ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!

Twitter
Facebook
LinkedIn
WhatsApp
ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!
ಲೋಕಸಭೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಹಿನ್ನೆಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ (ಮಾರ್ಚ್‌ 28) ಐಪಿಸಿ ಕಲಂ 188ರ ಅಡಿ ಸಮನ್ಸ್‌ ಜಾರಿ ಮಾಡಿ ಆದೇಶ ಹೊರಡಿಸಿದೆ.

ಬೆಳಗಾವಿಯ ಕುವೆಂಪು ನಗರದ ತಮ್ಮ ಗೃಹ ಕಚೇರಿ ಸಮೀಪದ ಸಭಾಂಗಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಚ್ 20ರಂದು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರ ಜೊತೆ ಸಭೆ ನಡೆಸಿದ್ದರು. ಈ ಸಭೆಗೆ ಅನುಮತಿ ಪಡೆದಿರಲಿಲ್ಲ. ಈ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಎದುರಾಗಿತ್ತು.

ಅಷ್ಟೇ ಅಲ್ಲದೇ ತಮ್ಮ ಪುತ್ರ, ಕಾಂಗ್ರೆಸ್​ ಅಭ್ಯರ್ಥಿ ಮೃಣಾಲ್ ಪರ ಪ್ರಚಾರ ಮಾಡುವಂತೆಯೂ ಸಭೆಯಲ್ಲಿ ಹೆಬ್ಬಾಳ್ಕರ್ ಸೂಚಿಸಿದ್ದರು ಎಂಬ ಆರೋಪ ಇದ್ದು, ಇದರ ಬೆನ್ನಲ್ಲೇ ಹೆಬ್ಬಾಳ್ಕರ್ ಅವರಿಗೆ ಸಮನ್ಸ್ ಜಾರಿಯಾಗಿದ್ದು, ಏಪ್ರಿಲ್ 30ರೊಳಗೆ ಉತ್ತರ ನೀಡುವಂತೆ ಸಮನ್ಸ್‌ ಜಾರಿ ಮಾಡಲಾಗಿದೆ. ಎರಡನೇ ಆರೋಪಿಯಾಗಿ ಸಭೆಗೆ ಅವಕಾಶ ಮಾಡಿಕೊಟ್ಟ ಸಭಾಂಗಣದ ಮಾಲೀಕ ಉಮೇಶ ಮಲ್ಲಪ್ಪ ವಾಸಣ್ಣ ಎಂಬವರಿಗೂ ಸಮನ್ಸ್‌ ಜಾರಿ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ ಮೌಲ್ಯ ನಾಲ್ಕು ಪಟ್ಟು ಹೆಚ್ಚಳ; ಎಷ್ಟು ಗೊತ್ತಾ?

ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರು ನಿನ್ನೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು (Property Value) ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ಎಂದು ಘೋಷಿಸಿದ್ದಾರೆ. 2019ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿ ಮೌಲ್ಯಕ್ಕೆ ನಾಲ್ಕು ಪಟ್ಟು ಹೆಚ್ಚಳವಾಗಿದೆ. 2019 ರ ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಅವರು ತಮ್ಮ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು.

ಪ್ರಜ್ವಲ್ ರೇವಣ್ಣ ಅವರು ಅಫಿಡವಿಟ್‌ನಲ್ಲಿ ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಈ ಪೈಕಿ 5.44 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ, 35.40 ಕೋಟಿ ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ. ಅಲ್ಲದೆ, 9.29 ಲಕ್ಷ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿವಿಧ ಬ್ಯಾಂಕ್​ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ನಗದು ಇದ್ದು, 5 ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ಆದಾಯ ಗಳಿಸಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಕೃಷಿಯೇತರ ಮೂಲದಿಂದ 1.33 ಕೋಟಿ ಆದಾಯ ಗಳಿಸಿದ್ದು, 31 ಹಸುಗಳು, 4 ಎತ್ತುಗಳು, 1 ಟ್ರ್ಯಾಕ್ಟರ್ ಹೊಂದಿದ್ದಾರೆ.

ಪ್ರಜ್ವಲ್ ರೇವಣ್ಣ ಮಾಡಿದ ಸಾಲ

ಬೆಂಗಳೂರು ನಗರ, ಮೈಸೂರು ಸೇರಿದಂತೆ ವಿವಿಧೆಡೆ ವಾಣಿಜ್ಯ ಕಟ್ಟಡ, ಹೊಳೆನರಸೀಪುರ, ನೆಲಮಂಗಲದಲ್ಲಿ ಆಸ್ತಿ ಹೊಂದಿದ್ದಾರೆ. ಅತ್ತೆ ಅನುಸೂಯಾರಿಂದ 22 ಲಕ್ಷ, ಅತ್ತೆ ಶೈಲಜಾರಿಂದ 10 ಲಕ್ಷ ಸಾಲ ಪಡೆದಿದ್ದು, ತಂದೆ ರೇವಣ್ಣರಿಂದ 86 ಲಕ್ಷ, ಸೋದರ ಸೂರಜ್​ರಿಂದ 1 ಕೋಟಿ ಸಾಲ ಮಾಡಿದ್ದಾರೆ. ಹೀಗೆ ಒಟ್ಟು 4.48 ಕೋಟಿ ಸಾಲ ಹೊಂದಿದ್ದಾರೆ.

ತೆರಿಗೆ ಬಾಕಿ ಉಳಿಸಿಕೊಂಡ ಪ್ರಜ್ವಲ್ ರೇವಣ್ಣ

ಸರ್ಕಾರಕ್ಕೆ 3.4 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. 67 ಲಕ್ಷ ಮೌಲ್ಯದ 1 ಕೆ.ಜಿ. 100 ಗ್ರಾಂ ಚಿನ್ನ ಹೊಂದಿದ್ದಾರೆ. 17.48 ಲಕ್ಷ ಮೌಲ್ಯದ 23 ಕೆ.ಜಿ. ಬೆಳ್ಳಿ, 1.90 ಲಕ್ಷ ಮೌಲ್ಯದ ವಜ್ರಾಭರಣ ಹೊಂದಿದ್ದಾರೆ. ಈ ಬಗ್ಗೆ ನಾಮಪತ್ರ ಸಲ್ಲಿಕೆ ವೇಳೆ ಘೋಷಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ