ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜರೀನ್ ಖಾನ್‌ಗೆ ಅರೆಸ್ಟ್ ವಾರೆಂಟ್!
ವಂಚನೆ ಪ್ರಕರಣ ಸಂಬಂಧವಾಗಿ ಜರೀನ್ ಖಾನ್‌ಗೆ ಕೋಲ್ಕತಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. 2018ರಲ್ಲಿ ಕೋಲ್ಕತಾದಲ್ಲಿ ಆಯೋಜಿಸಿದ್ದ ದುರ್ಗಾ ಪೂಜೆ ಕಾರ್ಯಕ್ರಮದಲ್ಲಿ ಜರೀನ್‌ಗೆ ಆಹ್ವಾನ ನೀಡಲಾಗಿತ್ತು. ಈ ಸಮಾರಂಭಕ್ಕಾಗಿ ಸಂಭಾವನೆ ಕೂಡ ನೀಡಲಾಗಿತ್ತು. ಆದರೆ ಅಂದು ನಟಿ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಈ ವಿಚಾರವಾಗಿ ನಟಿಯ ವಿರುದ್ದ ಆಯೋಜಕರು ಎಫ್‌ಐಆರ್ ದಾಖಲಿಸಿದ್ದರು. 2018ರಿಂದ ದಾಖಲಾದ ಪ್ರಕರಣದ ಕುರಿತು ನಟಿ ಕೋರ್ಟ್ ವಿಚಾರಣೆಗೆ ಹಾಜರಾಗಲಿಲ್ಲ.
ಇದೀಗ ಅರೆಸ್ಟ್ ವಾರೆಂಟ್ ಕುರಿತು ನಟಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಇದರಲ್ಲಿ ಸತ್ಯವಿಲ್ಲ. ಈ ಬಗ್ಗೆ ನನ್ನ ವಕೀಲರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ. ವೀರ್, ಹೇಟ್ ಸ್ಟೋರಿ 3, ಹೌಸ್‌ಫುಲ್ 2 ಸೇರಿದಂತೆ ಬಾಲಿವುಡ್‌ನ ಹಲವು ಸಿನಿಮಾಗಳಲ್ಲಿ ಜರೀನ್ ಖಾನ್ ನಟಿಸಿದ್ದಾರೆ.
ಸಿಂಪಲ್ ಸ್ಟಾರ್ ಸಿನಿಮಾ ಹೊಗಳಿದ ನಟಿ ಸಮಂತಾ:
ಆಂಧ್ರಪ್ರದೇಶ: ಇತ್ತೀಚೆಗಷ್ಟೇ ಟಾಲಿವುಡ್ ಅಂಗಳದಲ್ಲಿ ಬಿಡುಗಡೆಗೊಂಡ ಪ್ಯಾನ್ ಇಂಡಿಯಾ ‘ಖುಷಿ’ ಚಿತ್ರದ ಮೂಲಕ ಅಭಿಮಾನಿಗಳಿಗೆ ಖುಷಿ ನೀಡಿದ ಸ್ಟಾರ್ ನಟಿ ಸಮಂತಾ ರುತ್ ಪ್ರಭು, ಇದೀಗ ಸ್ಯಾಂಡಲ್ವುಡ್ನ ಸಿಂಪಲ್ ಸ್ಟಾರ್ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಎ ಸಿನಿಮಾ ವೀಕ್ಷಿಸಿ, ಚಿತ್ರತಂಡಕ್ಕೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್, ನಟ ರಕ್ಷಿತ್ ಶೆಟ್ಟಿ ಮತ್ತು ನಟಿ ರುಕ್ಮಿಣಿ ವಸಂತ್ ಮುಖ್ಯಭೂಮಿಕೆಯಲ್ಲಿ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಎ ಕನ್ನಡ ಸಿನಿಪ್ರೇಕ್ಷಕರಿಂದ ವ್ಯಾಪಕ ಪ್ರಶಂಸೆಗೆ ಪಾತ್ರವಾಯಿತು. ಪಾಸಿಟಿವ್ ಪ್ರತಿಕ್ರಿಯೆಯೊಂದಿಗೆ ಇಂದಿಗೂ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸದ್ಯ ಚಿತ್ರವನ್ನು ವೀಕ್ಷಣೆ ಮಾಡಿದ ‘ಖುಷಿ’ ನಟಿ, ಸಿನಿಮಾ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
“ಖಂಡಿತವಾಗಿ ಇದೊಂದು ಮಾಸ್ಟರ್ಪೀಸ್, ಎಲ್ಲರೂ ನೋಡಲೇಬೇಕಾದ ಸಿನಿಮಾ. ಈ ಸುಂದರ ಚಿತ್ರತಂಡಕ್ಕೆ ನನ್ನ ದೊಡ್ಡ ಅಭಿನಂದನೆಗಳು” ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದರೊಟ್ಟಿಗೆ ಪ್ರತ್ಯೇಕವಾಗಿ ನಟಿ ರುಕ್ಮಿಣಿ ವಸಂತ್ ಅವರ ಫೋಟೋ ಹಾಕಿ, “ರುಕ್ಮಿಣಿ ಯೂ ಬ್ಯೂಟಿ, ಎಂಥ ಅದ್ಭುತ ಪ್ರದರ್ಶನ ನಿಮ್ಮದು. ಪ್ರೀತಿಯ ಅಪ್ಪುಗೆ ನಿಮಗೆ” ಎಂದು ತಮ್ಮ ಮನದಾಳದ ಮಾತನ್ನು ಸಾಮಾಜಿಕ ಜಾಲತಾಣದ ಮುಖೇನ ಹಂಚಿಕೊಂಡಿದ್ದಾರೆ.