ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂತಾರ-1’ ಚಿತ್ರದಲ್ಲಿ ನಟಿಸಲು ಹೊಸ ಕಲಾವಿದರಿಗೆ ಅವಕಾಶ ; ಇಲ್ಲಿದೆ ಮಾಹಿತಿ

Twitter
Facebook
LinkedIn
WhatsApp
ಕಾಂತಾರ-1’ ಚಿತ್ರದಲ್ಲಿ ನಟಿಸಲು ಹೊಸ ಕಲಾವಿದರಿಗೆ ಅವಕಾಶ ; ಇಲ್ಲಿದೆ ಮಾಹಿತಿ

ಬೆಂಗಳೂರು: ಕಳೆದ ವರ್ಷ ತೆರೆಕಂಡು ದೇಶಾದ್ಯಂತ ಸಂಚಲನ ಮೂಡಿಸಿದ್ದ ʼಕಾಂತಾರʼ ಚಿತ್ರದ ಮೊದಲ ಭಾಗದ (Kantara Movie) ಮುಹೂರ್ತ ನೆರವೇರಿದೆ. ರಿಷಬ್‌ ಶೆಟ್ಟಿ (Rishab Shetty) ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರಲಿದ್ದು, ಫಸ್ಟ್‌ ಲುಕ್‌ ಪೋಸ್ಟರ್‌ ಈಗಾಗಲೇ ದಾಖಲೆಯ ವೀಕ್ಷಣೆ ಕಂಡಿದೆ. ಇದೀಗ ಚಿತ್ರತಂಡ ಕಲಾವಿದರ ಹುಡುಕಾಟದಲ್ಲಿ ತೊಡಗಿಕೊಂಡಿದೆ.

ಕಾಂತಾರ ಅಧ್ಯಾಯ 1ʼ ಚಿತ್ರ ನಿರ್ಮಿಸುತ್ತಿರುವ ಹೊಂಬಾಳೆ ಫಿಲ್ಮ್ಸ್‌ ತನ್ನ ಸಾಮಾಜಿಕ ಜಾಲತಾಣ ಪೇಜ್‌ನಲ್ಲಿ ಕಲಾವಿದರು ಬೇಕಾಗಿದ್ದಾರೆ ಎಂದು ಪೋಸ್ಟ್‌ ಹಂಚಿಕೊಂಡಿದೆ. ʼಕಾಂತಾರʼ ಚಿತ್ರದಲ್ಲಿ ನಟಿಸಲು ಕಲಾವಿದರು ಬೇಕಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಸಿನಿಮಾದಲ್ಲಿ ನಟಿಸಲು 30ರಿಂದ 60ರ ವಯಸ್ಸಿನ ಪುರುಷರು ಬೇಕಾಗಿದ್ದಾರೆ. 18ರಿಂದ 60 ವಯಸ್ಸಿನ ಮಹಿಳೆಯರೂ ಬೇಕಾಗಿದ್ದಾರೆ ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ. ಆಸಕ್ತರು https://www.kantara.film/ ಈ ಲಿಂಕ್‌ ಒತ್ತಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬಹುದು. ರೀಲ್ಸ್‌ ಮತ್ತು ಅವುಗಳನ್ನು ಹೋಲುವ ಇತರ ವಿಷಯಗಳನ್ನು ಸ್ವೀಕರಿಸುವುದಿಲ್ಲ ಎಂದು ಚಿತ್ರತಂಡ ಸ್ಪಷ್ಟವಾಗಿ ಹೇಳಿದೆ. ಡಿ. 14ರ ವರೆಗೆ ಅವಕಾಶ ಇದೆ.

ಫೆಬ್ರವರಿಯಿಂದ ʼಕಾಂತಾರ-1ʼ ಚಿತ್ರದ ಶೂಟಿಂಗ್‌ ಆರಂಭವಾಗಲಿದೆ. ವರದಿಗಳ ಪ್ರಕಾರ ಈ ಸಿನಿಮಾ ಬರೋಬ್ಬರಿ 125 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಇತಿಹಾಸ ಸೃಷ್ಟಿಸಿದ್ದ ʼಕಾಂತಾರʼ

ʼಕಾಂತಾರʼ ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾಗಿತ್ತು. ಅದು ವಿಶ್ವಾದ್ಯಂತ 400 ಕೋಟಿ ರೂ.ಗಳನ್ನು ಗಳಿಸಿ ಸಾರ್ವಕಾಲಿಕ ಕಲೆಕ್ಷನ್‌ ಮಾಡಿದ ಕನ್ನಡದ ಎರಡನೇ ಚಿತ್ರವಾಗಿ ಹೊರಹೊಮ್ಮಿತ್ತು. ಇದೀಗ ಈ ಚಿತ್ರದ ಪ್ರೀಕ್ವೆಲ್‌ ಆಗಿ ʼಕಾಂತಾರ -1ʼ ತೆರೆಗೆ ಬರಲಿದೆ. ಅಂದರೆ ʼಕಾಂತಾರʼ ಕಥೆ ನಡೆಯುವುದಕ್ಕೆ ಮುನ್ನ ಏನಾಗಿತ್ತು ಎನ್ನುವುದನ್ನು ರಿಷಬ್‌ ಶೆಟ್ಟಿ ಈ ಭಾಗದಲ್ಲಿ ವಿವರಿಸಲಿದ್ದಾರೆ. ಕ್ರಿ.ಶ. 301-400ರ ಕಾಲಘಟ್ಟದ ಕಥೆ ತೆರೆ ಮೇಲೆ ಅನಾವರಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ನವೆಂಬರ್ 27ರಂದು ರಿಲೀಸ್ ಆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ದಾಖಲೆಯ ವೀಕ್ಷಣೆ ಕಂಡಿದೆ. ಏಳು ಭಾಷೆಗಳಲ್ಲಿ ರಿಲೀಸ್ ಆಗಿರುವ ಈ ಟೀಸರ್ ಬರೋಬ್ಬರಿ 12 ಮಿಲಿಯನ್(1.2 ಕೋಟಿ)ಗಿಂತ ಅಧಿಕ ಭಾರಿ ವೀಕ್ಷಣೆ ಕಂಡಿದೆ. ಈ ಮೂಲಕ ಹಲವು ದಾಖಲೆಗಳನ್ನು ಇದು ಸರಿಗಟ್ಟಿದೆ. ನವೆಂಬರ್ 27ರಂದು ಕುಂದಾಪುರ ಆನೆಗುಡ್ಡೆ ದೇವಾಲಯದಲ್ಲಿ ಚಿತ್ರತಂಡ ಸ್ಕ್ರಿಪ್ಟ್ ಪೂಜೆ ಮಾಡಿದೆ. ಜತೆಗೆ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿತ್ತು. ಈ ಬಾರಿ ಇತಿಹಾಸದ ನಿಗೂಢ ಸತ್ಯ ಹೇಳುವುದಕ್ಕೆ ರಿಷಬ್ ಶೆಟ್ಟಿ ತಯಾರಿ ಮಾಡಿಕೊಂಡಿದ್ದಾರೆ.

https://www.instagram.com/kantarafilm/?utm_source=ig_embed&ig_rid=d4370b39-7e3c-42e9-980b-0a3951e92a21

ʼʼಹೊಸ ಪ್ರತಿಭೆಗಳನ್ನು ಹುಡುಕುತ್ತಾ ಇದ್ದೇವೆ. ನಿರ್ಮಾಪಕ ವಿಜಯ್‌ ಅವರ ನಂಬಿಕೆ ಸಕ್ಸೆಸ್‌ಗೆ ಸಾಥ್‌ ಕೊಟ್ಟಿದೆ. ಕಥೆಗೆ ಏನು ಬೇಕೋ ಅವರು ಸಹಾಯ ಮಾಡುತ್ತಿದ್ದಾರೆ. ತಾಂತ್ರಿಕ ವರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ. ಕಲಾವಿದರಲ್ಲಿ ಸ್ವಲ್ಪ ಜನ ಹೊಸಬರು ಬರುತ್ತಾರೆʼʼ ಎಂದು ಚಿತ್ರದ ಮುಹೂರ್ತ ಸಮಯದಲ್ಲೇ ರಿಷಬ್‌ ಶೆಟ್ಟಿ ಹೇಳಿದ್ದರು. ಅದರಂತೆ ಈಗ ಹೊಸಬರ ಆಡಿಷನ್‌ಗೆ ಕರೆ ನೀಡಲಾಗಿದೆ. ನಾಯಕನಾಗಿ ರಿಷಬ್‌ ಶೆಟ್ಟಿ ಮುಂದುವರಿಯಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist