ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ; ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲು..!
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಡ ನಡೆಸುತ್ತಿರುವ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ. ಈ ನಡುವೆ ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ.