ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಗಳ ಪ್ರೀತಿಯ ವಿಚಾರಕ್ಕೆ ಮರ್ಯಾದೆಗೆ ಅಂಜಿ ಮಗಳನ್ನೇ ಕೊಲೆಗೈದ ತಂದೆ...!

Twitter
Facebook
LinkedIn
WhatsApp
ಮಗಳ ಪ್ರೀತಿಯ ವಿಚಾರಕ್ಕೆ ಮರ್ಯಾದೆಗೆ ಅಂಜಿ ಮಗಳನ್ನೇ ಕೊಲೆಗೈದ ತಂದೆ...!

ದೇವನಹಳ್ಳಿ, ಅ.12: ತನ್ನ ಇಬ್ಬರು ಮಕ್ಕಳ ಸರಣಿ ಪ್ರೀತಿಯಿಂದ ಮನನೊಂದ ವ್ಯಕ್ತಿಯೊಬ್ಬರು ಮರ್ಯಾದೆಗೆ ಅಂಜಿ ಹಿರಿ ಮಗಳನ್ನೇ ಕೊಲೆ (Murder) ಮಾಡಿದ ಘಟನೆ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಪ್ರೀತಿಸಿದ ಪ್ರಿಯತಮನಿಗಾಗಿ ಕಿರಿ ಮಗಳು ಪೊಲೀಸ್ ಠಾಣೆ ಮೆಟ್ಟಿಲೇರಿ ಸಾಂತ್ವಾನ ಕೇಂದ್ರ ಸೇರಿದ್ದಾಳೆ. ಇತ್ತ ಹಿರಿ ಮಗಳ ಪ್ರೀತಿ ವಿಚಾರ ತಿಳಿದ ತಂದೆ, ಚಿಕ್ಕ ಮಗಳು ಮರ್ಯಾದೆ ತೆಗೆದಳು, ಇವಳು ಮರ್ಯಾದೆ ಕಳೆಯುತ್ತಾಳೆ ಅಂತ ಕೊಲೆಯೇ ಮಾಡಿದ್ದಾನೆ.

ಕವನಾ (20) ಹತ್ಯೆಯಾದ ಯುವತಿ. ತನ್ನ ಮಗಳನ್ನು ಹತ್ಯೆಗೈದ ಬಳಿಕ ಆರೋಪಿ ಮಂಜುನಾಥ್ ವಿಶ್ವನಾಥಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಮಂಜುನಾಥ್ ಅವರ ಕಿರಿಯ ಮಗಳು ಪ್ರೀತಿಯ ಬಲೆಗೆ ಬಿದ್ದು ಪ್ರಿಯಕರನ ಜೊತೆಗೆ ಹೋಗುವುದಾಗಿ ಕಳೆದ ಮಂಗಳವಾರ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಳು. ಪ್ರೀತಿಸಿದವನ ಜೊತೆ ಹೋಗುವುದಾಗಿ ಠಾಣೆಯಲ್ಲಿ ಪಟ್ಟು ಹಿಡಿದಿದ್ದು, ಪೊಲೀಸರು ಆಕೆಯನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಇದರ ಬೆನ್ನಲ್ಲೇ ಹಿರಿ‌ ಮಗಳು ಸಹ ಪ್ರೀತಿ ಬಲೆಯಲ್ಲಿರುವ ವಿಚಾರ ತಿಳಿದಿದ್ದ ತಂದೆ ಮಂಜುನಾಥ್, ಚಿಕ್ಕ ಮಗಳು ಮರ್ಯಾದೆ ಕಳೆದಳು, ಇನ್ನು ಇವಳು ಕೂಡ ಗ್ರಾಮದಲ್ಲಿ ನಮ್ಮ ಮರ್ಯಾದೆ ಕಳೆಯುತ್ತಾಳೆ ಅಂತ ಹಿರಿ ಮಗಳನ್ನು ಕೊಲೆ ಮಾಡಿದ್ದಾನೆ.

ಕೋಳಿ ಕೊಯ್ಯುವ ಚಾಕುವಿನಿಂದ ಕತ್ತು ಸೀಳಿದ ತಂದೆ

ಆರೋಪಿ ಮಂಜುನಾಥ್ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಮಗಳ ಪ್ರೀತಿಯ ವಿಚಾರ ತಿಳಿದ ನಂತರ ಮಂಜುನಾಥ್, ರಾತ್ರಿ ವೇಳೆ ನಿದ್ದೆಗೆ ಜಾರಿದ್ದ ಮಗಳು ಕವನಾಳ ಕತ್ತನ್ನು ಕೋಳಿ ಕೊಯ್ಯುವ ಚಾಕುವಿನಿಂದಲೇ ಕೊಯ್ದು ಕೊಲೆ ಮಾಡಿದ್ದಾನೆ.

ಈಜಲು ಹೋಗಿದ್ದ ಬಾಲಕ ಸಾವು

ರಾಮನಗರ: ಕನಕಪುರ ತಾಲೂಕಿನ ಹಲಸೂರು ಗ್ರಾಮದಲ್ಲಿ ಈಜಲು ಹೋಗಿದ್ದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ದರ್ಶನ್ ​(12) ಮೃತ ಬಾಲಕ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಣಸಮುದ್ರ ನಿವಾಸಿ ದರ್ಶನ್, ದಸರಾ ರಜೆ ಹಿನ್ನೆಲೆ ಅಜ್ಜಿ ಮನೆಗೆ ಬಂದಿದ್ದ. ಅದರಂತೆ, ಹಲಸೂರು ಗ್ರಾಮದ ಚೆನ್ನೇಗೌಡನ ಕೆರೆಯಲ್ಲಿ ಈಜಲೆಂದು ಕೆರೆಗೆ ಇಳಿದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಾತನೂರು ಠಾಣಾ ಪೊಲೀಸರು ಮೃತದೇಹ ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ