರೋ ಶಂಕೆ ವ್ಯಕ್ತವಾಗುತ್ತಿದೆ. 58 ಬಾರಿ ತಲವಾರಿನಿಂದ ಹಲ್ಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ ಬಂದಿದೆ. ಅಕ್ಷಯ್ ದೇಹದ ಮೇಲಿನ ಗಾಯ ಕಂಡು ವೈದ್ಯರೇ ಶಾಕ್ ಆಗಿದ್ದಾರೆ. ಹಂತಕರು ಮನಸೋ ಇಚ್ಛೆ ಅಕ್ಷಯ್ ಮೇಲೆ ತಲವಾರು ಬೀಸಿದ್ದಾರೆ.ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಪುತ್ತೂರಿನ ನೆಹರು ನಗರದ ಅಕ್ಷಯ್ ಮನೆಗೆ ಮೃತದೇಹ ಆಗಮಿಸುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು.

ನಿಮ್ಮನ್ನು ಬಿಡುವುದಿಲ್ಲ:

ಈ ಮಧ್ಯೆ ಆರೋಪಿಗಳೊಂದಿಗೆ ಪೋಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ನೇತೃತ್ವದಲ್ಲಿ ಮೂವರು ಆರೋಪಿಗಳನ್ನು ಕೃತ್ಯ ನಡೆದ ಸ್ಥಳಕ್ಕೆ ಕರಕೊಂಡು ಹೋಗಿ ಮಹಜರು ನಡೆಸಿದರು.

ಅಕ್ಷಯ್ ಕಲ್ಲೇಗ ಮೇಲೆ 58 ಬಾರಿ ತಲವಾರಿನಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು ; ಪೊಲೀಸರಿಂದ ಮಹಜರು..!

ನೆಹರೂ ನಗರಕ್ಕೆ ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಕರಕೊಂಡು ಬಂದಾಗ ಆರೋಪಿಗಳನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ಮಹಜರು ಸ್ಥಳದಲ್ಲೇ ಅಕ್ಷಯ್ ಕಲ್ಲೇಗ ಗುಂಪು ಆರೋಪಿಗಳಿಗೆ ಎಚ್ಚರಿಕೆ ನೀಡಿದ್ದು ನಿಮ್ಮನ್ನು ಬಿಡುವುದಿಲ್ಲ ಎಂದು ಆಕೋಶ ವ್ಯಕ್ತಪಡಿಸಿ ಪರಿಸ್ಥಿತಿ ವಿಕೋಪಕ್ಕೆ ತೆರಳುವುದನ್ನು ಗಮನಿಸಿದ ಪೋಲಿಸರು ಕೂಡಲೇ ಜನರನ್ನು ಚದುರಿಸಿ ಮಹಜರಿಗೆ ಅನುವು ಮಾಡಿಕೊಟ್ಟರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ