ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೈಕೋರ್ಟ್ ಅರ್ಜಿ ವಜಾ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದಾರೆ ಅರವಿಂದ್ ಕೇಜ್ರಿವಾಲ್.!

Twitter
Facebook
LinkedIn
WhatsApp
ಹೈಕೋರ್ಟ್ ಅರ್ಜಿ ವಜಾ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದಾರೆ ಅರವಿಂದ್ ಕೇಜ್ರಿವಾಲ್.!

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಈಗ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ.

ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರು ತಮ್ಮ ಬಂಧನ ಮತ್ತು ಇಡಿ ಕಸ್ಟಡಿಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಇಡಿ ಸಂಗ್ರಹಿಸಿದ ಸಾಕ್ಷ್ಯಗಳು ಅರವಿಂದ್ ಕೇಜ್ರಿವಾಲ್ ಇತರರೊಂದಿಗೆ ಪಿತೂರಿ ನಡೆಸಿರುವುದನ್ನು ಬಹಿರಂಗಪಡಿಸುತ್ತದೆ. ಗೋವಾ ಚುನಾವಣೆಯಲ್ಲಿ ಹವಾಲಾ ಹಣ ಬಳಕೆಯಾಗಿದೆ ಎಂಬುದಕ್ಕೆ ಜಾರಿ ನಿರ್ದೇಶನಾಲಯ ಸಾಕ್ಷ್ಯಾಧಾರಗಳನ್ನು ನೀಡಿದೆ. 

ಹೀಗಾಗಿ ಕೇಜ್ರಿವಾಲ್ ಬಂಧನ ಕಾನೂನಿಗೆ ವಿರುದ್ಧವಾಗಿಲ್ಲ, ರಿಮಾಂಡ್ ಅನ್ನು ಅಕ್ರಮ ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದೆ.

ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ನಿರಪರಾಧಿ ಎಂದು ಹೇಳಿದ್ದು, ತನ್ನ ಬಂಧನದ ಸಮಯವು ಚುನಾವಣೆಗೆ ಮುನ್ನ ತಮ್ಮ ಪಕ್ಷವನ್ನು ‘ಹಾಳು ಮಾಡುವ’ ಪ್ರಯತ್ನ ಎಂದು ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್‌ಗೆ ತಿಳಿಸಿದ್ದರು.

ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಸೋಮವಾರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ