ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Asia Cup 2022: ಹಾರ್ದಿಕ್ ಪಾಂಡ್ಯ ಭರ್ಜರಿ ಸಿಕ್ಸ್, ಪಾಕ್ ವಿರುದ್ಧ ಸೇಡು ತೀರಿಸಿಕೊಂಡ ಟೀಮ್ ಇಂಡಿಯಾ

Twitter
Facebook
LinkedIn
WhatsApp
Asia Cup 2022: ಹಾರ್ದಿಕ್ ಪಾಂಡ್ಯ ಭರ್ಜರಿ ಸಿಕ್ಸ್, ಪಾಕ್ ವಿರುದ್ಧ ಸೇಡು ತೀರಿಸಿಕೊಂಡ ಟೀಮ್ ಇಂಡಿಯಾ

ದುಬೈ: ಏಷ್ಯಾಕಪ್ 2022 ಟೂರ್ನಿಯ ಇಂದಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ತಂಡ 5 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ಕಳೆದ ವರ್ಷದ ಟಿ20 ವಿಶ್ವಕಪ್​ನಲ್ಲಿನ ಸೋಲಿನ ಸೇಡನ್ನು ಭಾರತ ತಂಡ ತೀರಿಸಿಕೊಂಡಿದೆ.

ಪಾಕಿಸ್ತಾನ ನೀಡಿದ 148 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ ವಿರಾಟ್ ಕೊಹ್ಲಿ (35) ಸಮಯೋಚಿತ ಬ್ಯಾಟಿಂಗ್ ಹಾಗೂ ಹಾರ್ದಿಕ್ ಪಾಂಡ್ಯಾ (ಆಜೇಯ 33) ಆಲ್ರೌಂಡ್ ಪ್ರದರ್ಶನದ ನೆರವಿನಿಂದ 19.5 ಓವರ್ ನಲ್ಲಿ  148 ರನ್ ಗಳಿಸಿ 5 ವಿಕೆಟ್ ಗಳ ರೋಚಕ ಜಯ ಸಾಧಿಸಿತು.

ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಗಿತ್ತು. ಶೂನ್ಯಕ್ಕೇ ಆರಂಭಿಕ ಆಟಗಾರ ಕೆಎಲ್ ರಾಹುಲ್ ಔಟಾಗಿದ್ದು ತಂಡಕ್ಕೆ ದುಬಾರಿಯಾಗಿ ಪರಿಣಮಿಸಿತು. ನಿಧಾನಗತಿಯಲ್ಲಿ ಬ್ಯಾಟಿಂಗ್ ಆರಂಭಿಸಿದ್ದ ನಾಯಕ ರೋಹಿತ್ ಶರ್ಮಾ, ಕೊಹ್ಲಿ ಜೊತೆಗೂಡಿ ಅರ್ಧಶತಕದ ಜೊತೆಯಾಟವಾಡಿದರು. ಈ ಜೊತೆಯಾಟದಲ್ಲಿ ಕೊಹ್ಲಿಯದ್ದೇ ಸಿಂಹಪಾಲಿತ್ತು. ಈ ಹಂತದಲ್ಲಿ 12 ರನ್ ಗಳಿಸಿದ್ದ ರೋಹಿತ್ ಶರ್ಮಾ ನವಾಜ್ ಬೌಲಿಂಗ್ ನಲ್ಲಿ ಔಟಾದರು. ರೋಹಿತ್ ಬೆನ್ನಲ್ಲೇ 35 ರನ್ ಗಳಿಸಿದ್ದ ಕೊಹ್ಲಿ ಕೂಡ ಇದೇ ನವಾಜ್ ಬೌಲಿಂಗ್ ನಲ್ಲಿ ಔಟಾಗಿದ್ದು ತಂಡಕ್ಕೆ ದುಬಾರಿಯಾಗಿ ಪರಿಣಮಿಸಿತು.

ಕೊಹ್ಲಿ ಬಳಿಕ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ (18) ಮತ್ತು ರವೀಂದ್ರ ಜಡೇಜಾ (35) ಜೋಡಿ 39 ರನ್ ಗಳ ಅಮೂಲ್ಯ ಜೊತೆಯಾಟವಾಡಿತು. ಈ ಹಂತದಲ್ಲಿ ನಸೀಮ್ ಶಾ ಬೌಲಿಂಗ್ ನಲ್ಲಿ ಸೂರ್ಯಕುಮಾರ್ ಯಾದವ್ ಔಟಾದರು. ಈ ಹಂತದಲ್ಲಿ ಜಡೇಜಾ ಜೊತೆಗೂಡಿದ ಹಾರ್ದಿಕ್ ಪಾಂಡ್ಯ ಗಟ್ಟಿಯಾಗಿ ನೆಲೆನಿಂತು ಮತ್ತೆ ಗೆಲುವು ಭಾರತದತ್ತ ವಾಲುವಂತೆ ಮಾಡಿದರು. ನಿಧಾನವಾಗಿಯೇ ಇನ್ನಿಂಗ್ಸ್ ಕಟ್ಟಿದ ಈ ಜೋಡಿ 40 ರನ್ ಗಳ ಅಮೋಘ ಜೊತೆಯಾಟ ನೀಡಿತು. ಗೆಲ್ಲಲು ಒಂದು ಓವರ್ ನಲ್ಲಿ ಕೇವಲ 7 ರನ್ ಗಳ ಅಗತ್ಯವಿದ್ದಾಗ 35 ರನ್ ಗಳಿಸಿದ್ದ ಜಡೇಜಾರನ್ನು ನವಾಜ್ ಕ್ಲೀನ್ ಬೋಲ್ಡ್ ಮಾಡಿದರು. ಆಗ ಮತ್ತೆ ಭಾರತ ಪಾಳಯದಲ್ಲಿ ಸೋಲಿನ ಭೀತಿ ಕವಿಯಿತು.

ಅದರಂತೆ ಕೊನೆಯ ಓವರ್​ನಲ್ಲಿ ಭಾರತ ತಂಡಕ್ಕೆ ಕೇವಲ 7 ರನ್​ಗಳ ಅವಶ್ಯಕತೆಯಿತ್ತು. ಆದರೆ ನವಾಜ್ ಎಸೆದ ಕೊನೆಯ ಓವರ್​ನ ಮೊದಲ ಎಸೆತದಲ್ಲೇ ರವೀಂದ್ರ ಜಡೇಜಾ (35) ಕ್ಲೀನ್ ಬೌಲ್ಡ್ ಆದರು. 2ನೇ ಎಸೆತದಲ್ಲಿ ದಿನೇಶ್ ಕಾರ್ತಿಕ್ ಸಿಂಗಲ್ ತೆಗೆದರು. 3ನೇ ಎಸೆತದಲ್ಲಿ ಯಾವುದೇ ರನ್ ಇಲ್ಲ. 4ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಹಾರ್ದಿಕ್ ಪಾಂಡ್ಯ (33) ಟೀಮ್ ಇಂಡಿಯಾಗೆ 5 ವಿಕೆಟ್​ಗಳ ಭರ್ಜರಿ ಜಯ ತಂದುಕೊಟ್ಟರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ