ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಡೀಪ್​ಫೇಕ್ ಫೋಟೋ ವೈರಲ್; ಕೇಸ್ ದಾಖಲಿಸಿದ ಪೋಷಕರು..!

Twitter
Facebook
LinkedIn
WhatsApp
ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಡೀಪ್​ಫೇಕ್ ಫೋಟೋ ವೈರಲ್; ಕೇಸ್ ದಾಖಲಿಸಿದ ಪೋಷಕರು..!

ಇತ್ತೀಚೆಗೆ ಅನುಷ್ಕಾ ಶೆಟ್ಟಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಅನುಷ್ಕಾ ಹಾಗೂ ಪ್ರಭಾಸ್ ಮದುವೆಯಾಗಿ ಅವರಿಗೆ ಮಕ್ಕಳು ಇರುವಂಥ ಫೋಟೋಗಳನ್ನು ಸೃಷ್ಟಿ ಮಾಡಲಾಗಿದೆ. ಇದೇ ವಿಚಾರವಾಗಿ ಅನುಷ್ಕಾ ಪೋಷಕರು ಪೊಲೀಸರ ಬಳಿ ದೂರು ದಾಖಲಿಸಲಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಟಾಲಿವುಡ್ನ ಬೇಡಿಕೆಯ ನಟಿ ಆಗಿದ್ದಾರೆ. ಪೂರಿ ಜಗನ್ನಾಥ್ ನಿರ್ದೇಶನದ ‘ಸೂಪರ್’ ಚಿತ್ರದ ಮೂಲಕ ಅನುಷ್ಕಾ ನಾಯಕಿಯಾಗಿ ಪಾದಾರ್ಪಣೆ ಮಾಡಿದರು. ಹಲವು ಚಿತ್ರಗಳಲ್ಲಿ ನಟಿಸಿ ಒಳ್ಳೆಯ ಹೆಸರು ಗಳಿಸಿದರು. ಕೇವಲ ಸ್ಟಾರ್ ಹೀರೋ ಚಿತ್ರಗಳಲ್ಲಿ ನಾಯಕಿ ಆಗಿ ನಟಿಸುವುದು ಮಾತ್ರವಲ್ಲದೆ ಮಹಿಳಾ ಪ್ರಧಾನ ಸಿನಿಮಾಗಳ ಮೂಲಕವೂ ಅವರು ಗಮನ ಸೆಳೆದಿದ್ದಾರೆ. ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಅನುಷ್ಕಾ ಚ್ಯೂಸಿ ಆಗಿದ್ದಾರೆ. ಈಗ ಅವರ ಡೀಪ್ಫೇಕ್ ಫೋಟೋ ಒಂದು ವೈರಲ್ ಆಗಿದೆ. ಇದಕ್ಕೆ ಸಂಬಂಧಿಸಿ ಅವರ ಪಾಲಕರು ಕೇಸ್ ಹಾಕಿದ್ದಾರೆ.

ಕಳೆದ ವರ್ಷ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾದ ಮೂಲಕ ಅನುಷ್ಕಾಗೆ ಯಶಸ್ಸು ಸಿಕ್ಕಿದೆ. ಈ ನಡುವೆ ಅನುಷ್ಕಾ ಶೆಟ್ಟಿ ಪೋಷಕರು ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ. ಅದಕ್ಕೆ ಕಾರಣ ಡೀಪ್​ಫೇಕ್ ಫೋಟೋ. ಇತ್ತೀಚೆಗೆ ನಾಯಕಿಯರ ಡೀಪ್​ಫೇಕ್ ವಿಡಿಯೋಗಳು ವೈರಲ್ ಆಗುತ್ತಿವೆ. ಆ್ಯಪ್​ಗಳ ಸಹಾಯದಿಂದ ಕೆಲವರು ಅಶ್ಲೀಲ ಫೋಟೋಗಳು ಮತ್ತು ವೀಡಿಯೊಗಳನ್ನು ರೆಡಿ ಮಾಡಿ ವೈರಲ್ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಡೀಪ್​ಫೇಕ್ ವೀಡಿಯೋ ವೈರಲ್ ಆಗುತ್ತಿದ್ದಂತೆ ಹಲವರು ಇದಕ್ಕೆ ಪ್ರತಿಕ್ರಿಯಿಸಿದ್ದರು. ಇಂತಹ ಅಶ್ಲೀಲ ವಿಡಿಯೋಗಳನ್ನು ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿತ್ತು. ನಂತರ ತಪ್ಪಿತಸ್ಥನನ್ನು ಬಂಧಿಸಲಾಗಿತ್ತು. ಈಗ ಅನುಷ್ಕಾ ಅವರ ಡೀಪ್​ಫೇಕ್ ಫೋಟೋ ವೈರಲ್ ಆಗಿದೆ.

ಇತ್ತೀಚೆಗೆ ಅನುಷ್ಕಾ ಶೆಟ್ಟಿಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಅನುಷ್ಕಾ ಹಾಗೂ ಪ್ರಭಾಸ್ ಮದುವೆಯಾಗಿ ಅವರಿಗೆ ಮಕ್ಕಳು ಇರುವಂಥ ಫೋಟೋಗಳನ್ನು ಸೃಷ್ಟಿ ಮಾಡಲಾಗಿದೆ. ಇದೇ ವಿಚಾರವಾಗಿ ಅನುಷ್ಕಾ ಶೆಟ್ಟಿ ಪೋಷಕರು ಪೊಲೀಸರ ಬಳಿ ದೂರು ದಾಖಲಿಸಲಿದ್ದಾರೆ. ಇಂತಹ ಸುಳ್ಳು ಸುದ್ದಿ ಹಾಗೂ ನಕಲಿ ಫೋಟೋಗಳನ್ನು ವೈರಲ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ವರದಿಯಾಗಿದೆ.

ಅನುಷ್ಕಾ ಶೆಟ್ಟಿ ಅವರು 2005ರಲ್ಲಿ ರಿಲೀಸ್ ಆದ ‘ಸೂಪರ್’ ಸಿನಿಮಾದಲ್ಲಿ ಸಶಾ ಹೆಸರಿನ ಪಾತ್ರ ಮಾಡಿದ್ದರು. ಇದು ತೆಲುಗು ಸಿನಿಮಾ ಆಗಿತ್ತು. ನಂತರ ಅವರು ತಮಿಳು ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಬಾಹುಬಲಿ’ ಸಿನಿಮಾ ಬಳಿಕ ಅವರ ಖ್ಯಾತಿ ಹೆಚ್ಚಾಗಿದೆ. ಸದ್ಯ ಅವರು ಮಲಯಾಳಂ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ.

ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಅವರು ಪರಸ್ಪರ ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಮದುವೆ ಆಗಲಿದ್ದಾರೆ ಎಂದು ಸುದ್ದಿ ಹರಡಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಇವರ ಸಂಬಂಧದ ಕುರಿತು ಹಲವು ವದಂತಿಗಳು ಹಬ್ಬಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist