ಕರ್ನಾಟಕಕ್ಕೆ ಮತ್ತೆ ಶಾಕ್ ; 15 ದಿನಗಳ ಕಾಲ 5000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ!
ನವದೆಹಲಿ, (ಸೆಪ್ಟೆಂಬರ್ 21): ತಮಿಳುನಾಡಿಗೆ ಕೆಆರ್ಎಸ್ನಿಂದ 5000 ಕ್ಯೂಸೆಕ್ ನೀರು ಹರಿಸಬೇಕೆಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. CWMA ಆದೇಶ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿ, ಮುಂದಿನ 15 ದಿನಗಳ ಕಾಲ ಪ್ರತಿದಿನ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ ಹೀಗಾಗಿ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಲಾಗುವುದಿಲ್ಲ.
ಎರಡು ಸಮಿತಿಗಳ ಆದೇಶವನ್ನು ಒಪ್ಪಬೇಕಾಗುತ್ತೆ. ಎರಡು ಸಮಿತಿಗಳ ಆದೇಶವನ್ನು ಕರ್ನಾಟಕ ಪಾಲಿಸಬೇಕು, ಹೀಗಾಗಿ ಕರ್ನಾಟಕ ನೀರು ಹರಿಸಲೇಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಚಂದ್ರಬಾಬು ನಾಯ್ಡು ಜಾಮೀನು ಅರ್ಜಿ ವಿಚಾರಣೆ ಸೆ.21ಕ್ಕೆ ಮುಂದೂಡಿಕೆ
ಅಮರಾವತಿ: ಆಂಧ್ರಪ್ರದೇಶ (Andhra Pradesh) ಮಾಜಿ ಮುಖ್ಯಮಂತ್ರಿ, ಟಿಡಿಪಿ (TDP) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು (N.Chandrababu Naidu) ಅವರ ಜಾಮೀನು (Bail) ಅರ್ಜಿ ವಿಚಾರಣೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ಮಂಗಳವಾರ ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ.
ಟಿಡಿಪಿ ಕಾನೂನು ತಂಡವು ಹೈಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದೆ. ಟಿಡಿಪಿ ಕಾನೂನು ಸಲಹೆಗಾರ ಸುಪ್ರೀಮ್ ಸಿದ್ದಾರ್ಥ್ ಲೂತ್ರಾ ಅವರು ತಮ್ಮ ವಾದವನ್ನು ವಾಸ್ತವಿಕವಾಗಿ ಮಂಡಿಸಿದರು.
ಕೌಶಲ್ಯಾಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ವಿಜಯವಾಡದ ಭ್ರಷ್ಟಾಚಾರ ನಿಗ್ರಹ ದಳ (ACB) ನ್ಯಾಯಾಲಯವು ಸೆಪ್ಟೆಂಬರ್ 23ರವರೆಗೆ ಚಂದ್ರಬಾಬು ನಾಯ್ಡುವನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ನಾಯ್ಡು ಅವರನ್ನು ಬಂಧಿಸಿರುವ ಪ್ರಕರಣವು ಆಂಧ್ರಪ್ರದೇಶದಲ್ಲಿರುವ ಸೆಂಟರ್ಸ್ ಆಫ್ ಎಕ್ಸಲೆನ್ಸ್ (COE) ಕ್ಲಸ್ಟರ್‌ಗಳ ಸ್ಥಾಪನೆಗೆ ಸಂಬಂಧಿಸಿದ್ದು, ಒಟ್ಟು ಅಂದಾಜು ಯೋಜನಾ ಮೌಲ್ಯ 3,300 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಕ್ರಮದಿಂದ ರಾಜ್ಯ ಸರ್ಕಾರಕ್ಕೆ 300 ಕೋಟಿಗೂ ಅಧಿಕ ನಷ್ಟ ಉಂಟಾಗಿದೆ ಎಂದು ಸಂಸ್ಥೆ ಅಧಿಕಾರಿಗಳು ಹೇಳಿದ್ದಾರೆ.