ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಮತ್ತೊಂದು ದೂರು ದಾಖಲು..!

Twitter
Facebook
LinkedIn
WhatsApp
ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಮತ್ತೊಂದು ದೂರು ದಾಖಲು..!

ಬಿಗ್ ಬಾಸ್ (Bigg Boss Kannada) ಸ್ಪರ್ಧಿ, ನಟಿ ತನಿಷಾ ಕುಪ್ಪಂಡ (Tanisha Kuppanda) ವಿರುದ್ಧ ಮತ್ತೊಂದು ದೂರು (Complaint) ದಾಖಲಾಗಿದೆ. ಸದ್ಯ ಬಿಗ್ ಬಾಸ್ ಮನೆಯಲ್ಲಿರುವ ನಟಿ ಮೇಲೆ ಜಾತಿ ನಿಂದನೆ ವಿಚಾರವಾಗಿ ಎಸ್‌ಸಿಎಸ್ಟಿ ಕಾಯ್ದೆಯಡಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ. ಈ ಹಿಂದೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಟಿ ತನಿಷಾ ಕುಪ್ಪಂಡ ವಿರುದ್ಧ ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವರಿಂದ ನವೆಂಬರ್ 11ರಂದು ದೂರು ದಾಖಲಾಗಿದ್ದು, ನವೆಂಬರ್‌ 12 ದೂರಿನ ಆಧಾರದ ಮೇಲೆ‌ ಕುಂಬಳಗೂಡು ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅವಹೇಳನಕಾರಿ ಪದ ಬಳಕೆ ಬಗ್ಗೆ ತನಿಷಾ ವಿರುದ್ಧ ಆರೋಪ ಎದುರಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕುಂಬಳಗೋಡು ಪೊಲೀಸರು (Police) ಬಿಗ್ ಬಾಸ್ ಮನೆಗೆ ತೆರಳಿ, ನಟಿಯ ವಿಚಾರಣೆ ನಡೆಸಿದ್ದಾರೆ. ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

ಬಿಗ್ ಬಾಸ್ ಆಡಳಿತ ಮಂಡಳಿಗೂ ಪೊಲೀಸರು ನೋಟಿಸ್ ನೀಡಿದ್ದು, ಪ್ರೊಮೋದ ಓರಿಜನಲ್ ಫುಟೇಜ್ ಕೊಡಲು ಸೂಚಿಸಿದ್ದಾರೆ. ಪ್ರೋಮೋ ವಿಡಿಯೋ ಜೊತೆಗೆ ಒರಿಜಿನಲ್ ವಿಡಿಯೋವನ್ನು ಇಂದು ಪೊಲೀಸರು ಸಂಜೆ ಎಫ್.ಎಸ್.ಎಲ್ ಗೆ ಕಳುಹಿಸುವ ಸಾಧ್ಯತೆ ಇದ್ದು, ವರದಿ ಬಂದ ನಂತರ ತನಿಷಾ ಅವರ ವಿಚಾರಣೆಯನ್ನು ಪೊಲೀಸರು ಮುಂದುವರೆಸಲಿದ್ದಾರೆ.

ವರ್ತೂರು ಸಂತೋಷ್ ಮದುವೆ?: ಆರೋಪಗಳ ಸುರಿಮಳೆ

ಬಿಗ್ ಬಾಸ್ (Bigg Boss Kannada) ಮೂಲಕ ನಾಡಿಗೆ ಪರಿಚಯವಾದ ವರ್ತೂರು ಸಂತೋಷ್ (Varthur Santhosh) ನಾನಾ ಕಾರಣಗಳಿಂದಾಗಿ ಸುದ್ದಿ ಆಗ್ತಿದ್ದಾರೆ. ಈ ಹಿಂದೆ ಹುಲಿ ಉಗುರು ಕಾರಣಕ್ಕಾಗಿ ಅವರು ಸಂಚಲನ ಸೃಷ್ಟಿ ಮಾಡಿದ್ದರು. ಜೈಲಿಗೂ ಹೋಗಿ ಬಂದರು. ಜೈಲಿನಿಂದ ಹೋಗಿ ಬಂದ ನಂತರ ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟರು. ಕಳೆದ ಎರಡು ದಿನಗಳಿಂದ ಮತ್ತೆ ಮನೆಯಿಂದ ಆಚೆ ಹೋಗುವುದಾಗಿ ರಚ್ಚೆ ಹಿಡಿದಿದ್ದಾರೆ.

ಒಂದು ಕಡೆ ಬಿಗ್ ಬಾಸ್ ಕಾರಣದಿಂದ ವರ್ತೂರು ಸುದ್ದಿ ಆಗುತ್ತಿದ್ದರೆ, ಮತ್ತೊಂದು ಕಡೆ ಅವರು ಮದುವೆ (Marriage) ಆಗಿದ್ದಾರೆ ಎನ್ನಲಾದ ವಿಡಿಯೋ ಮತ್ತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಜಯಶ್ರೀ ಅನ್ನುವವರ ಜೊತೆ ಸಂತೋಷ್ ಈ ಹಿಂದೆ ಮದುವೆ ಆಗಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ, ಈ ಕುರಿತು ಬಿಗ್ ಬಾಸ್ ಮನೆಯಲ್ಲಿ ಯಾವತ್ತೂ ಸಂತೋಷ್ ಹೇಳಿಕೊಂಡಿಲ್ಲ. ಆದರೆ, ತನಿಷಾ ಜೊತೆ ಲವ್ವಿಡವ್ವಿ ಶುರು ಮಾಡಿದ್ದಾರೆ ಎನ್ನುವುದೂ ಸುಳ್ಳಲ್ಲ.

ಬಿಗ್ ಬಾಸ್ ಮನೆಯ ಬಹುತೇಕ ಕಂಟೆಸ್ಟೆಂಟ್ ಗಳು ತಮ್ಮ ಸಂಬಂಧಗಳ ಕುರಿತು ಮಾತನಾಡಿದ್ದಾರೆ. ಮದುವೆ, ಲವ್, ಬ್ರೇಕ್ ಅಪ್, ಕ್ರಶ್, ಡಿವೋರ್ಸ್ ಎಲ್ಲದರ ಬಗ್ಗೆಯೂ ಮಾತನಾಡಿದ್ದಾರೆ. ಹಳೆ ಲವರ್, ಹೊಸ ಲವ್ ಸ್ಟೋರಿ ಬಗ್ಗೆಯೂ ಹಂಚಿಕೊಂಡಿದ್ದಾರೆ. ಆದರೆ, ವರ್ತೂರು ಸಂತೋಷ್ ಮಾತ್ರ ಈವರೆಗೂ ತಮ್ಮ ಮದುವೆ ಬಗ್ಗೆ ಮಾತನಾಡಿಲ್ಲ. ಬಿಗ್ ಬಾಸ್ ಮನೆಗೆ ಹೋಗುವ ಮುನ್ನವೂ ಅವರು ತಮ್ಮ ತಾಯಿಯನ್ನು ಮಾತ್ರ ಕರೆದುಕೊಂಡು ಬಂದಿದ್ದರು. ಹೆಂಡತಿ ಬಂದಿರಲಿಲ್ಲ.

ಮೊನ್ನೆಯಷ್ಟೇ ಬಿಗ್ ಬಾಸ್ ಮನೆಯಿಂದ ಆಚೆ ಬಂದಿರುವ, ವರ್ತೂರು ಸಂತೋಷ್ ಅವರ ಕುಚಿಕು ಗೆಳೆಯನಂತಿದ್ದ ಬುಲೆಟ್ ರಕ್ಷಕ್ , ಈ ಹಿಂದೆ ಸಂತೋಷ್ ಬಗ್ಗೆ ಮಾತನಾಡಿದ್ದರು. ಅವರು ಮನೆಯಿಂದ ಆಚೆ ಬಂದ ತಕ್ಷಣವೇ ಎಂಗೇಜ್ ಮೆಂಟ್ ಆಗಲಿದ್ದಾರೆ ಎಂದು ಹೇಳಿದ್ದರು. ಹಾಗಾಗಿ ವರ್ತೂರು ಮದುವೆ ಬಗ್ಗೆ ಅನೇಕ ಗೊಂದಲಗಳು ಎದ್ದಿವೆ. ಆದರೆ, ವರ್ತೂರು ಸಂತೋಷ್ ಅವರದ್ದೇ ಎನ್ನಲಾದ ಮದುವೆ ಫೋಟೋ ಮತ್ತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಜೊತೆಗೆ ವರ್ತೂರು ಸಂತೋಷ್ ಮದುವೆ ಮಾಡಿಕೊಂಡ ಹುಡುಗಿಯ ತಂದೆಯದ್ದು ಎನ್ನಲಾದ ವಿಡಿಯೋ ಕೂಡ ಸಾಕಷ್ಟು ಸದ್ದು ಮಾಡಿದೆ. ವರ್ತೂರು ಒಬ್ಬ ಪತ್ನಿ ಪೀಡಕ, ಡ್ರಗ್ಸ್ ಸೇವನೆ ಮಾಡುತ್ತಿದ್ದ ಎಂದೆಲ್ಲ ವಿಡಿಯೋದಲ್ಲಿ ಇರುವ ವ್ಯಕ್ತಿಯೊಬ್ಬರು ಹೇಳಿದ್ದಾರೆ. ಅವರ ಸಂತೋಷ್ ಗೆ ಹೆಣ್ಣು ಕೊಟ್ಟ ತಂದೆ ಎಂದು ಹೇಳಿಕೊಂಡಿದ್ದಾರೆ. ಈ ಎಲ್ಲದಕ್ಕೂ ಸಂತೋಷ್ ಮನೆಯವರು ಏನು ಉತ್ತರ ಕೊಡುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ