ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಗಳದಲ್ಲಿ ವ್ಯಕ್ತಿಯೊಬ್ಬ ಸೀರೆ ಎಳೆದಾಡಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

Twitter
Facebook
LinkedIn
WhatsApp
ಜಗಳದಲ್ಲಿ ವ್ಯಕ್ತಿಯೊಬ್ಬ ಸೀರೆ ಎಳೆದಾಡಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

ಯಾದಗಿರಿ: ಮನೆಯ ಮುಂದೆ ಕೊಳಚೆ ನೀರು ಹರಿಸುವ ವಿಚಾರಕ್ಕೆ ಅಕ್ಕ ಪಕ್ಕದ ಮನೆಯವರ ನಡುವೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಸೀರೆ ಎಳೆದಾಡಿದ್ದಕ್ಕೆ ಮನನೊಂದು ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುರಪುರದ (Surapura) ಕುಚಕನೂರಿನಲ್ಲಿ ನಡೆದಿದೆ.

ವಿಜಯಲಕ್ಷ್ಮಿ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದು ಬಂದಿದೆ. ಮಹಿಳೆ ಆತ್ಮಹತ್ಯೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಹಾಗೂ ಮಹಿಳೆಯ ಕುಟುಂಬಸ್ಥರು ಆಕೆಯ ಶವವನ್ನು ಹುಣಸಗಿ ಪೊಲೀಸ್ (Police) ಠಾಣೆಯ ಮುಂದಿಟ್ಟು ಪ್ರತಿಭಟಿಸಿದ್ದಾರೆ. ಈ ವೇಳೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಮಹಿಳೆಯ ಪಕ್ಕದ ಮನೆಯವರ ನಡುವೆ ಆಗಾಗ ಕಸ ಹಾಗೂ ಕೊಳಚೆ ನೀರಿನ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಇತ್ತೀಚೆಗೆ ಮನೆ ಮುಂದೆ ನೀರು ಬಿಟ್ಟ ವಿಚಾರಕ್ಕೆ ಎರಡೂ ಕುಟುಂಬದ ನಡುವೆ ಜಗಳ ನಡೆದಿತ್ತು. ಈ ವೇಳೆ ವ್ಯಕ್ತಿಯೊಬ್ಬ ಮಹಿಳೆಯ ಸೀರೆ ಹಿಡಿದು ಎಳೆದಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ಮಹಿಳೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪಿಗಳಾದ ಇಂದ್ರಮ್ಮ, ಹಣಮಂತರಾಯ, ಪುಷ್ಪಾ ಹಾಗೂ ಶಶಿಕಲಾ ಅವರನ್ನ ಬಂಧಿಸುವಂತೆ ಮಹಿಳೆಯ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಲಾಂಗ್ ಬೀಸಿದ ರೌಡಿಶೀಟರ್ ಮಂಡಿ ಸೀಳಿದ ಖಾಕಿ

ಚಿಕ್ಕಮಗಳೂರು: ರೌಡಿ ಶೀಟರ್‌ನನ್ನು (Rowdy Sheeter) ಬಂಧಿಸಲು ಹೋದ ಪೊಲೀಸರ (Police) ಮೇಲೆ ಮಚ್ಚು ಬೀಸಿದ ಕಾರಣ ಸಬ್ ಇನ್ಸ್ಪೆಕ್ಟರ್ (Sub Inspector) ರೌಡಿ ಶೀಟರ್ ಮೇಲೆ ಗುಂಡು ಹಾರಿಸಿದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಎನ್‌ಆರ್‌ಪುರ (NR Pura) ತಾಲೂಕಿನ ಬಾಳೆಹೊನ್ನೂರು ಸಮೀಪದ ಮಾಗಲು ಗ್ರಾಮದಲ್ಲಿ ನಡೆದಿದೆ.

ಮಾಗಲು ಗ್ರಾಮದ ಪೂರ್ಣೇಶ್ ಎಂಬವನ ಮೇಲೆ 2012 ರಿಂದ 8 ಪ್ರಕರಣಗಳು ದಾಖಲಾಗಿದ್ದವು. 4 ಹಾಫ್ ಮರ್ಡರ್ ಕೇಸ್, 3 ಹಲ್ಲೆ ಪ್ರಕರಣ ಮತ್ತೊಂದು ಪೊಲೀಸರ ಮೇಲೆ ಹಲ್ಲೆ ಮಾಡಿದ್ದು, ಪ್ರಕರಣ ಸಂಬಂಧ ಕೋರ್ಟಿನಿಂದ ಸಮನ್ಸ್ ಜಾರಿಯಾಗಿದ್ದರೂ ಆತ ಕೋರ್ಟಿಗೆ ಹಾಜರಾಗಿರಲಿಲ್ಲ. ಆತ ಮನೆಗೂ ಹೋಗುತ್ತಿರಲಿಲ್ಲ. ರಾತ್ರಿ ವೇಳೆ ಕಾಡು, ಕಾಫಿ ತೋಟ, ಕಾಡಿನ ದೊಡ್ಡ-ದೊಡ್ಡ ಮರಗಳ ಮೇಲೆ ಮಲಗಿ ಪೊಲೀಸರಿಗೂ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ.

ಆತ ಮಾಗಲು ಗ್ರಾಮದ ತಮ್ಮ ಮನೆಯಲ್ಲಿ ಇರುವ ಖಚಿತ ಮಾಹಿತಿ ಮೇರೆಗೆ ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ಪೊಲೀಸರ ಮೇಲೂ ಮಚ್ಚು ಬೀಸಿದ್ದಾನೆ. ಎನ್‌ಆರ್ ಪುರ ತಾಲೂಕಿನ ಬಾಳೆಹೊನ್ನೂರು ಸಬ್ ಇನ್ಸ್ಪೆಕ್ಟರ್ ದಿಲೀಪ್ ಕುಮಾರ್ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಆದರೆ ಪೊಲೀಸರ ಮಾತು ಕೇಳದೆ ಪೊಲೀಸ್ ಪೇದೆ ಮಂಜುನಾಥ್ ಎಂಬವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಘಟನೆಯಿಂದ ಪೇದೆ ಮಂಜುನಾಥ್ ಎಡಗೈಗೆ ಗಂಭೀರ ಗಾಯವಾಗಿದ್ದು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಪೊಲೀಸರ ಮೇಲೆ ಮಚ್ಚು ಬೀಸಿದ ಕಾರಣ ಆತ್ಮರಕ್ಷಣೆಗಾಗಿ ರೌಡಿ ಶೀಟರ್ ಬಲಗಾಲಿನ ಮಂಡಿಗೆ ಗುಂಡು ಹಾರಿಸಿ ಬಂಧಿಸಿ, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಎಸ್‌ಪಿ ವಿಕ್ರಂ ಅಮಟೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ, ಪೇದೆ ಮಂಜುನಾಥ್ ಆರೋಗ್ಯ ವಿಚಾರಿಸಿದ್ದಾರೆ. ರೌಡಿ ಶೀಟರ್ ಪೂರ್ಣೇಶ್ ಮೇಲೆ 2012ರಿಂದ 8 ಕೇಸ್‌ಗಳು ದಾಖಲಾಗಿವೆ. ಆತನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದರಿಂದ ಆತನಿಂದ ಹಲ್ಲೆಗೊಳಗಾದವರು ಸಂತಸಪಟ್ಟಿದ್ದಾರೆ. ಈ ಕುರಿತು ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist