ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ: ದ.ಕ ಜಿಲ್ಲೆಗೆ ದಿನೇಶ್ ಗುಂಡೂರಾವ್- ಉಡುಪಿಗೆ ಲಕ್ಷ್ಮಿ ಹೆಬ್ಬಾಳ್ಕರ್; ಇಲ್ಲಿದೆ ಪಟ್ಟಿ

Twitter
Facebook
LinkedIn
WhatsApp
10309159899820104861

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐತಿಹಾಸಿಕ ಗೆಲುವು ಸಾಧಿಸಿದ್ದ ಕಾಂಗ್ರೆಸ್‌ ಸರ್ಕಾರ ರಚನೆಯಲ್ಲಿಯ ಆರಂಭದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಹೈಕಮಾಂಡ್‌ ನಾಯಕರ ಸಮ್ಮುಖದಲ್ಲಿ ಎಲ್ಲಾ ಗೊಂದಲಗಳಿಗೂ ತೆರೆ ಬಿದ್ದಿತ್ತು. ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆಯನ್ನೂ ಸಹ ಹೈಕಮಾಂಡ್​ ಮಟ್ಟದಲ್ಲಿ ಚರ್ಚಿಸಿ ಹಂಚಲಾಗಿತ್ತು. ಇದೀಗ ತೀವ್ರ ಕುತೂಹಲ ಮೂಡಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗಿದೆ. ಹಾಗಾದ್ರೆ, ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ.

  • ಬೆಂಗಳೂರು ನಗರ ಉಸ್ತುವಾರಿ ಸಚಿವ- ಡಿ.ಕೆ.ಶಿವಕುಮಾರ್​
  • ತುಮಕೂರು ಜಿಲ್ಲಾ ಉಸ್ತುವಾರಿ-ಡಾ.ಜಿ.ಪರಮೇಶ್ವರ್​
  • ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹೆಚ್​.ಕೆ.ಪಾಟೀಲ್
  • ಬೆಂಗಳೂರು ಗ್ರಾಮಾಂತರ-ಕೆ.ಹೆಚ್​.ಮುನಿಯಪ್ಪ
  • ರಾಮಲಿಂಗಾರೆಡ್ಡಿ-ರಾಮನಗರ
  • ಕೆ.ಜೆ.ಜಾರ್ಜ್​-ಚಿಕ್ಕಮಗಳೂರು
  • ಎಂ.ಬಿ.ಪಾಟೀಲ್​-ವಿಜಯಪುರ
  • ದಿನೇಶ್ ಗುಂಡೂರಾವ್​-ದಕ್ಷಿಣ ಕನ್ನಡ
  • ಹೆಚ್​.ಸಿ.ಮಹದೇವಪ್ಪ-ಮೈಸೂರು,
  • ಸತೀಶ್ ಜಾರಕಿಹೊಳಿ-ಬೆಳಗಾವಿ
  • ಪ್ರಿಯಾಂಕ್​ ಖರ್ಗೆ-ಕಲಬುರಗಿ
  • ಶಿವಾನಂದಪಾಟೀಲ್-ಹಾವೇರಿ
  • ಜಮೀರ್​ ಅಹ್ಮದ್ ಖಾನ್​​-ವಿಜಯನಗರ
  • ಶರಣಬಸಪ್ಪ ದರ್ಶನಾಪುರ-ಯಾದಗಿರಿ
  • ಈಶ್ವರ್ ಖಂಡ್ರೆ-ಬೀದರ್,
  • ಚಲುವರಾಯಸ್ವಾಮಿ-ಮಂಡ್ಯ
  • ಎಸ್​.ಎಸ್​.ಮಲ್ಲಿಕಾರ್ಜುನ್​-ದಾವಣಗೆರೆ
  • ಸಂತೋಷ್ ಲಾಡ್-ಧಾರವಾಡ
  • ಶರಣಪ್ರಕಾಶ್ ಪಾಟೀಲ್​-ರಾಯಚೂರು
  • ಆರ್​.ಬಿ.ತಿಮ್ಮಾಪುರ-ಬಾಗಲಕೋಟೆ
  • ಕೆ.ವೆಂಕಟೇಶ್​-ಚಾಮರಾಜನಗರ
  • ಕೊಪ್ಪಳ-ಶಿವರಾಜ್​ ತಂಗಡಗಿ
  • ಡಿ.ಸುಧಾಕರ್​-ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ
  • ಬಿ.ನಾಗೇಂದ್ರ-ಬಳ್ಳಾರಿ
  • ಕೆ.ಎನ್​.ರಾಜಣ್ಣ-ಹಾಸನ
  • ಭೈರತಿ ಸುರೇಶ್​-ಕೋಲಾರ
  • ಲಕ್ಷ್ಮೀ ಹೆಬ್ಬಾಳ್ಕರ್​-ಉಡುಪಿ
  • ಮಂಕಾಳ್ ವೈದ್ಯ-ಉತ್ತರ ಕನ್ನಡ
  • ಮಧು ಬಂಗಾರಪ್ಪ-ಶಿವಮೊಗ್ಗ
  • ಡಾ.ಎಂ.ಸಿ.ಸುಧಾಕರ್-ಚಿಕ್ಕಬಳ್ಳಾಪುರ
  • ಎನ್​.ಎಸ್​.ಬೋಸರಾಜು-ಕೊಡಗು ಜಿಲ್ಲಾ

ದರಲ್ಲಿ ಪ್ರಮುಖ ಅಂಶ ಅಂದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಮನಗರ ಬಿಟ್ಟು ಬೆಂಗಳೂರು ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ಇನ್ನು ರಾಮನಗರ ಜಿಲ್ಲಾ ಉಸ್ತುವಾರಿಯನ್ನು ರಾಮಲಿಂಗಾರೆಡ್ಡಿ ಅವರಿಗೆ ವಹಿಸಲಾಗಿದೆ.

ನಿರೀಕ್ಷೆಯಂತೆ ಸಚಿವ ಸತೀಶ್ ಜಾರಕಿಹೊಳಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸ್ಥಾನ ಸಿಕ್ಕಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ನಿರಾಸೆಯಾಗಿದೆ. ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಿಗುವುದು ಅನುಮಾನ ಎಂದು ಅರಿತುಕೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಸ್ವಕ್ಷೇತ್ರಕ್ಕೆ​ ಹತ್ತಿರವಾಗುವ ಧಾರವಾಡ ಅಥವಾ ಉತ್ತರ ಕನ್ನಡದ ಮೇಲೆ ಕಣ್ಣಿಟ್ಟಿದ್ದರು. ಆದ್ರೆ, ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಉಡುಪಿ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇನ್ನು ಸಂತೋಷ್ ಲಾಡ್‌ಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಿಕ್ಕಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ