ಬುಧವಾರ, ಫೆಬ್ರವರಿ 21, 2024
ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!

Twitter
Facebook
LinkedIn
WhatsApp
ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!

ಹಾವೇರಿ: ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ (First PU Student) ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ (Self Immolation) ಮಾಡಿಕೊಂಡ (Student death) ಭೀಕರ ಘಟನೆ ಹಾವೇರಿ ಜಿಲ್ಲೆಯ (Haveri News) ಹಾನಗಲ್ ತಾಲೂಕಿನ ಡೊಳ್ಳೆಶ್ವರ ಗ್ರಾಮದಲ್ಲಿ ನಡೆದಿದೆ. ಇದಕ್ಕೆ ಕಾಲೇಜಿನ ಪ್ರಿನ್ಸಿಪಾಲ್‌ ಅವರ ಕಿರುಕುಳವೇ ಕಾರಣ ಎಂದು ಮನೆಯವರು ಆರೋಪಿಸಿದ್ದಾರೆ.

ಹಾನಗಲ್ ಪಟ್ಟಣದ ಎನ್ ಸಿಜೆಸಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಆದಿತ್ಯ ರಘುವೀರ ಚವ್ಹಾಣ (16) ಆತ್ಮಹತ್ಯೆ ಮಾಡಿಕೊಂಡವನು. ಆತ ಮಂಗಳವಾರ ಸಂಜೆ ತನ್ನ ಮನೆಯಲ್ಲೇ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆಯಾದರೂ ಆತ ಬದುಕುಳಿಯಲಿಲ್ಲ.

ಆದಿತ್ಯ ಎನ್ ಸಿಜೆಸಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದ. ಆತ ಪ್ರಾಂಶುಪಾಲರ ಕಿರುಕುಳ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಾಲಕರು ಆರೋಪಿಸಿದ್ದಾರೆ. ಪ್ರಾಂಶುಪಾಲೆ ಅನಿತಾ ಹೊಸಮನಿ ಅವರು ಕಿರುಕುಳ ನೀಡಿದ್ದಾರೆ ಎನ್ನುವುದು ಮನೆಯವರ ಆರೋಪ.

ಅದಿತ್ಯನಿಗೆ ಪ್ರಿನ್ಸಿಪಾಲ್‌ ಬೈದಿದ್ದು, ಅದರಿಂದ ನೋವನುಭವಿಸಿ ಆತ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಪ್ರಿನ್ಸಿಪಾಲರು ಆದಿತ್ಯನಿಗೆ ಮಾತ್ರವಲ್ಲ, ಹಲವರಿಗೆ ಇದೇ ರೀತಿ ಅಪಮಾನ ಮಾಡಿದ್ದಾರೆ ಎಂದು ಮನೆಯವರು ಹೇಳುತ್ತಾರೆ.

ಈ ನಡುವೆ ಆದಿತ್ಯ ಕಾಲೇಜಿಗೆ ಸರಿಯಾಗಿ ಹೋಗುತ್ತಿರಲಿಲ್ಲ, ಇದಕ್ಕಾಗಿ ಪ್ರಿನ್ಸಿಪಾಲರು ಕರೆದು ಬುದ್ಧಿ ಹೇಳಿದ್ದಾರೆ. ಇದನ್ನೇ ಇಟ್ಟುಕೊಂಡು ಆತ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಕೂಡಾ ಹೇಳಲಾಗುತ್ತಿದೆ.

ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಸುಟ್ಟು ಹೋದ ಆದಿತ್ಯನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟು ಹೊತ್ತಿಗಾಗಲೇ ದೇಹ ಸಂಪೂರ್ಣ ಸುಟ್ಟು ಹೋಗಿದ್ದರಿಂದ ಆತ ಬದುಕುಳಿಯಲಿಲ್ಲ ಎನ್ನಲಾಗಿದೆ.

ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಸ್ಪತ್ರೆಯಲ್ಲಿರುವಾಗಲೇ ತನ್ನ ಸಾವಿಗೆ ಸಂಬಂಧಿಸಿ ಆದಿತ್ಯ ಮಾತನಾಡಿರುವ ವಿಡಿಯೋಗ ಈ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ Twitter Facebook LinkedIn WhatsApp Drago Fruit; ಡ್ರಾಗನ್ ಫ್ರೂಟ್ ಒಂದು ಆರೋಗ್ಯದಾಯಕ ಹಣ್ಣು. ‘ಸಿ’ ಮತ್ತು ‘ಬಿ’