ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಕಿಂಗ್‌ ಸ್ಟಾರ್‌ ಯಶ್ ಮತ್ತೋರ್ವ ಅಭಿಮಾನಿ ಸಾವು

Twitter
Facebook
LinkedIn
WhatsApp
ರಾಕಿಂಗ್‌ ಸ್ಟಾರ್‌ ಯಶ್ ಮತ್ತೋರ್ವ ಅಭಿಮಾನಿ ಸಾವು

ಗದಗ: ಮೂವರು ಅಭಿಮಾನಿಗಳ ಸಾವಿನ್ನಪ್ಪಿದ ದುರ್ಘಟನೆ ಮಾಸುವ ಮುನ್ನವೇ ರಾಕಿಂಗ್‌ ಸ್ಟಾರ್‌ ಯಶ್ (Rocking Star Yash) ಮತ್ತೋರ್ವ ಅಭಿಮಾನಿ ಇಂದು ಮೃತಪಟ್ಟಿದ್ದಾರೆ.

ಮೃತನನ್ನು ನಿಖಿಲ್ ಗೌಡ (22) ಎಂದು ಗುರುತಿಸಲಾಗಿದ್ದು, ಈತ ಗದಗದ ಬಿಂಕದಕಟ್ಟಿ ನಿವಾಸಿ. ಈತ ಲಕ್ಷ್ಮೇಶ್ವರ ಅಗಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿ.

ಗದಗ ಜಿಲ್ಲೆ ಸೊರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬದ ಅಂಗವಾಗಿ ತಡರಾತ್ರಿ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಮುರಳಿ, ನವೀನ್, ಹನುಮಂತ ಎಂಬ ಮೂವರು ನಿಧನರಾಗಿದ್ದು, ಉಳಿದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಹೀಗಾಗಿ ಮೃತ ಅಭಿಮಾನಿಗಳ ಮನೆಗೆ ಭೇಟಿ ಕೊಟ್ಟ ಯಶ್‌, ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಭಿಮಾನಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲು ತೆರಳಿದ್ದರು. ಈ ವೇಳೆ ಯಶ್‌ ನೋಡಲು ನಿಖಿಲ್‌ ಗದಗಕ್ಕೆ ಬಂದಿದ್ದ. ಬಳಿಕ ಯಶ್ ಹುಬ್ಬಳ್ಳಿಗೆ ವಾಪಸ್ಸಾಗುವಾಗ ತನ್ನ ಬೈಕಿನಲ್ಲಿ ಯಶ್ ವಾಹನ ಫಾಲೋ ಮಾಡಲು ಮುಂದಾಗಿದ್ದ. ಈ ವೇಳೆ ಪೊಲೀಸ್ ವಾಹನಕ್ಕೆ ‌ಡಿಕ್ಕಿ ಹೊಡೆದು ಅಪಘಾತವಾಗಿತ್ತು. ಪರಿಣಾಮ ನಿಖಿಲ್‌ ಕೂಡ ಗಂಭೀರ ಗಾಯಗೊಂಡಿದ್ದ.

ಕೂಡಲೇ ಆತನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ನಿಖಿಲ್‌ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ. ಸದ್ಯ ಆಸ್ಪತ್ರೆ ಬಳಿ‌ ನಿಖಿಲ್ ಕುಟುಂಬಸ್ಥರ‌ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ಮುಂದೆ ನನ್ನ ಕಟೌಟ್ ಹಾಕಬೇಡಿ- ಅಭಿಮಾನಿಗಳಲ್ಲಿ ಯಶ್ ಮನವಿ

ರಾಕಿಂಗ್ ಸ್ಟಾರ್ ಯಶ್ (Yash) ಅವರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರೋ ಮೂವರು ಅಭಿಮಾನಿಗಳ ಕುಟುಂಬಕ್ಕೆ ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಇದೇ ವೇಳೆ, ಇನ್ಮುಂದೆ ನನ್ನ ಬ್ಯಾನರ್ ಎಲ್ಲೂ ಕಟ್ಟಬೇಡಿ, ಎಲ್ಲಿಯೂ ಕಟೌಟ್ ಹಾಕಬೇಡಿ ಎಂದು ಫ್ಯಾನ್ಸ್‌ಗೆ ಯಶ್ ಮನವಿ ಮಾಡಿದ್ದಾರೆ.

ಗದಗದ ಸೊರಣಗಿ ಗ್ರಾಮದಲ್ಲಿ ಮೃತರಾಗಿರೋ ಮುರಳಿ, ನವೀನ್, ಹನುಮಂತ ಮೂವರ ಕುಟುಂಬಕ್ಕೂ ಯಶ್ ತೆರಳಿ ಭೇಟಿ ನೀಡಿ ಸಾಂತ್ವನ ಹೇಳಿದ್ದಲ್ಲದೇ ಅವರ ಜೊತೆ ಇರೋದಾಗಿ ಯಶ್ ಭರವಸೆ ನೀಡಿದ್ದಾರೆ. ಅವರ ಕುಟುಂಬಕ್ಕೆ ಏನು ಸಹಾಯ ಬೇಕೋ ಅದನ್ನು ಮಾಡುತ್ತೇನೆ ಎಂದು ಯಶ್ ಮಾತನಾಡಿದ್ದಾರೆ.

ನಿಮ್ಮೊಂದಿಗೆ ನಾನು ಇದ್ದೇನೆ. ಯಾವುದೇ ಕಾರಣಕ್ಕೂ ಆತಂಕ ಬೇಡ ಎಂದಿದ್ದಾರೆ. ಈ ದುರ್ಘಟನೆ ಆಗಬಾರದಿದ್ದು, ನನಗೂ ತುಂಬಾ ದುಃಖ ಆಗಿದೆ ಎಂದು ಯಶ್ ಹೇಳಿದ್ದಾರೆ. ಇನ್ಮುಂದೆ ನನ್ನ ಬ್ಯಾನರ್ ಕಟ್ಟ ಬೇಡಿ, ಎಲ್ಲಿಯೂ ಕಟೌಟ್‌ಗಳನ್ನು ಹಾಕಬೇಡಿ ಎಂದು ಯಶ್ ಕೋರಿಕೆಯೊಂದನ್ನ ಮುಂದಿಟ್ಟಿದ್ದಾರೆ.

ನಿಮ್ಮ ಪ್ರೀತಿಗೆ ನಾನು ಸದಾ ಆಭಾರಿಯಾಗಿದ್ದೇನೆ. ಈ ಘಟನೆಯಿಂದ ನನಗೆ ತುಂಬಾ ಬೇಸರವಾಗಿದೆ. ಅಭಿಮಾನಿಗಳ ಅಭಿಮಾನ ಮತ್ತು ನನ್ನ ಕೆಲಸದಿಂದ ಬದುಕು ರೂಪಿಸಿಕೊಂಡಿದ್ದೇನೆ. ಕಲಾವಿದರ ಮೇಲೆ ಅಭಿಮಾನ ಇರಲಿ ಆದರೆ ಈ ರೀತಿಯ ಅಭಿಮಾನ ಬೇಡ ಎಂದು ಯಶ್ ಮಾತನಾಡಿದ್ದಾರೆ.

ಅಭಿಮಾನಿಗಳು ಅಭಿಮಾನದ ಜೊತೆ ಅವರ ಬದುಕು ರೂಪಿಸಿಕೊಂಡರೆ ನನಗೆ ಸಂತೋಷ. ಈ ಘಟನೆಯಿಂದಾಗಿ ನಾನು ಜನ್ಮದಿನ ಅಚರಣೆ ಮಾಡಬಾರದೆಂದು ನಿರ್ಧಾರಕ್ಕೆ ಬಂದಿದ್ದೇನೆ. ನನ್ನ ಜನ್ಮದಿನವೆಂದರೆ ನನಗೆ ಭಯವಾಗುತ್ತಿದೆ. ಕೋವಿಡ್ ಕಾರಣ ಜನ್ಮದಿನ ಆಚರಣೆಗೆ ಮುಂದಾಗಲಿಲ್ಲ ಯಶ್ ಮಾತನಾಡಿದ್ದರು. ಕುಟುಂಬಕ್ಕೆ ಸಹಾಯ ಮಾಡುವ ಬಗ್ಗೆ ಘೋಷನೆ ಮಾಡುವುದು ದೊಡ್ಡ ವಿಚಾರವಲ್ಲ. ಆದರೆ ಸದಾ ಅವರ ಕುಟುಂಬದ ಜೊತೆ ಇದ್ದೇ ಇರುತ್ತೇನೆ ಎಂದು ಯಶ್ ಭರವಸೆ ನೀಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist