ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕ್ಷುಲ್ಲಕ ಕಾರಣಕ್ಕೆ ವಾಗ್ವಾದ; ಮಹಿಳೆಯಕಪಾಳಕ್ಕೆ ಹೊಡೆದ ನಿವೃತ್ತ ಐಎಎಸ್ ಅಧಿಕಾರಿ! ಇಲ್ಲಿದೆ ವಿಡಿಯೋ

Twitter
Facebook
LinkedIn
WhatsApp
ಕ್ಷುಲ್ಲಕ ಕಾರಣಕ್ಕೆ ವಾಗ್ವಾದ; ಮಹಿಳೆಯಕಪಾಳಕ್ಕೆ ಹೊಡೆದ ನಿವೃತ್ತ ಐಎಎಸ್ ಅಧಿಕಾರಿ! ಇಲ್ಲಿದೆ ವಿಡಿಯೋ

ನೋಯ್ಡಾ: ಸಾಕುನಾಯಿಯನ್ನು ಲಿಫ್ಟ್‌ನಲ್ಲಿ ಒಯ್ದ ಹಿನ್ನೆಲೆಯಲ್ಲಿ ಮಹಿಳೆ ಮತ್ತು ನಿವೃತ್ತ ಐಎಎಸ್ ಅಧಿಕಾರಿಯೊಬ್ಬನ ನಡುವೆ ವಾಗ್ವಾದ ನಡೆದಿದ್ದು, ಅಧಿಕಾರಿ ಮಹಿಲೆಗೆ ಕಪಾಳಮೋಕ್ಷ ಮಾಡಿದ ಘಟನೆ ನೋಯ್ಡಾದಲ್ಲಿ ನಡೆದಿದೆ. ವಾಗ್ವಾದ ತಾರಕಕ್ಕೇರಿ ಆರ್.ಪಿ.ಗುಪ್ತಾ ಮಹಿಳೆಗೆ ಹೊಡೆದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸದ್ಯ ವಿಡಿಯೊ ವೈರಲ್‌ (Viral Video) ಆಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಡಿಯೊದಲ್ಲೇನಿದೆ?

ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ ಆರ್.ಪಿ.ಗುಪ್ತಾ ಮತ್ತು ಮಹಿಳೆಯ ನಡುವಿನ ಹೊಡೆದಾಟದ ದೃಶ್ಯ ಸೆರೆಯಾಗಿದೆ. ಶ್ವಾನವನ್ನು ಲಿಫ್ಟ್‌ನಲ್ಲಿ ಕರೆ ತಂದಿರುವುದಕ್ಕೆ ಗುಪ್ತಾ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಕುಪಿತರಾದ ಮಹಿಳೆ ವಾಗ್ವಾದಕ್ಕಿಳಿದರು. ಇಡೀ ಘಟನೆಯನ್ನು ರೆಕಾರ್ಡ್ ಮಾಡಲು ಗುಪ್ತಾ ಮುಂದಾದಾಗ ಮಹಿಳೆ ತಡೆಯಲು ಯತ್ನಿಸುತ್ತಾರೆ. ಮೊಬೈಲ್‌ ಕಸಿದುಕೊಳ್ಳಲು ಆ ಮಹಿಳೆ ಮುಂದಾದಾಗ ಗುಪ್ತಾ ರೋಷದಿಂದ ಆಕೆಯ ಕೆನ್ನೆಗೆ ಹೊಡೆಯುತ್ತಾರೆ. ತನ್ನನ್ನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ ಮಹಿಳೆ ಕೂಡ ತನ್ನ ಕೈಯನ್ನು ಅಡ್ಡ ಹಿಡಿಯುವುದು ವಿಡಿಯೊದಲ್ಲಿ ಕಾಣಬಹುದು. ಬಳಿಕ ಆ ಮಹಿಳೆಯ ಪತಿ ಸ್ಥಳಕ್ಕೆ ಆಗಮಿಸಿ ಗುಪ್ತಾ ಅವರನ್ನು ಥಳಿಸಿದ್ದಾರೆ ಎಂದು ಕೆಲವು ಮೂಲಗಳು ತಿಳಿಸಿವೆ.

ಗೌತಮ್ ಬುದ್ಧ ನಗರ್‌ನ ಪೊಲೀಸ್ ಕಮಿಷನರೇಟ್ ಈ ವಿವಾದದ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿವರ ನೀಡಿದೆ. ಶ್ವಾನವನ್ನು ಲಿಫ್ಟ್‌ನಲ್ಲಿ ಕರೆದೊಯ್ಯುವ ವಿಚಾರದಲ್ಲಿ ವಿವಾದ ಆರಂಭವಾಯಿತು. ವಾಗ್ವಾದ ಆರಂಭವಾಗಿ ಎರಡೂ ಕಡೆಯವರಿಂದ ಪರಸ್ಪರ ಹಲ್ಲೆ ನಡೆದಿದೆ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ.

“ಜಗಳ ನಡೆದ ಎರಡೂ ಕಡೆಯವರ ಜತೆ ಚರ್ಚೆ ನಡೆಯುತ್ತಿದೆ. ನೋಯ್ಡಾ ಮಾಯಾ ಪೊಲೀಸ್ ಠಾಣೆಯ ಉಸ್ತುವಾರಿ ಮಾತುಕತೆ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಎರಡೂ ಕಡೆಯವರ ಮಧ್ಯೆ ಜಗಳ ನಡೆದಿದೆ, ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಲಾಗುತ್ತಿದೆ. ತನಿಖೆಯ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಪೋಸ್ಟ್‌ ತಿಳಿಸಿದೆ.

ಘಟನೆಯ ಹಿನ್ನಲೆ

ಪೊಲೀಸರ ಪ್ರಕಾರ, ಗುಪ್ತಾ ತಮ್ಮ ಫ್ಲ್ಯಾಟ್‌ಗೆ ಹೋಗಲು ಲಿಫ್ಟ್‌ ಒಳಗೆ ಪ್ರವೇಶಿಸಿದಾಗ, ಮಹಿಳೆಯೊಬ್ಬರು ಸಾಕುನಾಯಿಯೊಂದಿಗೆ ನಿಂತಿದ್ದರು. ಬಾಯಿಗೆ ಕವಚ ಹಾಕದಿರುವುದನ್ನು ಗಮನಿಸಿದ ಗುಪ್ತಾ ಶ್ವಾನವನ್ನು ಲಿಫ್ಟ್‌ನಲ್ಲಿ ಕರೆದೊಯ್ಯದಂತೆ ಮಹಿಳೆ ಬಳಿ ಹೇಳಿದರು. ಇದು ಇಬ್ಬರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಾಯಿ ಕಡಿತ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಿಯಮಗಳನ್ನು ಜಾರಿಗೆ ತರಲಾಗಿದೆ. ಆದಾಗ್ಯೂ ಹಲವರು ಈ ನಿಯಮಗಳನ್ನು ಉಲ್ಲಂಘಿಸುತ್ತಲೇ ಇದ್ದಾರೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ ಎಂದು ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ.

ಕಾನೂನು ಏನು ಹೇಳುತ್ತದೆ?

ಸಾಕು ಪ್ರಾಣಿ ನಿಯಮದ ಪ್ರಕಾರ ನಾಯಿಯನ್ನು ನೋಂದಣಿ ಮಾಡಿಸದಿದ್ದರೆ ಅದರ ಮಾಲೀಕರು 500 ರೂ. ದಂಡ ಪಾವತಿಸಬೇಕಾಗುತ್ತದೆ ಎಂದು ನೋಯ್ಡಾ ಪ್ರಾಧಿಕಾರದ ಒಸಿಡಿ(OSD) ಇಂದು ಪ್ರಕಾಶ್ ಸಿಂಗ್ ಹೇಳುತ್ತಾರೆ. ʼʼಕಳೆದ ವರ್ಷದ ಡಿಸೆಂಬರ್‌ನಲ್ಲಿ ನಿಯಮ ಜಾರಿಗೆ ತರಲಾಗಿದ್ದು, ಆ ಪ್ರಕಾರ ಎಲ್ಲರೂ ತಮ್ಮ ಸಾಕುಪ್ರಾಣಿಗಳನ್ನು ನೋಂದಾಯಿಸಬೇಕು. ಮಾರ್ಚ್ 30, 2023ರ ನಂತರ ಸಾಕುಪ್ರಾಣಿಗಳನ್ನು ನೋಂದಾಯಿಸದಿದ್ದರೆ 500 ರೂ.ಗಳ ದಂಡ ವಿಧಿಸಲಾಗುತ್ತದೆʼʼ ಎಂದು ತಿಳಿಸಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಶ್ವಾನದ ನೋಂದಣಿಯಾಗಿದೆಯೇ ಎನ್ನುವುದನ್ನು ಪರಿಶೀಲಿಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ