ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಾದ್ಯಂತ ಕನಿಷ್ಠ 600 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು ;ಸಿಎಂ ಸಿದ್ದರಾಮಯ್ಯ

Twitter
Facebook
LinkedIn
WhatsApp
ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಾದ್ಯಂತ ಕನಿಷ್ಠ 600 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು ;ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಾದ್ಯಂತ ಕನಿಷ್ಠ 600 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಿಸಿದ್ದಾರೆ.

ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ”ಇಂದಿರಾ ಕ್ಯಾಂಟೀನ್‌ನಲ್ಲಿ ಎಲ್ಲರಿಗೂ 5 ರೂ.ಗೆ ಬೆಳಗಿನ ಉಪಾಹಾರ ಮತ್ತು 10 ರೂ.ಗೆ ಊಟ ನೀಡಲಾಗುವುದು ಎಂದರು.

“ನಾವು ಬೆಂಗಳೂರಿನಲ್ಲಿ ಒಟ್ಟು 188 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸುತ್ತಿದ್ದೇವೆ. ವಿಮಾನ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆ ಇತ್ತು. ಹೀಗಾಗಿ ಇಲ್ಲಿ ಎರಡು ಕ್ಯಾಂಟೀನ್ ಆರಂಭಿಸಲಾಗುತ್ತಿದೆ. ಬೆಂಗಳೂರಿನಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಗಳ ಪೈಕಿ ಈಗಾಗಲೇ 40 ಪೂರ್ಣಗೊಂಡಿದ್ದು, ಉಳಿದವು ಪ್ರಗತಿಯಲ್ಲಿವೆ ಎಂದು ಸಿಎಂ ತಿಳಿಸಿದರು.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಅಗತ್ಯವಿದೆ. ಈಗಾಗಲೇ ಒಂದು ಉದ್ಘಾಟನೆಗೊಂಡಿದ್ದು, ಇನ್ನೊಂದು ಇಂದಿರಾ ಕ್ಯಾಂಟೀನ್ ಶೀಘ್ರದಲ್ಲೇ ಬರಲಿದೆ. ಬಡವರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡುವುದು ಇದರ ಉದ್ದೇಶವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಆಹಾರದ ಮೆನು ಕೂಡ ಬದಲಾವಣೆ ಮಾಡಲಾಗಿದ್ದು, ಊಟದ ಹಾಲ್ ವ್ಯವಸ್ಥೆ ಮಾಡಲಾಗಿದೆ ಎಂದರು.

 

ಬೆಂಗಳೂರಿನ ಪ್ರತಿ ವಾರ್ಡ್‌ಗಳಲ್ಲಿ ಹಾಗೂ ರಾಜ್ಯದ ಇತರ ಭಾಗಗಳಲ್ಲಿಯೂ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು. ಹಿಂದಿನ ಸರ್ಕಾರ ಊಟ ನೀಡದೆ ಕೆಲವನ್ನು ಮುಚ್ಚಲಾಗಿದೆ. ಬಡವರು ಹೊಟ್ಟೆ ತುಂಬ ಊಟ ಮಾಡಬೇಕು ಎಂಬ ಕಾರಣಕ್ಕೆ ನಾವು ಈ ಕಾರ್ಯಕ್ರಮವನ್ನು ಪುನರಾರಂಭಿಸಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ