ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ!

Twitter
Facebook
LinkedIn
WhatsApp
ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ!

ತುಮಕೂರು: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ (Tiger Claw Pendent) ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ, ರಾಷ್ಟ್ರಪಕ್ಷಿ ನವಿಲು (Peacock) ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಬಂಧಿಸಿದ ಘಟನೆ ತುಮಕೂರಿನ (Tumakuru) ಮಾರನಾಯಕನಪಾಳ್ಯದಲ್ಲಿ (Maranayakanapalya) ನಡೆದಿದೆ.

ಒಡಿಶಾ (Odisha) ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. ಬಂಧಿತರು ಮಾರನಾಯಕನಪಾಳ್ಯದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಹಲವು ದಿನಗಳಿಂದ ಆರೋಪಿಗಳು ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ 1.5 ಕೆ.ಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು ಮತ್ತು ಮಾಂಸ ಬೇಯಿಸಿದ್ದ ಪಾತ್ರೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾಂಸವನ್ನು ಅಧಿಕಾರಿಗಳು ಎಫ್‌ಎಸ್‌ಎಲ್‌ಗೆ (FSL) ಕಳುಹಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. 

ಅರ್ಹರಿಗೆ ಪ್ರಶಸ್ತಿ ನೀಡಿ – ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ಸಿಎಂ ಸೂಚನೆ

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ (Rajyotsava Award) ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಕಡ್ಡಾಯವಾಗಿ ಸಾಮಾಜಿಕ ನ್ಯಾಯ ಪಾಲಿಸಬೇಕು, ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರೆಯಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸೂಚಿಸಿದ್ದಾರೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ (Kannada Rajyotsava Award Selection Committee) ಉನ್ನತ ಮಟ್ಟ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನ ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಅಭಿಪ್ರಾಯಪಟ್ಟರು.

ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದ್ದು, ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಅರ್ಜಿ ಸಲ್ಲಿಸುವವರು ಹೆಚ್ಚಿದ್ದ ಕಾರಣ, ಅದಕ್ಕೆ ಕಡಿವಾಣ ಹಾಕಲು ಏಕೀಕರಣ ಆಗಿ ಎಷ್ಟು ವರ್ಷಗಳಾಯಿತೋ, ಅಷ್ಟು ಪ್ರಶಸ್ತಿಗಳನ್ನು ನೀಡಲು ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಡಾ.ಜಿ ಪರಮೇಶ್ವರ್, ಡಾ.ಹೆಚ್.ಸಿ ಮಹದೇವಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಆಯ್ಕೆ ಸಮಿತಿ ಸದಸ್ಯರಾದ ಪ್ರೊ. ಜಾಣಗೆರೆ ವೆಂಕಟರಾಮಯ್ಯ, ಡಾ.ಎಚ್‌.ಎಲ್‌ ಪುಷ್ಪ, ಡಾ.ವೀರಣ್ಣ ದಂಡೆ, ಡಾ.ಮೂಡ್ನಾಕೂಡು ಚಿನ್ನಸ್ವಾಮಿ, ಅಲ್ಲಮಪ್ರಭು ಬೆಟ್ಟದೂರ, ಕಾ.ತ ಚಿಕ್ಕಣ್ಣ, ಪಿಂಡಿಪಾಪನಹಳ್ಳಿ ವೆಂಕಟಪ್ಪ, ಟಾಕಪ್ಪ ಕಣ್ಣೂರು, ಪಿಚ್ಚಳ್ಳಿ ಶ್ರೀನಿವಾಸ್‌, ಡಾ.ವಿಠಲ್‌ ಐ.ಬೆಣಗಿ-ಕೃಷಿ, ಡಾ. ಸಣ್ಣರಾಮು, ವೆಂಕಟರಾಮಯ್ಯ, ಡಾ.ಎಂ.ಎಸ್‌ ಮೂರ್ತಿ, ಡಾ.ಗೀತಾ ಶಿವಮೊಗ್ಗ, ಡಾ.ಜಯದೇವಿ ಜಂಗಮಶೆಟ್ಟಿ, ಐರೋಡಿ ಗೋವಿಂದಪ್ಪ, ಸಾಧುಕೋಕಿಲ, ಸುಕನ್ಯಾ ಪ್ರಭಾಕರ್‌, ಫ‌ಯಾಜ್‌ ಖಾನ್‌, ಹೃಷಿಕೇಶ್‌ ಬಹದ್ದೂರ್‌ ದೇಸಾಯಿ, ನರಸಿಂಹಲು ವಡವಾಟಿ, ಡಿ.ಎನ್‌ ನರಸಿಂಹರಾಜು, ಡಾ.ಪುರುಷೋತ್ತಮ ಬಿಳಿಮಲೆ, ಚನ್ನಬಸವಣ್ಣ, ಶೈಲೇಶ್‌ ಚಂದ್ರಗುಪ್ತ , ಜೆ.ಲೋಕೇಶ್‌ ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ