ಸಿಎಎ ಕುರಿತು ನಾನು ಎತ್ತಿರುವ ಪ್ರಶ್ನೆಗಳಿಗೆ ಅಮಿತ್ ಶಾ ಉತ್ತರಿಸಿಲ್ಲ; ಬದಲಾಗಿ ನನ್ನನ್ನು ನಿಂದಿಸಿದ್ದಾರೆ: ಅರವಿಂದ್ ಕೇಜ್ರಿವಾಲ್
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿ ಕುರಿತು ಗುರುವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಬಾಗಿಲು ತೆರೆದಿರುವುದರಿಂದ ಊಹಿಸಲಾಗದ ಸಂಖ್ಯೆಯಲ್ಲಿ ಆ ದೇಶಗಳ ಜನ ಭಾರತಕ್ಕೆ ಬರುತ್ತಾರೆ ಎಂದು ಗುರುವಾರ ಹೇಳಿದ್ದಾರೆ.
ಸಿಎಎಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ನನಗೆ ದೇಶ ಮುಖ್ಯ ಎಂದಿದ್ದಾರೆ. “ಅವರು (ಶಾ) ನನ್ನನ್ನು ಭ್ರಷ್ಟ ಎಂದು ಕರೆದಿದ್ದಾರೆ. ಆದರೆ ನನಗೆ ದೇಶ ಮುಖ್ಯ. ನಾನು ಎತ್ತಿರುವ ಪ್ರಶ್ನೆಗಳಿಗೆ ಅವರು ಉತ್ತರಿಸಿಲ್ಲ. ಬದಲಾಗಿ ನನ್ನನ್ನು ನಿಂದಿಸಿದ್ದಾರೆ” ಎಂದು ಡಿಜಿಟಲ್ ಪ್ರೆಸ್‌ನಲ್ಲಿ ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಹೇಳಿದ್ದಾರೆ.
ಸಿಎಎ ಅನುಷ್ಠಾನವನ್ನು ನಿರಾಕರಿಸುವ ಹಕ್ಕು ರಾಜ್ಯಗಳಿಗೆ ಇಲ್ಲ: ಅಮಿತ್ ಶಾ
ಕೇಂದ್ರ ಸರ್ಕಾರ ಇತ್ತೀಚೆಗೆಷ್ಟೇ ಸಿಎಎ ( ಪೌರತ್ವ ತಿದ್ದುಪಡಿ ಕಾಯ್ದೆ) Citizenship Amendment Act ಯನ್ನು ಜಾರಿ ಮಾಡಿತ್ತು. ಇದೀಗ ಇದನ್ನು ದೇಶದ್ಯಾಂತ ಅನುಷ್ಠಾನ ಮಾಡಲಾಗಿದೆ. ಆದರೆ ಈ ಕಾನೂನಿಗೆ ಕೆಲವು ರಾಜ್ಯಗಳು ಅಂದರೆ ಬಿಜೆಪಿಯೇತರ ಸರ್ಕಾರಗಳು ವಿರೋಧಿಸಿದೆ. ಈ ಕಾನೂನನ್ನು ಜಾರಿ ಮಾಡಿರುವುದು ಕೇಂದ್ರ, ಇದನ್ನು ಅನುಷ್ಠಾನ ಮಾಡುವುದಿಲ್ಲ ಎನ್ನುವ ಅಧಿಕಾರ ರಾಜ್ಯಗಳಿಗೆ ಇದ್ದೀಯಾ? ಅಥವಾ ಈ ಕಾನೂನನ್ನು ವಿರೋಧಿಸುವ ಅವಕಾಶ ಅವರಿಗೆ ಯಾರು ನೀಡಿದ್ದು? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ. ಈ ಬಗ್ಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಎಎನ್ಐ ನಡೆಸಿದ ಸಂದರ್ಶನದಲ್ಲಿ ಉತ್ತರಿಸಿದ್ದಾರೆ. ಸಿಎಎಯನ್ನು ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ರಾಜ್ಯಗಳು ವಿರೋಧಿಸಿದೆ. ಈ ಬಗ್ಗೆ ಉತ್ತರಿಸಿದ ಶಾ, ಸಿಎಎ ಸಂವಿಧಾನದ ಯಾವುದೇ ನಿಬಂಧನೆಗಳನ್ನು ಉಲ್ಲಂಘಿಸುವುದಿಲ್ಲ ಮತ್ತು ಪೌರತ್ವಕ್ಕೆ ಸಂಬಂಧಿಸಿದ ಕಾನೂನುಗಳನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರವಿದೆ. ಈ ಕಾನೂನನ್ನು ಮೋದಿ ಸರ್ಕಾರ ತಂದಿದೆ ಮತ್ತು ಅದನ್ನು ರದ್ದುಗೊಳಿಸುವುದು ಅಸಾಧ್ಯ ಎಂದು ಹೇಳಿದರು.
ಈ ವಿಚಾರವನ್ನು ಇಟ್ಟುಕೊಂಡು ವಿರೋಧ ಪಕ್ಷದ ನಾಯಕರು ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದರು. ಅದರ ಅನುಷ್ಠಾನವನ್ನು ನಿರಾಕರಿಸುವ ಹಕ್ಕು ನಿಮಗೆ ಇದೆಯೇ? ಅವರು ಇದನ್ನು ಅರ್ಥಮಾಡಿಕೊಳ್ಳಬೇಕು. ನಮ್ಮ ಸಂವಿಧಾನದಲ್ಲಿ, ಪೌರತ್ವಕ್ಕೆ ಸಂಬಂಧಿಸಿದ ಕಾನೂನುಗಳನ್ನು ಮಾಡುವ ಹಕ್ಕನ್ನು ಸಂಸತ್ತಿಗೆ ಮಾತ್ರ ನೀಡಲಾಗಿದೆ. ಇದು ಕೇಂದ್ರ ಸರ್ಕಾರದ ಅಧಿಕಾರ. ಹಾಗಾಗಿ ರಾಜ್ಯದಲ್ಲಿ ಕಾನೂನು ಮತ್ತು ಅದರ ಅನುಷ್ಠಾನ ಎರಡನ್ನೂ ಕೇಂದ್ರ ಮಾಡುತ್ತದೆ. ಲೋಕಸಭೆ ಚುನಾವಣೆ ನಂತರ ಎಲ್ಲ ರಾಜಕೀಯ ಪಕ್ಷಗಳು ಒಂದೆಡೆ ಬಂದು ಸಹಕಾರ ನೀಡಲಿವೆ ಎಂದು ಹೇಳಿದರು.
ನಮ್ಮ ಸಂವಿಧಾನದ 11 ನೇ ವಿಧಿಯು ಸಂಸತ್ತಿಗೆ ಪೌರತ್ವದ ಬಗ್ಗೆ ನಿಯಮಗಳನ್ನು ಮಾಡುವ ಎಲ್ಲಾ ಅಧಿಕಾರಗಳನ್ನು ನೀಡುತ್ತದೆ. ಚುನಾವಣೆಯ ನಂತರ ಎಲ್ಲರೂ ಸಹಕರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಅವರು ತುಷ್ಟೀಕರಣದ ರಾಜಕೀಯಕ್ಕಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಈ ವಾರದ ಆರಂಭದಲ್ಲಿ ಸಿಎಎ ಅನುಷ್ಠಾನದ ನಿಯಮಗಳನ್ನು ಕೇಂದ್ರವು ಸೂಚಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸತತ ಎರಡನೇ ಅವಧಿಯ ಡಿಸೆಂಬರ್ 2019 ರಲ್ಲಿ ಈ ಮಸೂದೆಯನ್ನು ಸಂಸತ್ತು ಅಂಗೀಕರಿಸಿತು ಎಂದು ಹೇಳಿದ್ದಾರೆ.