ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ; ವೈರಲ್ ಆಯ್ತು ಸರ್ಕಾರಿ ಅಧಿಕಾರಿಯ ಟೇಬಲ್ ಬೋರ್ಡ್!

Twitter
Facebook
LinkedIn
WhatsApp
ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ; ವೈರಲ್ ಆಯ್ತು ಸರ್ಕಾರಿ ಅಧಿಕಾರಿಯ ಟೇಬಲ್ ಬೋರ್ಡ್!

ಹಾಸನ: ‘ನಾನು ಭ್ರಷ್ಟನಲ್ಲ, ಲಂಚ ಸ್ವೀಕರಿಸುವುದಿಲ್ಲ’ ಎಂದು ಹಾಸನ ಬಿಇಒ ಕಚೇರಿ ಅಧೀಕ್ಷಕರೊಬ್ಬರು ಟೇಬಲ್‌ ಬೋರ್ಡ್‌ ಹಾಕಿರುವ ದೃಶ್ಯದ ಫೋಟೋ ಎಲ್ಲೆಡೆ ವೈರಲ್‌ ಆಗಿದೆ.

ಹಾಸನ (Hassan) ಬಿಇಒ ಕಚೇರಿಯ ಅಧೀಕ್ಷರಾಗಿರುವ ಡಿ.ಎಸ್.ಲೋಕೇಶ್‌ ತಮ್ಮ ಟೇಬಲ್‌ ಮೇಲೆ ‘ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ’ ಎನ್ನುವ ಬೋರ್ಡ್‌ ಹಾಕಿರುವುದು ಗಮನ ಸೆಳೆದಿದೆ. ಲೋಕೇಶ್‌ ಅವರು ತಮ್ಮ ಪ್ರಾಮಾಣಿಕತೆ ಹಾಗೂ ದಕ್ಷತೆಯ ಕಾರಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಸನ ಸಂಸದರಾಗಿದ್ದ ಅವಧಿಯಲ್ಲಿ ಅವರ ಕಚೇರಿಯ ಆಪ್ತ ಕಾರ್ಯದರ್ಶಿಯಾಗಿದ್ದರು.

ಕಳೆದ ಅವಧಿಯಲ್ಲಿ ಹಾಸನ ಕ್ಷೇತ್ರದ ಶಾಸಕರಾಗಿದ್ದ ಪ್ರೀತಂ ಜೆ.ಗೌಡರ ಆಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನೂ ಪಡೆದಿದ್ದರು. ತಮ್ಮ ವಿರುದ್ಧ ಆರೋಪಗಳು ಕೇಳಿ ಬರುವ ಅವಕಾಶ ನೀಡದಂತೆ ಕಾರ್ಯನಿರ್ವಹಿಸುತ್ತ ಜನಸ್ನೇಹಿಯಾಗಿ ಗುರುತಿಸಿಕೊಂಡಿದ್ದಾರೆ.

ಇತ್ತೀಚಿಗೆ ಬಿಇಒ ಕಚೇರಿ ಅಧೀಕ್ಷಕರಾಗಿ ಲೋಕೇಶ್‌ ಅವರು ಬಡ್ತಿ ಹೊಂದಿದ್ದಾರೆ. ತಾವು ಪ್ರಾಮಾಣಿಕ ಎಂದು ಎದೆತಟ್ಟಿ ಹೇಳಿಕೊಳ್ಳುವ ಧೈರ್ಯ ಪ್ರದರ್ಶನ ಮಾಡಿದ್ದಾರೆ. ಲೋಕೇಶ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಸರ್ಕಾರಿ ಅಧಿಕಾರಿಗಳು ಎಂದರೆ ಭ್ರಷ್ಟಚಾರಿಗಳು ಎಂಬ ಅಭಿಪ್ರಾಯಗಳೇ ಹೆಚ್ಚು. ಲಂಚ ಸ್ವೀಕರಿಸುವ ವೇಳೆ ಅಧಿಕಾರಿಗಳು ಲೋಕಾಯುಕ್ತ ಕೈಗೆ ಸಿಕ್ಕಿ ಬೀಳುವ ಅದೆಷ್ಟೋ ಸುದ್ದಿಗಳನ್ನು ಓದಿದ್ದೇವೆ. ಇಂತಹ ಸನ್ನಿವೇಶದಲ್ಲಿ ಅಲ್ಲಿ ಇಲ್ಲಿ ಬೆರಳೆಣಿಕೆಯಷ್ಟು ಪ್ರಾಮಾಣಿಕ ಅಧಿಕಾರಿಗಳು ಸಿಗುತ್ತಾರೆ. ಅಂತಹವರ ಸಾಲಿಗೆ ಲೋಕೇಶ್‌ ಅವರು ಸೇರಿದ್ದಾರೆ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಲೋಕೇಶ್‌ ಅವರ ಕರ್ತವ್ಯ ನಿಷ್ಠೆಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ರಾಜ್ಯಕ್ಕೆ ಉತ್ತಮ ಮಳೆಯಾಗಲೆಂದು ಹಾಸನಾಂಬೆಗೆ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದ ಸಿಎಂ

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದು ಪ್ರಸಿದ್ಧ ಹಾಸನಾಂಬ ದೇವಸ್ಥಾನಕ್ಕೆ ತೆರಳಿ ದೇವಿಯ (Hasanamba Temple) ದರ್ಶನ ಪಡೆದು, ನಾಡಿನ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು.

ರಾಜ್ಯದಲ್ಲಿ ಮಳೆ (Rain In Karnataka) ಬರಲಿ ಎಂದು ಭಕ್ತಿಯಿಂದ ಪ್ರಾರ್ಥನೆ ಮಾಡಿದರು. ಮುಂಗಾರು ಕೈ ಕೊಟ್ಟಿದೆ, ಆದ್ದರಿಂದ ಮಳೆ ಬರಬೇಕು, ಹಿಂಗಾರಾದ್ರು ಬರಲೆಂದು ಭಕ್ತಿ-ಭಾವದಿಂದ ಪ್ರಾರ್ಥಿಸಿದ್ದಾರೆ. ಜೋಳ, ಭತ್ತ, ರಾಗಿ, ಕಡ್ಲೆ ಇವು ಪ್ರಮುಖ ಬೆಳೆಗಳು, ಮುಂಗಾರಿಲ್ಲದೇ ಬೆಳೆ ಹಾನಿಯಾಗಿವೆ, ಎಲ್ಲರಿಗೂ ತೊಂದರೆಯಾಗಿದೆ. ಮಳೆ ಬಂದರೆ ಜಾನುವಾರುಗಳಿಗೂ ಮೇವು ಸಿಗುತ್ತದೆ. ಆದ್ದರಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುವಂತೆ ಭಕ್ತಿಯಿಂದ ಪ್ರಾರ್ಥಿಸಿರುವುದಾಗಿ ಸಿಎಂ ಹೇಳಿದರು.

ಸಿಎಂ ಆಗಮನದ ವೇಳೆ ದೇವಸ್ಥಾನದ ಸುತ್ತಲೂ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.

ಹಾಸನಾಂಬೆ ದರ್ಶನದ ಬಳಿಕ ಎಸ್.ಎಂ ಕೃಷ್ಣನಗರದಲ್ಲಿ ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಳಿಕ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ