ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ..!
ವಾಷಿಂಗ್ಟನ್: ಭಾರತೀಯ ಮೂಲದ ವಿದ್ಯಾರ್ಥಿಯನ್ನು ಅಮೆರಿಕದಲ್ಲಿ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಆದಿತ್ಯ ಅದ್ಲಾಖಾ (26) ಅವರು ಸಿನ್ಸಿನಾಟಿ ವೈದ್ಯಕೀಯ ಶಾಲೆಯ ವಿಶ್ವವಿದ್ಯಾನಿಲಯದಲ್ಲಿ ಆಣ್ವಿಕ ಮತ್ತು ಅಭಿವೃದ್ಧಿ ಜೀವಶಾಸ್ತ್ರ ವಿಭಾಗದಲ್ಲಿ ನಾಲ್ಕನೇ ವರ್ಷದ ಡಾಕ್ಟರೇಟ್ ವಿದ್ಯಾರ್ಥಿಯಾಗಿದ್ದರು. ಅವರನ್ನು ಯುಎಸ್ ರಾಜ್ಯದ ಓಹಿಯೋದಲ್ಲಿ ಕೊಲೆ ಮಾಡಲಾಗಿದೆ.
ಈ ತಿಂಗಳ ಆರಂಭದಲ್ಲಿ ಬೆಳಗ್ಗೆ 6:20 ರ ಸುಮಾರಿಗೆ ಈ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಆದಿತ್ಯ ಅದ್ಲಾಖಾ ಅವರನ್ನು ಯುಸಿ ಮೆಡಿಕಲ್ ಸೆಂಟರ್‌ಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಎರಡು ದಿನಗಳ ನಂತರ ಆದಿತ್ಯ ಮೃತಪಟ್ಟಿದ್ದಾನೆ.
ಗುಂಡಿನ ದಾಳಿ ವರದಿಯಾದಾಗಿನಿಂದ ಯಾರನ್ನೂ ಬಂಧಿಸಲಾಗಿಲ್ಲ ಎಂದು ತಿಳಿದುಬಂದಿದೆ.
ಚೀನಾದಲ್ಲಿ ಕೊರೋನಾ ಬಳಿಕ ನ್ಯುಮೋನಿಯಾ ಮಾದರಿ ಜ್ವರ
ಬೀಜಿಂಗ್: ಕೋವಿಡ್-19 ಬಳಿಕ ಚೀನಾ ಈಗ ಹೊಸ ಸಾಂಕ್ರಾಮಿಕ ರೋಗದ ಭೀತಿಯಲ್ಲಿದೆ. ಚೀನಾದಲ್ಲಿ ಹಲವಾರು ಮಂದಿಗೆ, ಹೆಚ್ಚಾಗಿ ಮಕ್ಕಳಲ್ಲಿ ನಿಗೂಢ ನ್ಯುಮೋನಿಯಾ ಮಾದರಿಯ ಸಮಸ್ಯೆ ಉಂಟಾಗಿರುವುದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.
ಬೀಜಿಂಗ್ ಸೇರಿದಂತೆ ದೇಶದಾದ್ಯಂತದ ನಗರಗಳಲ್ಲಿ ನ್ಯುಮೋನಿಯಾ ಪ್ರಕರಣಗಳು ಉಲ್ಬಣಗೊಳ್ಳುತ್ತಿದೆ. ಚೀನಾದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಆಗಮಿಸುವುತ್ತಿರುವುದಾಗಿ ವರದಿಯಾಗಿದೆ.
ಶಾಲಾ ಮಕ್ಕಳಲ್ಲಿ ನಿಗೂಢ ನ್ಯುಮೋನಿಯಾ ಸೋಂಕಿನ ಹೆಚ್ಚಳ, ಹೀಗಾಗಿ ಮಕ್ಕಳಲ್ಲಿ ಉಸಿರಾಟದ ಕಾಯಿಲೆಗಳು ಮತ್ತು ನ್ಯುಮೋನಿಯಾ ಪ್ರಕರಣಗಳ ಹೆಚ್ಚಳದ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಅಧಿಕೃತವಾಗಿ ಚೀನಾದಿಂದ ವಿವರವಾದ ವರದಿಯನ್ನು ಕೋರಿದೆ.