ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!

Twitter
Facebook
LinkedIn
WhatsApp
Kangana Ranaut

ಚಂಡೀಗಢ: ರೈತರ ಪ್ರತಿಭಟನೆಗಳ ಕುರಿತು ನಟಿ ಹಾಗೂ ಸಂಸದೆ ಕಂಗನಾ ರಣಾವತ್ (Kangana Ranaut) ಅವರನ್ನು ಟೀಕಿಸುವ ಭರದಲ್ಲಿ ಪಂಜಾಬ್‌ನ ಮಾಜಿ ಸಂಸದ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ನಟಿ-ರಾಜಕಾರಣಿ ಕಂಗನಾ ರೈತರ ಪ್ರತಿಭಟನೆಯ (Farmer Protest) ಸಂದರ್ಭದಲ್ಲಿ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿದ್ದರು. ಅವರ ಹೇಳಿಕೆ ವಿರೋಧಿಸಲು ಮುಂದಾಗಿ ಪಂಜಾಬ್ ಮಾಜಿ ಸಂಸದ ಸಿಮ್ರಂಜಿತ್ ಸಿಂಗ್ ಮಾನ್ (Simranjit Singh Mann) ವಿವಾದಕ್ಕೆ ಸಿಲುಕಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅತ್ಯಾಚಾರ ಹೇಗೆ ನಡೆಯುತ್ತವೆ ಎಂದು ಕಂಗನಾರನ್ನು ಕೇಳಿ. ಆಕೆಗೆ ಅದರ ಅನುಭವವಿದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್, ರೈತರ ಚಳುವಳಿ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರೈತ ಹೋರಾಟ ನಿಗ್ರಹಿಸುವ ಸಂಬಂಧ ಕಠಿಣ ನಿಲುವುಗಳನ್ನು ಕೈಗೊಂಡಿತು. ನಾಯಕರು ಬಲವಾಗಿರದಿದ್ದರೆ ಅಥವಾ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾದೇಶದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮುಂದಿನ ದಿನಗಳಲ್ಲಿ ಈ ರೀತಿಯ ಹೇಳಿಕೆಗಳನ್ನು ನೀಡದಂತೆ ಕಂಗನಾ ಅವರಿಗೆ ಬಿಜೆಪಿ ಎಚ್ಚರಿಕೆ ನೀಡಿತ್ತು.

ಪಂಜಾಬ್ ನಾಯಕನಿಗೆ ಕಂಗನಾ ರಣಾವತ್ ಖಡಕ್ ತಿರುಗೇಟು:

ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ, ಆಕ್ರೋಶ ವ್ಯಕ್ತಪಡಿಸಿದ ಕಂಗನಾ (Kangana Ranaut) “ಈ ದೇಶವು ಅತ್ಯಾಚಾರವನ್ನು ಕ್ಷುಲ್ಲಕಗೊಳಿಸುವುದನ್ನು ಎಂದಿಗೂ ನಿಲ್ಲಿಸುವುದಿಲ್ಲ ಎಂದು ತೋರುತ್ತದೆ, ಇಂದು ಈ ಹಿರಿಯ ರಾಜಕಾರಣಿ ಅತ್ಯಾಚಾರವನ್ನು ಬೈಸಿಕಲ್ ಸವಾರಿಗೆ ಹೋಲಿಸಿದ್ದಾರೆ.

“ಅತ್ಯಾಚಾರ ಮತ್ತು ಮೋಜಿಗಾಗಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಈ ಪಿತೃಪ್ರಭುತ್ವದ ರಾಷ್ಟ್ರದ ಮನಸ್ಸಿನಲ್ಲಿ ಎಷ್ಟು ಆಳವಾಗಿ ಬೇರೂರಿದೆಯೆಂದರೆ, ಮಹಿಳೆಯು ಉನ್ನತ ಮಟ್ಟದ ಚಲನಚಿತ್ರ ನಿರ್ಮಾಪಕಿ ಅಥವಾ ರಾಜಕಾರಣಿಯಾಗಿದ್ದರೂ ಸಹ ಅವಳನ್ನು ಕೀಟಲೆ ಮಾಡಲು ಅಥವಾ ಅಪಹಾಸ್ಯ ಮಾಡಲು ಇದನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ” ಎಂದಿದ್ದಾರೆ ಕಂಗನಾ.

ಪಕ್ಷಕ್ಕೆ ಮುಜುಗರ ಉಂಟುಮಾಡುವ ಹೇಳಿಕೆ: 2 ನೇ ಬಾರಿ ಜೆಪಿ ನಡ್ಡಾ- ಕಂಗನಾ ಭೇಟಿ

ಕೇಂದ್ರ ಸರ್ಕಾರದ ಈ ಹಿಂದಿನ ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರ ಬಗ್ಗೆ ಪಕ್ಷಕ್ಕೆ ಮುಜುಗರವಾಗುವ ರೀತಿ ಹೇಳಿಕೆ ನೀಡಿದ್ದ ಸಂಸದೆ ಕಂಗನಾ ರಣೌತ್ ಇಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.

ರೈತರ ಪ್ರತಿಭಟನೆ ಬಗ್ಗೆ ಹೇಳಿಕೆ ನೀಡಿದ್ದ ನಂತರ 2ನೇ ಬಾರಿಗೆ ಜೆಪಿ ನಡ್ಡಾ ಅವರನ್ನು ಕಂಗನಾ ಭೇಟಿ ಮಾಡಿದ್ದಾರೆ.

ಮಂಡಿ ಸಂಸದರಾಗಿರುವ ಕಂಗನಾ, ಡೈಲಿ ದನಿಕ್ ನಲ್ಲಿ ಪ್ರಸಾರವಾಗಿದ್ದ ತಮ್ಮ ಸಂದರ್ಶನದ ತುಣುಕೊಂದನ್ನು ಸೋಮವಾರದಂದು ಹಂಚಿಕೊಂಡಿದ್ದರು. ಬಾಂಗ್ಲಾ ಮಾದರಿಯ ಪರಿಸ್ಥಿತಿ ಭಾರತದಲ್ಲಿ ಎದುರಾಗುತ್ತಿತ್ತು. ಆದರೆ ಇಲ್ಲಿ ಬಲಿಷ್ಠ ನಾಯಕತ್ವವಿದೆ ಎಂದು ಸಂದರ್ಶನದಲ್ಲಿ ಹೇಳಿದ್ದರು.

ಅಷ್ಟೇ ಅಲ್ಲದೇ ಚೀನಾ ಹಾಗೂ ಅಮೇರಿಕ ಪಿತೂರಿಯ ಬಗ್ಗೆಯೂ ಮಾತನಾಡಿದ್ದರು, ಕಂಗನಾ ಹೇಳಿಕೆಗಳಿಗೆ ವಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಕಂಗನಾ ಹೇಳಿಕೆಗಳ ಬೆನ್ನಲ್ಲೆ ಕ್ಷಿಪ್ರ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ, ಕಂಗನಾ ಅವರ ಅಭಿಪ್ರಾಯಗಳನ್ನು ಒಪ್ಪುವುದಿಲ್ಲ, ಪಕ್ಷದ ನೀತಿ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ಆಕೆಗೆ ಅನುಮತಿ ಅಥವಾ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದೆ.

“ಭವಿಷ್ಯದಲ್ಲಿ ಈ ರೀತಿಯ ಯಾವುದೇ ಹೇಳಿಕೆಯನ್ನು ನೀಡದಂತೆ ಭಾರತೀಯ ಜನತಾ ಪಕ್ಷವು ಕಂಗನಾ ರಣೌತ್ ಗೆ ನಿರ್ದೇಶನ ನೀಡಿದೆ” ಎಂದು ಆಡಳಿತ ಪಕ್ಷ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಸಾಮಾಜಿಕ ಸಾಮರಸ್ಯದ ತತ್ವಗಳನ್ನು ಅನುಸರಿಸಲು ಬಿಜೆಪಿ ಬದ್ಧವಾಗಿದೆ ಎಂದು ಹೇಳಿಕೆಯಲ್ಲಿ ಪಕ್ಷ ತಿಳಿಸಿದೆ.

ಜಗನ್ ರೆಡ್ಡಿಗೆ ದೊಡ್ಡ ಆಘಾತ; ವೈಎಸ್‌ಆರ್‌ಸಿಪಿಯ ಇಬ್ಬರು ರಾಜ್ಯಸಭಾ ಸದಸ್ಯರು ರಾಜೀನಾಮೆ

ಹೈದರಾಬಾದ್: ಇಬ್ಬರು YSRCP ರಾಜ್ಯಸಭೆ ಸದಸ್ಯರಾದ ಡಾ. ಬೀಡಾ ಮಸ್ತಾನ್ ರಾವ್ ಜಾಧವ್ ಮತ್ತು ವೆಂಕಟರಮಣ ರಾವ್ ಮೋಪಿದೇವಿ ರಾಜ್ಯಸಭೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ, ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಮಸ್ತಾನ್ ರಾವ್ ಅವರ ಅವಧಿ ಜೂನ್ 2028ರಲ್ಲಿ ಕೊನೆಗೊಳ್ಳಲಿದೆ. ಈ ಮೊದಲು ಟಿಡಿಪಿಯಲ್ಲಿದ್ದ ಅವರು ಮತ್ತೆ ಟಿಡಿಪಿಗೆ ಮರಳುವ ಸಾಧ್ಯತೆಯಿದೆ. ಜೂನ್ 2026ರವರೆಗೆ ಅಧಿಕಾರಾವಧಿ ಇದ್ದ ಮೋಪಿದೇವಿ ಅವರು ಕೂಡ ಟಿಡಿಪಿಗೆ ಸೇರಬಹುದು ಎನ್ನಲಾಗಿದೆ.

ಈ ಎರಡು ರಾಜೀನಾಮೆಗಳ ನಂತರ ರಾಜ್ಯಸಭೆಯಲ್ಲಿ YSRCP ಬಲ 11ರಿಂದ 9ಕ್ಕೆ ಇಳಿದಿದೆ. ಪ್ರಮುಖ ಎನ್‌ಡಿಎ ಮಿತ್ರ ಪಕ್ಷವಾದ ಟಿಡಿಪಿಗೆ ಪ್ರಸ್ತುತ ಮೇಲ್ಮನೆಯಲ್ಲಿ ಯಾವುದೇ ಪ್ರಾತಿನಿಧ್ಯವಿಲ್ಲ. ವರದಿಗಳ ಪ್ರಕಾರ, ಮುಂಬರುವ ಉಪಚುನಾವಣೆಯಲ್ಲಿ ಟಿಡಿಪಿ ಮಸ್ತಾನ್ ರಾವ್ ಅವರನ್ನು ಕಣಕ್ಕಿಳಿಸಬಹುದು. ಆದರೂ ಮೋಪಿದೇವಿ ವೆಂಕಟ ರಮಣ ಅವರು ರಾಜ್ಯಸಭೆಗೆ ಮರಳಲು ಆಸಕ್ತಿ ಹೊಂದಿಲ್ಲ ಎಂದು ವರದಿಯಾಗಿದೆ.

ಈ ಉಪಚುನಾವಣೆಗಳಲ್ಲಿ ಟಿಡಿಪಿ ಗೆದ್ದರೆ, ಆಡಳಿತಾರೂಢ ಎನ್‌ಡಿಎ ರಾಜ್ಯಸಭೆಯಲ್ಲಿ ಇಬ್ಬರು ಹೆಚ್ಚುವರಿ ಸದಸ್ಯರನ್ನು ಗಳಿಸಲಿದೆ. ಮೇಲ್ಮನೆಯಲ್ಲಿ ಬಿಜೆಪಿಯ ಮಿತ್ರಪಕ್ಷಗಳಲ್ಲಿ JD(U), NCP, JD(S), RPI(A), ಶಿವಸೇನೆ, RLD, RLM, NPP, PMK, ತಮಿಳು ಮನಿಲಾ ಕಾಂಗ್ರೆಸ್, ಮತ್ತು UPPL ಸೇರಿವೆ.

ಇದು ಬಿಜೆಪಿಗೆ ಒಳ್ಳೆಯ ಸುದ್ದಿಯಾಗಿದೆ. ಎನ್‌ಡಿಎ ಇತ್ತೀಚೆಗೆ ಮೇಲ್ಮನೆಯಲ್ಲಿ ಬಹುಮತದ ಅಂಕವನ್ನು ಮುಟ್ಟಿದೆ ಮತ್ತು ಇದು ಪ್ರಮುಖ ಶಾಸನದ ಅಂಗೀಕಾರವನ್ನು ಖಚಿತಪಡಿಸಿಕೊಳ್ಳಲು ಅವರಿಗೆ ಸಹಾಯ ಮಾಡುತ್ತದೆ. ಈ ಇಬ್ಬರು ಸಂಸದರು ಟಿಡಿಪಿಗೆ ಬದಲಾದರೆ ಎನ್‌ಡಿಎ ಸಂಖ್ಯಾಬಲ ಮತ್ತಷ್ಟು ಬಲಗೊಳ್ಳಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ