ಬಿಜೆಪಿಯಿಂದ ರಾಷ್ಟ್ರೀಯ ನಾಯಕರ ಜೊತೆ ಸ್ಟಾರ್ ಪ್ರಚಾರಕರು ಆಗಮನ ; ಮಾಜಿ ಸಿಎಂ ಸುಳಿವು..!
ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಸಿದ್ಧವಾಗಿರುವ ಬಿಜೆಪಿಯಿಂದ ಒಂದು ಕ್ಷೇತ್ರ ಬಿಟ್ಟು ಉಳಿದೆಲ್ಲ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅವರೆಲ್ಲ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯೂಸಿಯಾಗಿದ್ದು, ಪ್ರಚಾರಕ್ಕಾಗಿ ಸ್ಟಾರ್ ಪ್ರಚಾರಕರು ಆಗಮಿಸುತ್ತಾರಾ? ಎಂಬುದರ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರ ಜೊತೆ ಮಾತನಾಡಿದ ಅವರು, ಈ ಹಿಂದೆ ವಿಧಾನಸಭಾ ಚುನಾವಣೆ ವೇಳೆ ತಮ್ಮ ಶಿಗ್ಗಾವಿ ಕ್ಷೇತ್ರದ ಪ್ರಚಾರದಲ್ಲಿ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಅವರನ್ನು ಕರೆ ತಂದಿದ್ದರು. ಕ್ಷೇತ್ರದ ತುಂಬೆಲ್ಲ ಓಡಾಡಿ ನಟ ಸುದೀಪ್ ಪ್ರಚಾರ ಮಾಡಿದ್ದರು. ಈ ಭಾಗದ ಆರು ವಿಧಾನಸಭಾ ಕ್ಷೇತ್ರದಲ್ಲಿ ಬೊಮ್ಮಾಯಿ ಅವರ ಕ್ಷೇತ್ರದಲ್ಲಿ ಮಾತ್ರ ಕಮಲ ಅರಳಿತು.
ರಾಷ್ಟ್ರೀಯ ನಾಯಕರ ಜೊತೆ ಸ್ಟಾರ್ ಪ್ರಚಾರಕರು ಇದೀಗ ಹಾವೇರಿಯಿಂದಲೇ ಬಸವರಾಜ ಬೊಮ್ಮಾಯಿ ಅವರು ಲೋಕಸಭೆಗೆ ಸ್ಪರ್ಧಿಸಿದ್ದಾರೆ. ಇದೀಗ ಸ್ಟಾರ್ ಪ್ರಚಾರಕರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, ಮುಂದಿನ ದಿನಗಳಲ್ಲಿ ಸ್ಟಾರ್ ಪ್ರಚಾರಕರು ವಿವಿಧ ಕ್ಷೇತ್ರಗಳಲ್ಲಿ ಬರುತ್ತಾರೆ. ಯಾರು ಎಲ್ಲಿ ಬರುತ್ತಾರೆ ಎಂಬ ಬಗ್ಗೆ ಪಕ್ಷದ ಹಿರಿಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಳಿಕವೆ ಬಹಿರಂಗಪಡಿಸಲಾಗುವುದು ಎಂದು ತಿಳಿಸಿದರು.
ಹಾವೇರಿ ಕ್ಷೇತ್ರಕ್ಕೆ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರಚಾರಕ್ಕೆ ಬರುತ್ತಾರೆ. ರಾಷ್ಟ್ರೀಯ ನಾಯಕರು ಎಲ್ಲ ಕಡೆ ಪ್ರಚಾರಕ್ಕೆ ಬರಲಿದ್ದಾರೆ. ರಾಷ್ಟ್ರೀಯ ನಾಯಕರ ಜೊತೆ ಸೆಲೆಬ್ರಿಟಿಗಳು ಕೂಡಾ ಪ್ರಚಾರಕ್ಕೆ ಬರುತ್ತಾರೆ. ಎರಡು ಮೂರು ದಿನಗಳಲ್ಲಿ ರಾಷ್ಟ್ರೀಯ ನಾಯಕರ ಟೂರ್ ಫಿಕ್ಸ್ ಆಗಲಿದೆ ಎಂದು ಮಾಹಿತಿ ನೀಡಿದರು.
ಅಭಿವೃದ್ಧಿ ಮೂಲಕ ಉತ್ತರ ಕೊಡುತ್ತೇವೆ ಭಾರತೀಯ ಜನತಾ ಪಕ್ಷದಲ್ಲಿ ಯಾವುದೇ ಬಂಡಾಯ ಇಲ್ಲ. ಇದ್ದ ಭಿನ್ನಾಭಿಪ್ರಾಯವನ್ನು ಶಮನಗೊಳಿಸುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೇಂದ್ರದಿಂದ ರಾಜ್ಯಕ್ಕೆ ಆದ ಅನುದಾನ ವಿಷಯದಲ್ಲಿ ಎಷ್ಟು ಅನ್ಯಾಯ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಾ ಸುಪ್ರೀಂ ಕೋರ್ಟ್ ಹೋರುವುದು ಗೊತ್ತಿದೆ. ಕೇಂದ್ರ ಸರ್ಕಾರ ಪ್ರಕೃತಿ ವಿಕೋಪ ನಿರ್ವಾಹಣಾ ಅಡಿ (ಎನ್ ಡಿಆರ್ ಎಫ್) ಅನ್ವಯ ಎಷ್ಟು ಕೊಡಲಾಗಿದೆ ಎಂಬುದು ಗೊತ್ತಿದೆ. ಈ ಕುರಿತು ಬಹಿರಂಗ ಚರ್ಚೆಗೆ ಸಹ ಸಿದ್ಧ ಎಂದು ಸವಾಲು ಹಾಕಿದರು.
ಭ್ರಷ್ಟಾಚಾರ ಆರೋಪ ಹೊತ್ತವರನ್ನು ವಾಸಿಂಗ್ ಪೌಡರ್ ಹಾಕಿ ತೊಳದರೆ ಭ್ರಷ್ಟಾಚಾರ ನಿರ್ಮಲನೆ ಆಗುತ್ತದೆಯೇ ಅಥವಾ ಭಾರತೀಯ ಜನತಾ ಪಕ್ಷ ಸ್ವಚ್ಛ ಆಗುತ್ತದೆಯೇ ಎಂಬ ಕಾಂಗ್ರೆಸ್ ನಾಯಕರ ಪ್ರಶ್ನೆಗೆ ಏನೆಲ್ಲ ಆಗಿದೆ ಎಂದು ಗೊತ್ತಿದೆ ಎಂದು ತಿರುಗೇಟು ನೀಡಿದರು.