ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸರ್ಕಾರಿ ನೌಕರರು 2ನೇ ಮದುವೆಯಾಗುವುದನ್ನು ನಿರ್ಬಂಧಿಸಿದ ಅಸ್ಸಾಂ ಸರ್ಕಾರ!

Twitter
Facebook
LinkedIn
WhatsApp
ಸರ್ಕಾರಿ ನೌಕರರು 2ನೇ ಮದುವೆಯಾಗುವುದನ್ನು ನಿರ್ಬಂಧಿಸಿದ ಅಸ್ಸಾಂ ಸರ್ಕಾರ!

ದಿಸ್ಪುರ್: ಸರ್ಕಾರಿ ನೌಕರರು (Government Employees) 2ನೇ ಮದುವೆಯಾಗುವುದನ್ನು ಅಸ್ಸಾಂ (Assam) ಸರ್ಕಾರ ನಿರ್ಬಂಧಿಸಿದೆ. ಸರ್ಕಾರಿ ನೌಕರನ ಧರ್ಮ 2ನೇ ಮದುವೆಗೆ (2nd Marriage) ಅನುಮತಿಸಿದರೂ ಸರ್ಕಾರದ ಅನುಮತಿ ಇಲ್ಲದೇ 2ನೇ ಮದುವೆ ಮಾಡಿಕೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

2 ಮದುವೆಗಳಿಂದ ಸರ್ಕಾರಿ ನೌಕರನ ಪಿಂಚಣಿಗಾಗಿ ಇಬ್ಬರು ಪತ್ನಿಯರು ಹೋರಾಟ ಮಾಡುವುದನ್ನು ನಾವು ಗಮನಿಸಿದ್ದೇವೆ. ಅಸ್ಸಾಂನಲ್ಲಿ ಈ ಕಾನೂನು ಮೊದಲೇ ಇತ್ತು. ಅದನ್ನು ಕಠಿಣವಾಗಿ ಜಾರಿಗೆ ನಿರ್ಧಾರ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಬಹುಪತ್ನಿತ್ವವನ್ನು ನಿಷೇಧಿಸುವ ಕಾನೂನು 58 ವರ್ಷಗಳ ಹಿಂದೆ ಅಸ್ಸಾಂನಲ್ಲಿ ಜಾರಿ ಮಾಡಲಾಗಿತ್ತು. ಮೊದಲ ಸಂಗಾತಿಯು ಜೀವಂತವಾಗಿರುವವರೆಗೆ ಸರ್ಕಾರದ ಒಪ್ಪಿಗೆಯಿಲ್ಲದೆ 2ನೇ ಮಹಿಳೆಯನ್ನು ಮದುವೆಯಾಗುವುದನ್ನು ಕಾನೂನು ನಿರ್ಬಂಧಿಸುತ್ತದೆ.

ಮುಸ್ಲಿಮರನ್ನು ಉಲ್ಲೇಖಿಸದೆ ವೈಯಕ್ತಿಕ ಕಾನೂನಿನಿಂದ ಅನುಮತಿ ಪಡೆದ ಪುರುಷರಿಗೂ ಈ ನಿಯಮ ಅನ್ವಯಿಸುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಅದೇ ರೀತಿ ಮಹಿಳಾ ನೌಕರರು ಈ ಮೊದಲು ಮದುವೆಯಾಗಿರುವ ವ್ಯಕ್ತಿಯನ್ನು 2ನೇ ಮದುವೆಯಾಗಬಾರದು ಎಂದು ಸೂಚಿಸಲಾಗಿದೆ. 

ಅಕ್ಟೋಬರ್ 20 ರಂದು ಸಿಬ್ಬಂದಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೀರಜ್ ವರ್ಮಾ ಅವರು ಅಧಿಸೂಚನೆ ಹೊರಡಿಸಿದ್ದು, ಇದು ಗುರುವಾರ ಬೆಳಕಿಗೆ ಬಂದಿದೆ. ಅಸ್ಸಾಂ ನಾಗರಿಕ ಸೇವೆಗಳ (ನಡತೆ) ನಿಯಮಗಳು 1965 ರ ನಿಯಮ 26 ರ ನಿಬಂಧನೆಗಳ ಪ್ರಕಾರ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಅದು ಹೇಳಿದೆ. ಮೇಲಿನ ನಿಬಂಧನೆಗಳ ಅನ್ವಯ ಶಿಸ್ತು ಸಮಿತಿ ಪ್ರಾಧಿಕಾರವು ತಕ್ಷಣದ ಇಲಾಖಾ ಪ್ರಕ್ರಿಯೆಗಳನ್ನು ಪ್ರಾರಂಭಿಸಬಹುದು. ಕಡ್ಡಾಯ ನಿವೃತ್ತಿ ಸೇರಿದಂತೆ ಪ್ರಮುಖ ದಂಡವನ್ನು ವಿಧಿಸಲು ಆದೇಶದಲ್ಲಿ ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ