ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತಡರಾತ್ರಿ ಫೇಸ್ಬುಕ್ ಲೈವ್ ಬಂದು ಭಾವುಕರಾದ ಪ್ರತಾಪ್ ಸಿಂಹ; ಗೆಲ್ಲಿಸಿದಂತಹ ಕ್ಷೇತ್ರದ ಜನರಿಗೆ ಧನ್ಯವಾದ.!

Twitter
Facebook
LinkedIn
WhatsApp
ತಡರಾತ್ರಿ ಫೇಸ್ಬುಕ್ ಲೈವ್ ಬಂದು ಭಾವುಕರಾದ ಪ್ರತಾಪ್ ಸಿಂಹ; ಗೆಲ್ಲಿಸಿದಂತಹ ಕ್ಷೇತ್ರದ ಜನರಿಗೆ ಧನ್ಯವಾದ.!

ಲೋಕಸಭೆ ಚುನಾವಣೆ (Lok Sabha Election) ಟಿಕೆಟ್ ಕೈತಪ್ಪುವ ಆತಂಕದಲ್ಲಿರುವ ಮೈಸೂರು ಕೊಡಗು ಬಿಜೆಪಿ  ಸಂಸದ ಪ್ರತಾಪ್ ಸಿಂಹ (Pratap Simha) ಸೋಮವಾರ ತಡರಾತ್ರಿ ಫೇಸ್​ಬುಕ್​ ಲೈವ್​ನಲ್ಲಿ ಮಾತನಾಡಿ, ಕ್ಷೇತ್ರದ ಜನತೆಗೆ ಧನ್ಯವಾದ ಸಮರ್ಪಿಸಿದ್ದಾರೆ. ಕೊಡಗಿನ (Kodagu) ಜನ ತೋರಿಸಿದ ಪ್ರೀತಿಯನ್ನು ಮರೆಯಲಾರೆ. ನಿಮ್ಮ ಹೃದಯದಲ್ಲಿ ಸ್ಥಾನ ಕೊಟ್ಟಿದ್ದೀರಿ ಎಂದು ಭಾವುಕರಾದರು.

ಸ್ವಾರ್ಥಕ್ಕಾಗಿ ಯಾರ ಮನೆ ಬಾಗಿಲನ್ನೂ ನಾನು ತಟ್ಟಿಲ್ಲ. ಟಿಕೆಟ್ ಸಿಗುತ್ತೋ, ಸಿಗಲ್ವೋ ಚಾಮುಂಡಿ ನಿರ್ಧರಿಸುತ್ತಾಳೆ. ನನ್ನ ಏಳಿಗೆಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದ ಸಿಂಹ, 10 ವರ್ಷಗಳ ರಾಜಕಾರಣದ ಬಗ್ಗೆ ಸುದೀರ್ಘ ಮಾತುಗಳನ್ನಾಡಿದರು.

ಮಡಿಕೇರಿಯ ಜನರು ನೇರ ಹಾಗೂ ನಿಷ್ಠುರವಾದಿಗಳು. ಆದರೆ, ಮೈಸೂರು ಜನ ರಾಜಕಾರಣ‌ ಮಾಡುವವರು. ಮೈಸೂರಿನಲ್ಲಿರುವಷ್ಟು ರಾಜಕಾರಣ ಎಲ್ಲಿಯೂ ಇಲ್ಲ. ಜನರ ಮಧ್ಯೆ ಇರುವವರಿಗೆ ಪಕ್ಷ ಟಿಕೆಟ್ ನೀಡಬೇಕು. ನನ್ನಿಂದ ಯಾರು ಸಹ ಸೋತಿಲ್ಲ. ನನ್ನ ವಿರುದ್ಧ ಏಕೆ ಇಲ್ಲಸಲ್ಲದ ಆರೋಪ ಮಾಡುತ್ತೀರಿ? ನನ್ನ ಕ್ಷೇತ್ರದಾಚೆಗೂ ಜನ ಪ್ರೀತಿ ವಿಶ್ವಾಸ ತೋರಿಸುತ್ತಿದ್ದಾರೆ. ಈಗಲೂ ಪಕ್ಷ ಟಿಕೆಟ್ ಕೊಡುತ್ತದೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.

ರಾಜಕಾರಣದಲ್ಲಿ ಏನಾದರೂ ಆಗಬಹುದು; ಪ್ರತಾಪ್: ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದೆ. ಪ್ರಧಾನಿ ಮೋದಿ ಇರುವವರೆಗೂ ಇರುತ್ತೇನೆ ಎಂದು ಹೇಳಿದ್ದೆ. ನನ್ನಂಥ ವ್ಯಕ್ತಿಗೆ ಟಿಕೆಟ್ ಕೊಡಬೇಕೆಂದು ನಿರೀಕ್ಷಿಸಿದ್ದೆ. ಆದರೆ, ರಾಜಕಾರಣದಲ್ಲಿ ಏನಾದರೂ ಆಗಬಹುದು. ಮೋದಿಯಂಥ ಮೋದಿಯೇ ಗೌಣವಾಗಿದ್ದರು. ಸೂರ್ಯನಿಗೇ ಗ್ರಹಣ ಬಡಿಯುತ್ತದೆ, ಇನ್ನು ನಾನ್ಯಾರು? ನಾನು ಈಗ ಎಂಪಿ ಆಗಿದ್ದೀನಿ, ಎಂಪಿ ಆಗಿಯೇ ಸಾಯುವುದಿಲ್ಲ. ನನ್ನ ನಸೀಬು ಕೆಟ್ಟು ಏನು ಬೇಕಾದರೂ ಆಗಬಹುದು. 10 ವರ್ಷ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ಎಂದು ಪ್ರತಾಪ್ ಸಿಂಹ ಹೇಳಿದರು.

ಮುಡಾದಲ್ಲಿ ಬದಲಿ ಸೈಟ್ ಮಾಡಿದ್ದರೆ ಕೋಟ್ಯಂತರ ಹಣ ಮಾಡುತ್ತಿದ್ದೆ. ಆದರೆ ಮುಡಾದಲ್ಲಿ ಬದಲಿ ಸೈಟ್ ಮಾಡಿಕೊಂಡಿಲ್ಲ. ಗ್ಯಾಸ್ ಪೈಪ್​​ಲೈನ್ ವಿಚಾರದಲ್ಲಿ ರಾಜಕಾರಣ ಮಾಡಿದರು ಎಂದು ಪರೋಕ್ಷವಾಗಿ ಮಾಜಿ ಶಾಸಕ ನಾಗೇಂದ್ರ, ರಾಮದಾಸ್ ವಿರುದ್ಧ ಕಿಡಿ ಕಾರಿದರು. ಮಡಿಕೇರಿ ಜನರು ನೇರ, ನಿಷ್ಠುರವಾದಿಗಳು. ಆದರೆ ಮೈಸೂರು ಜಿಲ್ಲೆಯ ಜನರು ರಾಜಕಾರಣ‌ ಮಾಡುವವರು. ರಾಜರಾಗಿದ್ದ ಶ್ರೀಕಂಠದತ್ತ ಒಡೆಯರ್ ಅವರನ್ನೇ ಜನ ಸೋಲಿಸಿದರು ಎಂದು ಅವರು ಹೇಳಿದರು.

ಡಾ.ಮಹದೇವಪ್ಪ ಜೊತೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇರಬಹುದು. ಮೈಸೂರಿನಲ್ಲಿ ಯಾರಾದರೂ ಸೋತಿದ್ದರೆ ಅವರ ನಡತೆಗಳು ಕಾರಣ. ವಿಧಾನಸಭೆ ಚುನಾವಣೆಯಲ್ಲಿ ನನ್ನಿಂದ ಯಾರೂ ಕೂಡ ಸೋತಿಲ್ಲ. ನನ್ನ ಕ್ಷೇತ್ರದಾಚೆಗೂ ಕೂಡ ಜನರು ಪ್ರೀತಿ, ವಿಶ್ವಾಸ ತೋರುತ್ತಿದ್ದಾರೆ. ಈಗಲೂ ಕೂಡ ನನಗೆ ಟಿಕೆಟ್ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿಂಹ ಹೇಳಿದರು.

https://www.facebook.com/watch/?v=398444926138744

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist