ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Vidhanasabha Election) ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ ಸೋಲು ಕಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಿ ಆರಂಭಿಸಿದ್ದು, ಈ ಸಂಬಂಧ ಹೈಕಮಾಂಡ್ ಚರ್ಚಿಸಲು ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಬುಧವಾರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಭೇಟಿಯಾಗುವ ಸಾಧ್ಯತೆಗಳಿದೆ.
ಲೋಕಸಭೆ ಸೀಟ್ ಗಾಗಿ ನಾಳೆ ಅಮಿತ್ ಶಾ ಭೇಟಿಯಾಗಲಿದ್ದಾರೆ ವಿ ಸೋಮಣ್ಣ..!
ಸೋಮವಾರ ರಾತ್ರಿ ದೆಹಲಿಗೆ ಆಗಮಿಸಿದ ವಿ.ಸೋಮಣ್ಣ (V Somanna) ಮಂಗಳವಾರ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಉದ್ದೇಶ ಪೂರ್ವಕವಾಗಿ ಸೋಲಿಸುವ ಯತ್ನ ಆಗಿದೆ. ಕುತಂತ್ರದ ಕಾರಣಗಳಿಂದ ನಾನು ಸೋಲು ಕಂಡಿದ್ದೇನೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಈ ನಡುವೆ ಸೋಮಣ್ಣ ಅವರಿಗೆ ತುಮಕೂರು ಟಿಕೆಟ್ ಕೊಡಿಸಲು ಸಂಸದ ಬಸವರಾಜು ಪ್ರಯತ್ನ ಮಾಡುತ್ತಿದ್ದಾರೆ. ಲಿಂಗಾಯತ ನಾಯಕರಿಗೆ ಬಿಜೆಪಿ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿರುವ ಸಂಸದ ಬಸವರಾಜು, ಸೋಮಣ್ಣ ಪರ ಬ್ಯಾಟ್ ಬೀಸುತ್ತಿದ್ದಾರೆ. ತಮ್ಮ ಬದಲಿಗೆ ವಿ.ಸೋಮಣ್ಣ ಅವರಿಗೆ ಟಿಕೇಟ್ ನೀಡುವಂತೆ ಅಮಿತ್ ಶಾ ಅವರಿಗೂ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.
ಸಂವಿಧಾನದ ತಿದ್ದುಪಡಿ ಮಾಡಿ 224 ಕ್ಷೇತ್ರಗಳಲ್ಲೂ ಸಿಎಂ, ಡಿಸಿಎಂ ಘೋಷಿಸಿ – ಈಶ್ವರಪ್ಪ ಲೇವಡಿ
ನವದೆಹಲಿ: ಸಂವಿಧಾನದ ತಿದ್ದುಪಡಿ ಮಾಡಿ 224 ಕ್ಷೇತ್ರಗಳಲ್ಲೂ ಶಾಸಕರನ್ನೂ ಸಿಎಂ (CM) ಮತ್ತು ಡಿಸಿಎಂ (DCM) ಮಾಡಿ ಬಿಡಿ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ (KS Eshwarappa) ಕಾಂಗ್ರೆಸ್ (Congress) ನಾಯಕರಿಗೆ ವ್ಯಂಗ್ಯ ಮಾಡಿದ್ದಾರೆ.
ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಹೆಚ್ಚುವರಿ ಡಿಸಿಎಂ ನೇಮಕ ವಿಚಾರವಾಗಿ ದೆಹಲಿಯಲ್ಲಿ (New Delhi) ಮಾತನಾಡಿದ ಅವರು, ಲೋಕಸಭೆ ಚುನಾವಣೆ (Lok Sabha Election) ಬಳಿಕ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್‌ನವರು ಬಹಳ ದಿನಗಳಿಂದ ಮದುವೆ ಮಾಡಿಕೊಳ್ಳಬೇಕು ಎಂದು ಯೋಚನೆ ಮಾಡುತ್ತಿದ್ದರು. ಆದರೆ ನಿರೀಕ್ಷೆಗೂ ಮೀರಿ ಅವರ ಮದುವೆ ಆಯಿತು. ಭಾರಿ ಬಹುಮತದೊಂದಿಗೆ ಅಧಿಕಾರ ಬಂತು. ಅಂದಿನಿಂದಲೇ ಸಿಎಂ, ಡಿಸಿಎಂ ವಿಚಾರದಲ್ಲಿ ಗೊಂದಲ ಸೃಷ್ಟಿಯಾಯಿತು. ಸಿಎಂ ಆಯ್ಕೆ ವೇಳೆ ಶಿವಕುಮಾರ್ ದೆಹಲಿಗೆ ಹೋಗಲಿಲ್ಲ. ಎರಡು ದಿನದ ಬಳಿಕ ದೆಹಲಿಗೆ ಹೋಗಿ ಖರ್ಗೆ ಸಿಎಂ ಆಗಲಿ ಎಂದರು. ಡಿ.ಕೆ ಶಿವಕುಮಾರ್‌ಗೆ ಏಕಾಏಕಿ ದಲಿತರ ಮೇಲೆ ಪ್ರೀತಿ ಬಂತು. ಖರ್ಗೆಯವರು ಬೇಕಾದರೆ ಸಿಎಂ ಆಗಲಿ ಎಂದರು.
ಮೊನ್ನೆ ಪ್ರಧಾನಿ ಅಭ್ಯರ್ಥಿ ವಿಚಾರಕ್ಕೆ ಬಂದಾಗ ರಾಹುಲ್‌ಗಾಂಧಿ ಹೆಸರು ಡಿಕೆ ಶಿವಕುಮಾರ್ ಉಲ್ಲೇಖಿಸಿದರು. ಯಾಕೆ ಖರ್ಗೆ ಹೆಸರು ಶಿವಕುಮಾರ್ ಹೇಳಲಿಲ್ಲ? ಬರೀ ತೋರಿಕೆಗಾಗಿ ದಲಿತರ ಮೇಲೆ ಪ್ರೀತಿ ತೋರುವ ಕೆಲಸ ಮಾಡುತ್ತಿದ್ದಾರೆ. ರಾಮಮಂದಿರ, ದಲಿತರ ವಿಚಾರ ಹೀಗೆ ಎಲ್ಲಾ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಮೂರು ಜನರು ಕಾಂಗ್ರೆಸ್ ನಾಯಕರಿದ್ದರೆ, ನಾಲ್ಕು ವಿಚಾರದಲ್ಲಿ ಜಗಳ ಮಾಡುತ್ತಾರೆ. ಹಿಜಬ್ ಕೇಸ್ ವಾಪಸ್ ಪಡೆಯಲು ಯಾರು ಮನವಿ ಮಾಡಿದರು? ಮುಸ್ಲಿಂರನ್ನು ನೋಡಿದ ತಕ್ಷಣ ಸಿಎಂ ಘೋಷಣೆ ಮಾಡಿದರು. ಹಿಂದೂಗಳು ಒಟ್ಟಾಗಿದ್ದಾರೆ. ಲೋಕಸಭೆ ಚುನಾವಣೆ ಅಥವಾ ಅದರ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಇರಲ್ಲ ಎಂದು ಹೇಳಿದರು.
ಜಾತಿ ಸಮೀಕ್ಷೆ ವಿಚಾರದಲ್ಲಿ ತಮ್ಮನ್ನು ತಾವು ಸಿದ್ದರಾಮಯ್ಯ ಹಿಂದುಳಿದ ನಾಯಕ ಎಂದು ಕರೆದುಕೊಂಡಿದ್ದಾರೆ. ಆದರೆ ಅವಕಾಶ ಸಿಕ್ಕಾಗ ಸಮೀಕ್ಷೆ ಬಿಡುಗಡೆ ಮಾಡುವ ಪ್ರಯತ್ನ ಮಾಡಲಿಲ್ಲ. ಈಗ ಮತ್ತೆ ಸಿಎಂ ಆಗಿದ್ದಾರೆ. ಕಳೆದ ನವೆಂಬರ್‌ನಲ್ಲಿ ಸಮೀಕ್ಷೆ ಬಿಡುಗಡೆ ಎಂದಿದ್ದರು. ನವೆಂಬರ್, ಡಿಸೆಂಬರ್ ಮುಗೀತು, ಇನ್ನೂ ಜಾರಿಯಾಗಿಲ್ಲ. ಮುಸ್ಲಿಂ ಹಾಗೂ ಹಿಂದುಳಿದ ಹೆಸರಿನಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡುತ್ತಿದ್ದಾರೆ ಅಷ್ಟೇ ಎಂದು ಕಿಡಿಕಾರಿದರು.