ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಸ್ರೇಲ್ ಗೆ ಅಮೆರಿಕ ಸಾಥ್ ; ಯುದ್ಧನೌಕೆ ಮತ್ತು ಯುದ್ಧ ವಿಮಾನಗಳನ್ನು ಕಳುಹಿಸಿದ ಅಮೇರಿಕಾ..!

Twitter
Facebook
LinkedIn
WhatsApp
ಇಸ್ರೇಲ್ ಗೆ ಅಮೆರಿಕ ಸಾಥ್ ; ಯುದ್ಧನೌಕೆ ಮತ್ತು ಯುದ್ಧ ವಿಮಾನಗಳನ್ನು ಕಳುಹಿಸಿದ ಅಮೇರಿಕಾ..!

ಇಸ್ರೇಲ್: ಉಗ್ರಗಾಮಿ ಸಂಘಟನೆ ಹಮಾಸ್ ಶನಿವಾರ ಇಸ್ರೇಲ್​ ಮೇಲೆ 5 ಸಾವಿರಕ್ಕೂ ಅಧಿಕ ರಾಕೆಟ್ ದಾಳಿ ನಡೆಸಿದ್ದು, ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ಕೃತ್ಯವನ್ನು ಅಮೆರಿಕ ಹಾಗೂ ಭಾರತ ಖಂಡಿಸಿದೆ. ಇಸ್ರೇಲ್​ಗೆ ತಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡುತ್ತೇವೆ ಎಂದು ಎರಡೂ ದೇಶಗಳು ಅಭಯ ನೀಡಿವೆ.

ಅದರಂತೆ ಅಮೆರಿಕವು ಇಸ್ರೇಲ್​ ಸೈನಿಕರಿಗೆ ಸಹಾಯವಾಗುವಂತೆ ಯುದ್ಧ ನೌಕೆಯನ್ನು ಕಳುಹಿಸಿದೆ, ಯುದ್ಧ ವಿಮಾನವನ್ನು ಕೂಡ ಕಳುಹಿಸಲು ತಯಾರಿ ನಡೆಸುತ್ತಿದೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಅದೇ ಸಮಯದಲ್ಲಿ, ಹಮಾಸ್ 100 ಕ್ಕೂ ಹೆಚ್ಚು ಜನರನ್ನು ಒತ್ತೆಯಾಳಾಗಿ ತೆಗೆದುಕೊಂಡಿದೆ ಎಂದು ಹೇಳಿಕೊಂಡಿದೆ. ಹಮಾಸ್‌ನ ಈ ದಾಳಿಯ ನಂತರ ಹಲವು ದೇಶಗಳು ಇಸ್ರೇಲ್‌ಗೆ ಸಹಾಯ ಹಸ್ತ ಚಾಚಿವೆ.

ಇಸ್ರೇಲ್‌ಗೆ ಸಹಾಯ ಮಾಡಲು ಅಮೆರಿಕ ಘೋಷಿಸಿದೆ. ಮಾಹಿತಿಯ ಪ್ರಕಾರ, ಯುಎಸ್ ಅಧ್ಯಕ್ಷ ಜೋ ಬಿಡನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಇದರ ನಂತರ ಅವರು ಮೆಡಿಟರೇನಿಯನ್ ಸಮುದ್ರಕ್ಕೆ ಯುದ್ಧ ಹಡಗುಗಳನ್ನು ಕಳುಹಿಸಿದೆ.

 

ಹಮಾಸ್‌ನ ಈ ದಾಳಿಯಲ್ಲಿ ನಾಲ್ವರು ಅಮೆರಿಕನ್ ಪ್ರಜೆಗಳೂ ಸಾವನ್ನಪ್ಪಿದ್ದಾರೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಹಿಂದೆ ಹಮಾಸ್ ದಾಳಿಯ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಇಸ್ರೇಲ್ ಅನ್ನು ಬೆಂಬಲಿಸಿ ಹೇಳಿಕೆ ನೀಡಿದ್ದರು.

ಗಾಜಾ ಪಟ್ಟಿಯ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ ಮತ್ತು ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹಲವು ಸೈನಿಕರು ಮತ್ತು ಪೊಲೀಸರು ಸೇರಿದಂತೆ ಸಆವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು 2,048ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಇಸ್ರೇಲ್ ಮೂಲದ ಮಾಧ್ಯಮ ವರದಿ ಮಾಡಿದೆ.

ಹಮಾಸ್ ರಾಕೆಟ್ ದಾಳಿ ಪ್ರಾರಂಭಿಸಿದ 24 ಗಂಟೆಗಳ ನಂತರ, ಗಾಜಾ ಗಡಿಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಐಡಿಎಫ್​ ಎಲ್ಲಾ ಭಯೋತ್ಪಾದಕರನ್ನು ತಟಸ್ಥಗೊಳಿಸುವ ಪ್ರಯತ್ನ ನಡೆಯುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ