ಸೋಮವಾರ, ಫೆಬ್ರವರಿ 3, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ

Twitter
Facebook
LinkedIn
WhatsApp
Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ

ಆನಂದಪುರ (Anandpur): ಜೀವನದಲ್ಲಿ ಸುಂದರವಾಗಿ ಬದುಕಬೇಕು ಎಂದು ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ ಕೊಲೆಗೈದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಯುವತಿ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ ಸೃಜನ್ ಕೊಲೆ ಮಾಡಿದ ಆರೋಪಿ. ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮದುವೆಯಾಗುವಂತೆ ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಿಯಕರ ಕೊಲೆ ಮಾಡಿದ್ದಾನೆಂದು ತಿಳಿದುಬಂದಿದೆ. 

ಇಬ್ಬರದ್ದು ಬೇರೆ ಬೇರೆ ಸಮುದಾಯ ಆಗಿದ್ದರಿಂದ ಯುವಕನ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ತೀರ್ಥಹಳ್ಳಿಗೆ ಹೋಗುತ್ತೇನೆ ಅಂತಾ ಜು.2 ರಂದು ಕೊಪ್ಪದಿಂದ ಯುವತಿ ಬಂದಿದ್ದಳು.

ಯುವಕನ ಮನೆಗೆ ಕರೆದುಕೊಂಡು ಹೋಗುವಂತೆ ಒತ್ತಡ ಹಾಕಿದ್ದಳು. ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಪ್ರಿಯಕರ ಹೇಳಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಯುವತಿ ಮೇಲೆ ಯುವಕ ಬಲವಾಗಿ ಹಲ್ಲೆ ಮಾಡಿದ್ದಾನೆ. ಹಲ್ಲೆಯ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. 

ಇದರಿಂದ ಭಯಭೀತನಾದ ಯುವಕ, ಯುವತಿಯ ಶವವನ್ನು ಮುಂಬಾಳು ಬಳಿ ಹೂತಿಟ್ಟು ತೆರಳಿದ್ದ. ಇತ್ತ ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ಯುವತಿ ಪೋಷಕರು ದೂರು ನೀಡಿದ್ದರು. ಯುವಕನನ್ನು ಹುಡುಕಿಕೊಂಡು ಕೊಪ್ಪ ಪೊಲೀಸರು ಸಾಗರಕ್ಕೆ ಬಂದಿದ್ದರು. ಪೊಲೀಸರ ಎದುರು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಯುವಕ ಬಿಚ್ಚಿಟ್ಟಿದ್ದಾನೆ. ಇಂದು ತಹಶೀಲ್ದಾರ್ ಸಮ್ಮುಖದಲ್ಲಿ ಶವ ಹೊರಗೆ ತೆಗೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

ಏನಿದು ಪ್ರಕರಣ :
ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಣವಂತೆ ಸಮೀಪ ಹಚ್ಚರಡಿ ಗ್ರಾಮದ ಸೌಮ್ಯಳನ್ನು ಕೊಪ್ಪದ ಭರತ್ ಫೈನಾನ್ಸಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ತಾಳಗುಪ್ಪ ಮೂಲದ ಸೃಜನ್ ಸೌಮ್ಯಳನ್ನು ಪ್ರೀತಿಸಿ ಮದುವೆಯಾಗುತ್ತೇನೆಂದು ಹೇಳಿದ್ದು, ತಾನು ಪ್ರೀತಿಸಿದ ಸೌಮ್ಯ ದಲಿತ ಜನಾಂಗಕ್ಕೆ ಸೇರಿದವಳು ಎಂದು ತಿಳಿದು ನಿರಾಕರಿಸಿದ.
ಈ ವಿಚಾರವಾಗಿ ಕಳೆದ ಒಂದು ವರ್ಷದ ಹಿಂದೆ ಸೌಮ್ಯ ಆತ್ಮಹತ್ಯೆಗೆ ಯತ್ನಿಸಿದಳು. ಈ ವಿಷಯ ಕೊಪ್ಪ ಪೊಲೀಸ್ ಠಾಣೆಯ ಪೊಲೀಸರು ಸೃಜನ್ ಅನ್ನು ಕರೆಸಿ ಸೌಮ್ಯಳ ಪ್ರೀತಿಯ ಬಗ್ಗೆ ವಿಚಾರಿಸಿದಾಗ ಇನ್ನು ಆರು ತಿಂಗಳು ಬಿಟ್ಟು ಮದುವೆಯಾಗುತ್ತೇನೆಂದು ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾನೆಂದು ಸೌಮ್ಯಳ ಅಕ್ಕ ಸುಮಾ ತಿಳಿಸಿದ್ದಾಳೆ.

ಲೇಡಿಸ್ ಪಿಜಿಯಲ್ಲಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್‌

ಬೆಂಗಳೂರು, (ಜುಲೈ 24): ಬೆಂಗಳೂರಿನ ಕೋರಮಂಗಲದಲ್ಲಿರುವ ಲೇಡಿಸ್‌ ಪಿಜಿಗೆ ನುಗ್ಗಿದ ವ್ಯಕ್ತಿಯೊಬ್ಬ ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಚ್ಚಿ ಬೀಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಕೊಲೆಗಾರನ ಮಹತ್ವದ ಸುಳಿವು ಸಿಕ್ಕಿದೆ. ನಿನ್ನೆ(ಜುಲೈ 23) ಮಧ್ಯರಾತ್ರಿ ಕೋರಮಂಗಳದ ಪಿಜಿಯಲ್ಲಿ ಕೃತಿ ಕುಮಾರಿ‌ (24) ಎನ್ನುವ ಬಿಹಾರದ ಯುವತಿಯ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಎಂದು ತಿಳಿದುಬಂದಿದೆ.

ನಿನ್ನೆ (ಜುಲೈ 23) ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇನ್ನು ಕೃತಿಯ ರೂಮ್​ಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ. ಕೊರಮಂಗಲ ಪೊಲೀಸರು ಸದ್ಯ ಆರೋಪಿಯ ಮಾಹಿತಿ ಕಲೆ ಹಾಕುತ್ತಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಕೃತಿ ಪಿಜಿಗೆ ಸೇರಿದ್ದರು. ಆಕೆ ಪಿಜಿಗೆ ಆಗಮಿಸುವ ವೇಳೆಯೂ ಈ ಯುವಕ ಲಗೇಜ್‌ ತೆಗದುಕೊಂಡು ಬಂದಿದ್ದ. ಆಗ ಯುವಕನನ್ನು ಒಳ ಬಿಡುವುದಿಲ್ಲ ಎಂದು ಪಿಜಿ ಸೆಕ್ಯೂರಿಟಿ ತಡೆದಿದ್ದರು. ಪಿಜಿ ಸೆಕ್ಯುರಿಟಿ ಬಳಿ, ಆತ ತನ್ನ ಸಹೋದರ ಎಂದು ಹೇಳಿ ಬೇಗ ಕಳುಹಿಸುತ್ತೇನೆ ಎಂದು ಕೃತಿ ಒಳ ಕರೆದುಕೊಂಡು ಹೋಗಿದ್ದರು ಎಂದು ತಿಳಿದುಬಂದಿದೆ.

ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ಯುವತಿ ಕೃತಿ ಕುಮಾರಿ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ. ಆಕೆಯ ಕಾಲ್ ಡಿಟೈಲ್ಸ್ ಹಾಗೂ ಸಿಡಿಆರ್ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಕೊನೆಯದಾಗಿ ಕೃತಿ ಕುಮಾರಿ ಯಾರಿಗೆ ಕಾಲ್ ಮಾಡಿದ್ದರು. ಯಾವ, ಯಾವ ನಂಬರ್‌ನಿಂದ ಈಕೆಗೆ ಕಾಲ್ ಬಂದಿದೆ. ಇದರ ಜೊತೆಗೆ ಪಿಜಿಯ ಸಿಸಿಟಿವಿಯನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕೊನೆಯದಾಗಿ ಕೊಲೆಯಾದ ಯುವತಿ ಎಲ್ಲಿ ಹೋಗಿದ್ದಾಳೆ ಎನ್ನುವ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಕೊಲೆಗಾರನ ಬಂಧನಕ್ಕೆ ಕೋರಮಂಗಲ ಪೊಲೀಸರು ಮೂರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist