ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರುಣ್‌ ಕುಮಾರ್‌ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಕ್ತ ಅವಕಾಶ - ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ

Twitter
Facebook
LinkedIn
WhatsApp
ಅರುಣ್‌ ಕುಮಾರ್‌ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಕ್ತ ಅವಕಾಶ - ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ

ಮಂಗಳೂರು: ಅರುಣ್‌ ಕುಮಾರ್‌ ಪುತ್ತಿಲ ಅವರು ಬಿಜೆಪಿಗೆ ಸೇರ್ಪಡೆಯಾದರೆ ಅವರಿಗೆ ಎಲ್ಲ ಗೌರವಗಳೊಂದಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅರುಣ್‌ ಪುತ್ತಿಲ ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘಟನ ಕಾರ್ಯದರ್ಶಿಗಳು ಮತ್ತು ಹಿರಿಯರು ಹಲವು ಬಾರಿ ಮಾತುಕತೆ ನಡೆಸಿದ್ದಾರೆ. ಅವರೆಲ್ಲರೂ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಕ್ತವಾದ ಆಹ್ವಾನ ನೀಡಿದ್ದಾರೆ ಎಂಬುದನ್ನು ಸ್ವತಃ ರಾಜ್ಯಾಧ್ಯಕ್ಷರೇ ಸ್ಪಷ್ಟಪಡಿಸಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಕಾಲಹರಣ ಮಾಡಿಲ್ಲ. ಕೇವಲ ಪುತ್ತಿಲ ಮಾತ್ರವಲ್ಲ ಪಕ್ಷದ ತಣ್ತೀ, ಸಿದ್ಧಾಂತ ಒಪ್ಪಿ ಬರುವ ಎಲ್ಲರಿಗೂ ಬಿಜೆಪಿ ಸೇರ್ಪಡೆಗೆ ಮುಕ್ತ ಅವಕಾಶ ಇದೆ. ಬಿಜೆಪಿ ರಾಷ್ಟ್ರೀಯ ಹಾಗೂ ರಾಜ್ಯ ಅಧ್ಯಕ್ಷರ ಕರೆ ಮೇರೆಗೆ ಬಿಜೆಪಿ ಸೇರ್ಪಡೆಗೊಳ್ಳುವವರಿಗೆ ಮುಕ್ತ ಆಹ್ವಾನ ನೀಡಲಾಗಿದೆ ಎಂದರು.

ಅರುಣ್‌ ಪುತ್ತಿಲ ಈ ಹಿಂದೆ ಬಿಜೆಪಿಯಲ್ಲಿದ್ದರು. ಹಿಂದೂ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ ಬಳಿಕ ಸಹಜವಾಗಿಯೇ ಪಕ್ಷದಿಂದ ದೂರವಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ ವೇಳೆ ಅರುಣ್‌ ಪುತ್ತಿಲ ಅವರು ಪಕ್ಷದಲ್ಲಿ ಜಿಲ್ಲೆ ಅಥವಾ ಮಂಡಲದ ಅಧ್ಯಕ್ಷ ಸ್ಥಾನದ ಅಪೇಕ್ಷೆ ಇರಿಸಿದ್ದಾರೆ. ಆದರೆ ಬಿಜೆಪಿ ಸೇರ್ಪಡೆ ವೇಳೆ ಯಾವುದೇ ಷರತ್ತು, ಒತ್ತಡ ಇರಿಸುವ ಕ್ರಮವಿಲ್ಲ. ಪ್ರತಿಯೊಬ್ಬರೂ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸೇರ್ಪಡೆಯಾಗಬೇಕು. ಆ ಬಳಿಕ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಕುರಿತು ನಿರ್ಣಯ ಮಾಡಲಾಗುತ್ತದೆ. ಹಾಗೆಯೇ ಅರುಣ್‌ ಪುತ್ತಿಲರಿಗೂ ಬಿಜೆಪಿ ಸೇರ್ಪಡೆ ಅನಂತರ ಅವರಿಗೆ ಸಲ್ಲಬೇಕಾದ ಎಲ್ಲ ಗೌರವಗಳೊಂದಿಗೆ ಸ್ಥಾನಮಾನ ನೀಡಲಾಗುವುದು. ಈಗಲೂ ಪುತ್ತಿಲ ಜತೆ ಬಿಜೆಪಿ ಸಂಪರ್ಕದಲ್ಲಿದ್ದು, ಶೀಘ್ರವೇ ಅವರು ಬಿಜೆಪಿ ಸೇರುವ ವಿಶ್ವಾಸ ಇದೆ ಎಂದರು.

ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಸಾಜ ರಾಧಾಕೃಷ್ಣ ಆಳ್ವ, ವಿದ್ಯಾ ಗೌರಿ, ಪುರುಷೋತ್ತಮ, ಗಿರೀಶ್‌, ಪ್ರಭಾರಿಗಳಾದ ಪ್ರೇಮಾನಂದ ಶೆಟ್ಟಿ, ಸುನಿಲ್‌, ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್‌.ಸಿ. ನಾರಾಯಣ್‌, ಮನೋಹರ ಶೆಟ್ಟಿ, ವಕ್ತಾರ ವಸಂತ ಜೆ. ಪೂಜಾರಿ ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ