ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅನಂತ್ ಕುಮಾರ್ ಹೆಗ್ಡೆಗೆ ಬಿಜೆಪಿ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಭಾವುಕ ಪತ್ರ; ಪತ್ರದಲ್ಲೇನಿದೆ.?

Twitter
Facebook
LinkedIn
WhatsApp
ಅನಂತ್ ಕುಮಾರ್ ಹೆಗ್ಡೆಗೆ ಬಿಜೆಪಿ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಭಾವುಕ ಪತ್ರ; ಪತ್ರದಲ್ಲೇನಿದೆ.?

ನವದೆಹಲಿ, ಮಾ.24: ಲೋಕಸಭೆ ಚುನಾವಣೆಗೆ (Lok Sabha Elections) ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ (Uttar Kannada) ಕ್ಷೇತ್ರದ ಟಿಕೆಟ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಘೋಷಣೆಯಾಗಿದೆ. ಅದರಂತೆ ಹಾಲಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಅವರಿಗೆ ಟಿಕೆಟ್ ಕೈತಪ್ಪಿದೆ. ಇದರ ಬೆನ್ನಲ್ಲೇ ಹೆಗಡೆ ಅವರು ಭಾವುಕ ಪತ್ರ ಬರೆದಿದ್ದು, ಸೇವೆಯ ಸೌಭಾಗ್ಯ ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಅನಂತಕುಮಾರ್ ಹೆಗಡೆ ಪತ್ರದಲ್ಲಿ ಏನಿದೆ?

ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ, ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು.

ಆದರೆ, ಆರಂಭ ಎಲ್ಲಿಂದ ತಿಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ ನಾನು ಈ ಪೂಜೆಯನ್ನು ಎಲ್ಲಿಂದ, ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ.

ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ದನ ಆರಾಧನೆ. ಸರಿ ಸುಮಾರು ಮೂವತ್ತು ವರ್ಷಗಳ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ಸ್ನೇಹ, ಪ್ರೀತಿ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು, ಅದು ಅದಮ್ಯ. ಯಾವುದೇ ಪೂಜೆ ಆರಾಧನೆ, ಅದು ಎಂದಿಗೂ ಮುಗಿಯದ ಅನಂತ ಕಾಯಕ. ಈ ತಾಗ್ನಿಲದ ಪೂಜೆಯಲ್ಲಿ, ಆಕೆಯ ಸೇವೆಯಲ್ಲಿ ನನ್ನನ್ನು ನಾನು ಸಮರ್ಪಿಸಿಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದಕ್ಕೆ, ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದಪದ್ಮಗಳಿಗೆ ನನ್ನ ಅನಂತ ನಮನಗಳನ್ನು ಸಲ್ಲಿಸುತ್ತೇನೆ.

ಕಳೆದ 3 ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯ್ಯೋಗ ಈ ಬದುಕಿನಲ್ಲಿ ನನಗೊಂದು ಗುರುತು ನೀಡಿದೆ. ನಿಜಕ್ಕೂ ಅಷ್ಟೇ ಸಾಕು!!!!! ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೇ ಸಿಕ್ಕೀತು?

ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ನು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ, ಮತ್ತೊಮ್ಮೆ, ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ. ತಮ್ಮೆಲ್ಲರ ನೆನಪಿನಲ್ಲಿ ಹೃದಯದಾಳದ ಕೃತಜ್ಞತೆಯೊಂದಿಗೆ, ಅನಂತಕುಮಾರ ಹೆಗಡೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ