ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ

Twitter
Facebook
LinkedIn
WhatsApp
aparna

Anchor Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಅವರು ವಿಧಿವಶರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರಿಗೆ 58 ವರ್ಷ ವಯಸ್ಸಾಗಿತ್ತು. ಕಳೆದ ಎರಡು ವರ್ಷಗಳಿಂದ ಅವರು ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಗುರುವಾರ (ಜುಲೈ 11) ರಾತ್ರಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ.

ನಿರೂಪಣೆ ಮಾತ್ರವಲ್ಲದೇ ನಟನೆ ಮೂಲಕವೂ ಅಪರ್ಣಾ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದಿದ್ದರು.

ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ಅವರು ನಿರೂಪಿಸಿದರು. ನಂತರ ಭಾರತ ಸರ್ಕಾರದ ‘ವಿವಿಧ ಭಾರತಿ’ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಸತತ ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಬೆಂಗಳೂರಿನ ‘ನಮ್ಮ ಮೆಟ್ರೋ’ ರೈಲಿನಲ್ಲಿ ಕೇಳಿಬರುವ ಪ್ರಯಾಣಿಕರ ಸೂಚನೆಗಳಿಗೆ ಅಪರ್ಣಾ ಧ್ವನಿ ನೀಡಿದ್ದರು. ಆ ಮೂಲಕ ಅವರು ಜನರಿಗೆ ಇನ್ನಷ್ಟು ಹತ್ತಿರ ಆಗಿದ್ದರು. ಪುಟ್ಟಣ್ಣ ಕಣಗಾಲ್​ ನಿರ್ದೇಶನದ ‘ಮಸಣದ ಹೂವು’ ಸಿನಿಮಾ ಮೂಲಕ ಅಪರ್ಣಾ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಅವರು ಕೊನೆಯದಾಗಿ ನಟಿಸಿದ್ದ ‘ಗ್ರೇ ಗೇಮ್ಸ್​’ ಸಿನಿಮಾ ಇತ್ತೀಚೆಗೆ ತೆರೆಕಂಡಿತ್ತು.

ರಾಜ್ಯ ಸರಕಾರದ ಪ್ರಾಯೋಜಿತ ಪ್ರಮುಖ ಕಾರ್ಯಕ್ರಮಗಳನ್ನು ಬಹುಪಾಲು ಅವರೇ ನಿರೂಪಿಸುತ್ತಿದ್ದರು. ಶಂಕರ್‌ ಪ್ರಕಾಶ್‌- ಅಪರ್ಣಾ ನಿರೂಪಕ ಜೋಡಿ ಕಂಠಸಿರಿ ಕನ್ನಡಿಗರ ಮನಗೆದ್ದಿತ್ತು. ಇಂಗ್ಲಿಷ್‌ ಪದಗಳನ್ನು ಬಳಸದೆ ಅಪ್ಪಟ ಕನ್ನಡದಲ್ಲೇ ಕಾರ್ಯಕ್ರಮ ನಿರೂಪಿಸುತ್ತಿದ್ದುದು ಅಪರ್ಣಾ ನಿರೂಪಣಾ ಶೈಲಿಯ ವಿಶೇಷವಾಗಿತ್ತು. ಈ ಕಾರಣಕ್ಕಾಗಿಯೇ ಅವರು ಕನ್ನಡಿಗರ ಮನಗೆದ್ದಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಅವರು ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು.

1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ಮಸಣದ ಹೂವು’ ಸಿನಿಮಾದಲ್ಲಿ ಪಾರ್ವತಿ ಎಂಬ ಪಾತ್ರ ಮಾಡುವ ಮೂಲಕ ಬಣ್ಣದ ಲೋಕಕ್ಕೆ ಅಪರ್ಣಾ ಎಂಟ್ರಿ ನೀಡಿದ್ದರು. ಆನಂತರ ಸಂಗ್ರಾಮ, ನಮ್ಮೂರ ರಾಜ, ಸಾಹಸ ವೀರ, ಇನ್ಸ್‌ಪೆಕ್ಟರ್ ವಿಕ್ರಂ, ಡಾಕ್ಟರ್ ಕೃಷ್ಣ ಮುಂತಾದ ಸಿನಿಮಾಗಳಲ್ಲಿ ನಟಿಸಿದರು. ಬಳಿಕ ಸಿನಿಮಾಗಳಿಂದ ಸಂಪೂರ್ಣವಾಗಿ ದೂರ ಉಳಿದಿದ್ದ ಅಪರ್ಣಾ, ಈಚೆಗಷ್ಟೇ ತೆರೆಕಂಡ ‘ಗ್ರೇ ಗೇಮ್ಸ್‌’ ಎಂಬ ಸಿನಿಮಾದಲ್ಲಿ ಕೊನೆಯದಾಗಿ ನಟಿಸಿದ್ದರು.

2003ರಲ್ಲಿ ಪ್ರಸಾರ ಆರಂಭಿಸಿದ ‘ಮೂಡಲ ಮನೆ’ ಧಾರಾವಾಹಿಯಲ್ಲಿ ಅಪರ್ಣಾ ಬಣ್ಣ ಹಚ್ಚಿದರು. ಆ ಬಳಿಕ ಹಲವು ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆಯನ್ನು ಅವರು ಮಾಡಿದರು. ಕಿರುತೆರೆಯ ಬೇಡಿಕೆಯ ನಿರೂಪಕಿ ಆಗಿದ್ದರು. ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರಮ ಒಂದರಲ್ಲಿ ಸತತ ಎಂಟು ಗಂಟೆ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಅಪರ್ಣಾ ಅವರು ಬಿಗ್ ಬಾಸ್​ಗೂ ಕಾಲಿಟ್ಟಿದ್ದರು. 2013ರಲ್ಲಿ ಪ್ರಸಾರ ಕಂಡ ‘ಬಿಗ್ ಬಾಸ್ ಕನ್ನಡ ಸೀಸನ್ 1’ರಲ್ಲಿ ಅವರು ಸ್ಪರ್ಧೆಯಾಗಿದ್ದರು. ಸೃಜನ್ ಲೋಕೇಶ್ ನಿರೂಪಣೆಯಲ್ಲಿ ಮೂಡಿ ಬಂದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಗಮನ ಸೆಳೆದಿದ್ದರು. ನಮ್ಮ ಮೆಟ್ರೋದಲ್ಲಿ ಬರುವ ‘ಮುಂದಿನ ನಿಲ್ದಾಣ..’ ಎನ್ನುವ ಧ್ವನಿ ಅಪರ್ಣಾ ಅವರದ್ದೇ.

‘ಮಜಾ ಟಾಕೀಸ್’ ಕಾರ್ಯಕ್ರಮ ಬಿಡಲು ಅಪರ್ಣಾ ಮುಂದಾಗಿದ್ದರು. ತಮ್ಮ ಪಾತ್ರ ಟ್ರೋಲ್ ಆಗುತ್ತಿದೆ ಎಂದು ಅವರಿಗೆ ಅನಿಸಿತ್ತು. ಈ ಕಾರಣದಿಂದಲೇ ಅವರು ಕಾರ್ಯಕ್ರಮ ತೊರೆಯಲು ನಿರ್ಧರಿಸಿದ್ದರು. ಆ ಬಳಿಕ ಸೃಜನ್ ಲೋಕೇಶ್ ಅವರು ಮನ ಒಲಿಸಿ ಅವರನ್ನು ಉಳಿಸಿಕೊಂಡಿದ್ದರು. 2005ರಲ್ಲಿ ವಾಸ್ತುಶಿಲ್ಪಿ ಹಾಗೂ ಕವಿ ನಾಗರಾಜ ವಸ್ತಾರೆ ಅವರನ್ನು ತಮ್ಮ ಬಾಳ ಸಂಗಾತಿಯಾಗಿ ಅಪರ್ಣಾ ಸ್ವೀಕರಿಸಿದ್ದರು.

ಅಪರ್ಣಾ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಕಾಣಿಸಿತ್ತು. ಕಳೆದ ಎರಡು ವರ್ಷಗಳಿಂದ ಅವರು ಕ್ಯಾನ್ಸರ್ ವಿರುದ್ಧ ಹೋರಾಡುತ್ತಾ ಇದ್ದರು. ಕ್ಯಾನ್ಸರ್ ನಾಲ್ಕನೇ ಸ್ಟೇಜ್​ನಲ್ಲಿ ಇತ್ತು. ಕಿಮೋ ಥೆರೆಪಿ ಕೂಡ ಮಾಡಿಸಿದ್ದರು. ಇದೆ ಅಕ್ಟೋಬರ್​ಗೆ ಅಪರ್ಣಾಗೆ 58 ವರ್ಷ ಆಗುತ್ತಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist