ಅಣ್ಣಾಮಲೈಯಾರ್ ದೇವಸ್ಥಾನಕ್ಕೆ ಭೇಟಿ ನೀಡಿದ ರಜನಿಕಾಂತ್
ಚೆನ್ನೈ :ಸೂಪರ್ ಸ್ಟಾರ್ ರಜನಿಕಾಂತ್ ಶೀಘ್ರದಲ್ಲೇ ಲಾಲ್ ಸಲಾಮ್ ಎಂಬ ತೆಲುಗು ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ.
ಸದ್ಯ ಲಾಲ್ ಸಲಾಂ ಚಿತ್ರೀಕರಣಕ್ಕಾಗಿ ರಜನಿಕಾಂತ್ ತಮಿಳುನಾಡಿನ ತಿರುವಣ್ಣಾಮಲೈನಲ್ಲಿದ್ದಾರೆ.ಅಲ್ಲಿನ ಪ್ರಸಿದ್ಧ ಅಣ್ಣಾಮಲೈಯಾರ್ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಾರ್ಥನೆ ಸಲ್ಲಿಸಿದ್ದಾರೆ. ಲಾಲ್ ಸಲಾಮ್ ಸಿನಿಮಾವನ್ನು ಮಗಳು ಐಶ್ವರ್ಯಾ ರಜನಿಕಾಂತ್ ನಿರ್ದೇಶಿಸಿದ್ದಾರೆ.
ರಜನಿಕಾಂತ್ ಪುತ್ರಿ ಐಶ್ವರ್ಯಾ ಅವರು ಈ ಹಿಂದೆ ಧನುಷ್ ನಾಯಕತ್ವದಲ್ಲಿ ‘3’ ಸಿನಿಮಾವನ್ನು ನಿರ್ದೇಶನ ಮಾಡಿದ್ದರು.ಅದಾದ ಬಳಿಕ ‘ವಾಯ್ ರಾಜ ವಾಯ್’ ಸಿನಿಮಾಗೂ ಡೈರೆಕ್ಷನ್ ಮಾಡಿದ್ದರು. ತಮ್ಮ ಮುಂದಿನ ಪ್ರಾಜೆಕ್ಟ್ ಲಾಲ್ ಸಲಾಮ್‌ಗೆ ನಿರ್ದೇಶನ ಮಾಡುತ್ತಿದ್ದಾರೆ.
ರಜನಿಕಾಂತ್ ಅವರು ಈ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಹೀರೋಗಳಾಗಿ ನಟಿಸುತ್ತಿದ್ದಾರೆ.
ಆಸ್ಕರ್ ವಿಜೇತ ಎಆರ್ ರೆಹಮಾನ್ ಅವರು ‘ಲಾಲ್ ಸಲಾಮ್’ ಸಿನಿಮಾಗೆ ಸಂಗೀತ ನೀಡುತ್ತಿದ್ದು, ವಿಷ್ಣು ರಂಗಸ್ವಾಮಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಲಾಲ್ ಸಲಾಮ್ 2023 ರಲ್ಲಿ ಬಿಡುಗಡೆಯಾಗಲಿದೆ.