ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Atishi Marlena: ದೆಹಲಿಯ ನೂತನ ಸಿಎಂ ಆಗಿ ಅತಿಶಿ ಪ್ರಮಾಣವಚನ ಸ್ವೀಕಾರ

Twitter
Facebook
LinkedIn
WhatsApp
Atishi Marlena

ನವದೆಹಲಿ: ಹಿರಿಯ ಎಎಪಿ ಶಾಸಕಿ ಅತಿಶಿ (Atishi Marlena) ದೆಹಲಿಯ ಮುಖ್ಯಮಂತ್ರಿಯಾಗಿ ರಾಜ್ ನಿವಾಸದಲ್ಲಿ ಇಂದು ಪದಗ್ರಹಣ ಮಾಡಿದರು. ಅವರು ಐವರು ಸಂಪುಟದ ಸಹೋದ್ಯೋಗಿಗಳು ಕೂಡಾ ಪ್ರಮಾಣ ವಚನ ಸ್ವೀಕರಿಸಿದರು. ಸುಷ್ಮಾ ಸ್ವರಾಜ್, ಶೀಲಾ ದೀಕ್ಷಿತ್ ನಂತರ ಅತಿಶಿ ದೆಹಲಿಯ 3ನೇ ಸಿಎಂ ಆಗಿದ್ದಾರೆ. ಮಮತಾ ಬ್ಯಾನರ್ಜಿ ನಂತರ ಎರಡನೇ ಹಾಲಿ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ.

ಸಾತಂತ್ರ ಬಂದಾಗಿನಿಂದ ದೇಶದ 17 ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. ಅತಿಶಿ (Atishi Marlena) ಸಂಪುಟದಲ್ಲಿ ಸುಲ್ತಾನ್ ಮಿರ್ಜಾ ಕ್ಷೇತ್ರ ಶಾಸಕ ಮುಕೇಶ್ ಅಹ್ಲಾವಾತ್ ಹೊಸಬರಾಗಿದ್ದಾರೆ. ಗೋಪಾಲ್ ರೈ, ಕೈಲಾಶ್ ಗೆಹ್ಲೋಟ್, ಸೌರಾಬ್ ಭಾರದ್ವಾಜ್ ಮತ್ತು ಇಮ್ರಾನ್ ಹುಸೈನ್ ಅವರೊಂದಿಗೆ 4 ಸಚಿವರೊಂದಿಗೆ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಹಿನ್ನಲೆಯಲಲಿ ಸರಳವಾಗಿ ಪದ ಗ್ರಹಣ ಸಮಾರಂಭ ನಡೆಯಿತು. ಸೆಪ್ಟೆಂಬರ್ 26-27 ರಂದು ಎರಡು ದಿನ ದೆಹಲಿ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಆಡಳಿತರೂಢ AAP ಕರೆದಿದ್ದು, ನೂತನವಾಗಿ ಆಯ್ಕೆಯಾಗರುವ ಮುಖ್ಯಮಂತ್ರಿ ಬಹುಮತವನ್ನು ಸಾಬೀತುಪಡಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನಾ ಅತಿಶಿ, ಕೇಜ್ರಿವಾಲ್ ನಿವಾಸಕ್ಕೆ ಮಾತುಕತೆಗಾಗಿ ತೆರಳಿದಿದ್ದರು. ಮಾತುಕತೆ ಬಳಿಕ ಅತಿಶಿ ಮತ್ತಿತರ ಸಚಿವರು, ಪಕ್ಷದ ರಾಷ್ಟ್ರೀಯ ಸಂಚಾಲಕರೊಂದಿಗೆ ರಾಜ್ ನಿವಾಸಕ್ಕೆ ತೆರಳಿದರು.

ದೆಹಲಿ ಕ್ಯಾಬಿನೆಟ್ ಮುಖ್ಯಮಂತ್ರಿ ಸೇರಿದಂತೆ ಗರಿಷ್ಠ 7 ಸಚಿವರನ್ನು ಹೊಂದಬಹುದು. ಆದರೆ, ಎಎಪಿ ಇಲ್ಲಿಯವರೆಗೂ 6 ಸಚಿವರನ್ನು ಮಾತ್ರ ಹೆಸರಿಸಿದೆ. ಏಳನೇ ಸಚಿವರ ಹೆಸರನ್ನು ಇನ್ನೂ ಘೋಷಿಸಿಲ್ಲ. ಆರಂಭದಲ್ಲಿ ಅತಿಶಿ ಮಾತ್ರ ಪ್ರಮಾಣವಚನ ಸ್ವೀಕರಿಸಬೇಕೆಂದು AAP ನಿರ್ಧರಿಸಿತ್ತು. ಆದರೆ ತದನಂತರ ಅವರ ಮಂತ್ರಿಮಂಡಲವೂ ಪ್ರಮಾಣವಚನ ಸ್ವೀಕರಿಸಲಿದೆ ಎಂದು ಹೇಳಲಾಯಿತು.

ದಲಿತ ಸಮುದಾಯಕ್ಕೆ ಸೇರಿದ ಅಹ್ಲಾವತ್ ಮೊದಲ ಬಾರಿಗೆ ಶಾಸಕರಾಗಿದ್ದು, ಸಮಾಜ ಕಲ್ಯಾಣ ಸಚಿವ ರಾಜ್ ಕುಮಾರ್ ಆನಂದ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅವರು ಸೇರ್ಪೆಡೆಯಾಗಿದ್ದಾರೆ. ಆನಂದ್ ಏಪ್ರಿಲ್‌ನಲ್ಲಿ ಕೇಜ್ರಿವಾಲ್ ಸರ್ಕಾರ ಮತ್ತು ಎಎಪಿಗೆ ರಾಜೀನಾಮೆ ನೀಡಿದ್ದರು. ತರುವಾಯ 2024 ರ ಲೋಕಸಭೆ ಚುನಾವಣೆಗೂ ಮುನ್ನಾ ಬಿಜೆಪಿ ಸೇರಿದ್ದರು. ಅಹ್ಲಾವಾತ್ ಪ್ರಸ್ತುತ ಪಕ್ಷದ ರಾಜಸ್ಥಾನ ಘಟಕದ ಸಹ-ಪ್ರಭಾರಿಯಾಗಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿರುವ ಎಎಪಿಗೆ ನಿರ್ಣಾಯಕ ಘಟ್ಟದಲ್ಲಿ ಅತಿಶಿ ಮುಖ್ಯಮಂತ್ರಿಯಾಗಿದ್ದು, ಸಾರ್ವಜನಿಕರ ಕಲ್ಯಾಣಕ್ಕಾಗಿ ಬಾಕಿ ಉಳಿದಿರುವ ಯೋಜನೆಗಳನ್ನು ತ್ವರಿತವಾಗಿ ಅನುಷ್ಟಾನಗೊಳಿಸಬೇಕಾದ ಹೊಣೆ ಅವರ ಮೇಲಿದೆ.

ಕೇಜ್ರಿವಾಲ್ ಅವರನ್ನು ಮತ್ತೆ ದೆಹಲಿ ಸಿಎಂ ಮಾಡುವುದೇ ನಮ್ಮ ಗುರಿ: ಅತಿಶಿ

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅತಿಶಿ ಇಂದು ಮೊದಲ ಪತ್ರಿಕಾಗೋಷ್ಠಿ ನಡೆಸಿದರು. ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ದೆಹಲಿ ಸಿಎಂ ಮಾಡುವುದೊಂದೇ ನನ್ನ ಕೆಲಸ ಎಂದು ಹೇಳಿರುವ ಅತಿಶಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅರವಿಂದ್ ಕೇಜ್ರಿವಾಲ್ ವಿರುದ್ಧ ಪಿತೂರಿ ನಡೆಸಿತು, ಅವರನ್ನು 6 ತಿಂಗಳು ಜೈಲಿನಲ್ಲಿ ಇರಿಸಿತು, ಅವರನ್ನು ನಾಶ ಮಾಡಲು ಪ್ರಯತ್ನಿಸಿತು. ಆದರೆ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿತು. ಇಡಿ ಮತ್ತು ಸಿಬಿಐ ಕೇಂದ್ರ ಸರ್ಕಾರದ ಗಿಳಿಗಳಾಗಿ ಮಾರ್ಪಟ್ಟಿದೆ ಎಂದು ಅತಿಶಿ ಆರೋಪಿಸಿದ್ದಾರೆ.

“ಅರವಿಂದ್ ಕೇಜ್ರಿವಾಲ್ ಅವರು ಜನತಾ ನ್ಯಾಯಾಲಯಕ್ಕೆ ಹೋಗುತ್ತೇನೆ ಎಂದು ಹೇಳಿದರು. ಇನ್ನುಮುಂದೆ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿರುವುದಿಲ್ಲ ಎಂಬುದು ಬಹಳ ಬೇಸರದ ಸಂಗತಿ. ಆದರೆ, ಮುಂದಿನ ವರ್ಷದ ಚುನಾವಣೆಯವರೆಗೆ ಮಾತ್ರ ನಾನು ಮುಖ್ಯಮಂತ್ರಿಯಾಗಿರುತ್ತೇನೆ. ಮತ್ತೆ ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ಗೆದ್ದರೆ ಅರವಿಂದ್ ಕೇಜ್ರಿವಾಲ್ ಅವರೇ ಸಿಎಂ ಆಗುತ್ತಾರೆ. ಈಗ ನಮ್ಮ ಕೆಲಸವೆಂದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ಸಿಎಂ ಮಾಡುವುದು” ಎಂದು ಹೊಸ ದೆಹಲಿ ಸಿಎಂ ಅತಿಶಿ ಹೇಳಿದ್ದಾರೆ.

“ಅರವಿಂದ್ ಕೇಜ್ರಿವಾಲ್ ಬಡವರಿಗೆ ವಿದ್ಯುತ್ ನೀಡಿದ ವ್ಯಕ್ತಿ. ಅವರು ಮಕ್ಕಳಿಗೆ ಶಿಕ್ಷಣ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಇನ್ನೂ ಅನೇಕ ಯೋಜನೆಗಳನ್ನು ಪರಿಚಯಿಸಿದವರು” ಎಂದು ಅತಿಶಿ ಹೇಳಿದರು.

ಇನ್ನು 4 ತಿಂಗಳಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಸಂಕಷ್ಟದಲ್ಲಿರುವ ದೆಹಲಿ ಜನರಿಗಾಗಿ ಕೆಲಸ ಮಾಡುವುದೊಂದೇ ನನ್ನ ಕೆಲಸ. ಬಿಜೆಪಿಯವರು ಯಾವ ಕೆಲಸ ನಿಲ್ಲಿಸಿದರೋ ಆ ಎಲ್ಲಾ ಕೆಲಸಗಳನ್ನು ಮಾಡುತ್ತೇವೆ. ಈಗ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಹೊರಬಂದಿದ್ದಾರೆ ಎಂದು ಅತಿಶಿ ಹೇಳಿದ್ದಾರೆ.

ಅತಿಶಿ ದೆಹಲಿಯ ಮೂರನೇ ಮಹಿಳಾ ಸಿಎಂ ಮತ್ತು ಭಾರತದ 17ನೇ ಮಹಿಳಾ ಮುಖ್ಯಮಂತ್ರಿ ಆಗಿದ್ದಾರೆ. ಅವರು ಇತರ 5 ಸಚಿವರೊಂದಿಗೆ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಪಕ್ಷವು ಘೋಷಿಸಿದ ಹೊಸ ಸಚಿವ ಸಂಪುಟದಲ್ಲಿ ಸುಲ್ತಾನ್‌ಪುರ್ ಮಜ್ರಾ ಶಾಸಕ ಮುಖೇಶ್ ಅಹ್ಲಾವತ್, ಸಚಿವರಾದ ಗೋಪಾಲ್ ರಾಯ್, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್ ಮತ್ತು ಇಮ್ರಾನ್ ಹುಸೇನ್ ಅವರು ಸೇರಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆಯಾದ ಅರವಿಂದ್ ಕೇಜ್ರಿವಾಲ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅತಿಶಿ ಅವರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡಲಾಯಿತು. ಪ್ರಮಾಣ ವಚನ ಸ್ವೀಕರಿಸುವ ಮುನ್ನ ಅತಿಶಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಆಗಮಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ